ವಿಜಯವಾಣಿ ಸುದ್ದಿಜಾಲಹುಬ್ಬಳ್ಳಿ:
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 27ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನ. 14ರಂದು ಬೆಳಗ್ಗೆ 11 ಗಂಟೆಗೆ ಗೋಕುಲ ರಸ್ತೆಯ ಎಚ್ಡಿಬಿಆರ್ಟಿಎಸ್ ಘಟಕದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತಿಯಲ್ಲಿ ಉಸ್ತುವಾರಿ ಸಚಿವ ಸಂತೋಷ ಲಾಡ್ ಉದ್ಘಾಟಿಸುವರು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೂತನ ಬಸ್ಗಳನ್ನು ಲೋಕಾರ್ಪಣೆಗೊಳಿಸುವರು. ಶಾಸಕ ಮಹೇಶ ಟೆಂಗಿನಕಾಯಿ ಅಧ್ಯಕ್ಷತೆ ವಹಿಸುವರು.
ಸಂಸ್ಥೆಯ ಅಧ್ಯಕ್ಷ ಭರಮಗೌಡ (ರಾಜು) ಅಲಗೌಡ ಕಾಗೆ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಜೆ.ಎಂ.ಗಣೇಶ ಅಪಘಾತ ಹಾಗೂ ಅಪರಾಧ ರಹಿತ ಚಾಲಕರಿಗೆ ಬೆಳ್ಳಿ ಪದಕ ವಿತರಿಸುವರು ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ. ತಿಳಿಸಿದ್ದಾರೆ.