17.8 C
Bengaluru
Wednesday, January 22, 2020

ವಾಣಿಜ್ಯ ನಗರಿ ಕಿರೀಟ ಯಾರ ಮುಡಿಗೆ?

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ರಾಣೆಬೆನ್ನೂರ: ರಾಣೆಬೆನ್ನೂರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಸೋಮವಾರ ಹೊರ ಬೀಳಲಿದ್ದು, ವಾಣಿಜ್ಯ ನಗರಿ ಕಿರೀಟ ಯಾರ ಮುಡಿಗೇರಲಿದೆ ಎಂಬುದು ಕುತೂಹಲ ಮೂಡಿಸಿದೆ.

ಕಳೆದ ಒಂದು ತಿಂಗಳಿಂದ ಕ್ಷೇತ್ರದಲ್ಲಿ ರಾಜಕೀಯ ಸಭೆ, ಸಮಾರಂಭ, ಪ್ರಚಾರ, ರೋಡ್ ಶೋ ಭರಾಟೆ, ಮತದಾನ ನಡೆದು ಈಗ ಕೊನೆಯ ಹಂತಕ್ಕೆ ತಲುಪಿದೆ. ಇದೀಗ ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ.

ರಾಜ್ಯದ 14 ಕ್ಷೇತ್ರಗಳಲ್ಲಿ ಅನರ್ಹ ಶಾಸಕರಿಗೆ ಬಿಜೆಪಿಯಿಂದ ಟಿಕೆಟ್ ನೀಡಿದ್ದರೆ, ರಾಣೆಬೆನ್ನೂರ ಕ್ಷೇತ್ರದಲ್ಲಿ ಮಾತ್ರ ಅನರ್ಹ ಶಾಸಕ ಆರ್. ಶಂಕರ ಬದಲು ಅರುಣಕುಮಾರ ಪೂಜಾರ ಅವರಿಗೆ ಟಿಕೆಟ್ ನೀಡಲಾಗಿದೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದರಾದ ಬಿ.ವೈ. ರಾಘವೇಂದ್ರ, ಶಿವಕುಮಾರ ಉದಾಸಿ ಮೊದಲಾದ ನಾಯಕರು 10 ದಿನಗಳ ಕಾಲ ಕ್ಷೇತ್ರದಲ್ಲಿಯೇ ಬೀಡು ಬಿಟ್ಟು ಭರ್ಜರಿ ಪ್ರಚಾರ ಕೈಗೊಂಡಿದ್ದರು.

ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು ಪ್ರತಿಷ್ಠೆಯಾಗಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ. ಕೋಳಿವಾಡ ಅವರಿಗೆ ಅನಿವಾರ್ಯವಾಗಿದೆ. ಆದ್ದರಿಂದ ಕೋಳಿವಾಡರು ‘ಇದು ನನ್ನ ಕೊನೆ ಚುನಾವಣೆ, ದಯವಿಟ್ಟು ಗೆಲ್ಲಿಸಿ’ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಬಾರಿ ವಾತಾವರಣ ನಮ್ಮ ಪರವಾಗಿದೆ. ಆದ್ದರಿಂದ ನಮ್ಮ ಗೆಲುವು ನಿಶ್ವಿತ ಎಂದು ಕಾಂಗ್ರೆಸ್ ಕಾರ್ಯಕರ್ತರು ವಿಶ್ವಾಸದಿಂದ ಹೇಳುತ್ತಿದ್ದಾರೆ.

ಯಾರ ಮುಡಿಗೆ ಕಿರೀಟ…?: ಕ್ಷೇತ್ರದಲ್ಲಿ ಬಿಜೆಪಿಯಿಂದ ಆರ್. ಶಂಕರಗೆ ಟಿಕೆಟ್ ನೀಡಿದ್ದರೆ ಕಾಂಗ್ರೆಸ್ ಗೆಲುವು ಸುಲಭವಿತ್ತು. ಆದರೆ, ಜನರ ನಡುವೆ ಸದಾ ಬೆರೆಯುವ ಹಾಗೂ ಯುವಕರಾಗಿರುವ ಅರುಣಕುಮಾರ ಪೂಜಾರಗೆ ಟಿಕೆಟ್ ನೀಡಿರುವುದು ಕೋಳಿವಾಡರ ನಿದ್ದೆಗೆಡಿಸಿದೆ. ಕೋಳಿವಾಡರು ದಿಗ್ಗಜರಾದರೂ ಅರುಣಕುಮಾರ ಪೂಜಾರ ಬೆನ್ನಿಗೆ ರಾಜಕೀಯ ಮಾಂತ್ರಿಕ ಬಸವರಾಜ ಬೊಮ್ಮಾಯಿ ನಿಂತಿರುವುದು ಕ್ಷೇತ್ರದಲ್ಲಿ ಬಿಜೆಪಿಗೆ ಸಾಕಷ್ಟು ಬಲ ತಂದಿದೆ.

ನಾವು ಗೆದ್ದಾಗಿದೆ. ಆದರೆ, ಅಂತರ ಎಷ್ಟು ಎಂಬುದು ಇಂದು ತಿಳಿದು ಬರಲಿದೆ. ಸಚಿವ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅದಕ್ಕೆ ಪ್ರತಿಫಲ ದೊರೆಯುತ್ತದೆ ಎನ್ನುವ ವಿಶ್ವಾಸವಿದೆ.
| ಅರುಣಕುಮಾರ ಪೂಜಾರ, ಬಿಜೆಪಿ ಅಭ್ಯರ್ಥಿ

ನೂರಕ್ಕೆ ನೂರರಷ್ಟು ಗೆಲುವು ನಮ್ಮದಾಗಲಿದೆ. ಅಷ್ಟು ಅದ್ಭುತವಾಗಿ ನಾವು ಚುನಾವಣೆ ಮಾಡಿದ್ದೇವೆ. ಮತದಾರರು ನಮ್ಮ ಪರ ಇದ್ದಾರೆ. ಇಂದು ಗೊತ್ತಾಗುತ್ತದೆ.
| ಕೆ.ಬಿ. ಕೋಳಿವಾಡ, ಕಾಂಗ್ರೆಸ್ ಅಭ್ಯರ್ಥಿ

ಸರ್ವಜ್ಞ ನಾಡಲ್ಲಿ ದಾಖಲೆ ಸೃಷ್ಟಿಸುವವರಾರು ?

ಸರ್ವಜ್ಞನ ನಾಡು ಹಿರೇಕೆರೂರ ವಿಧಾನಸಭೆ ಕ್ಷೇತ್ರಕ್ಕೆ ಯಾರಾಗಲಿದ್ದಾರೆ ಅಧಿಪತಿ ಎಂಬುದು ಸೋಮವಾರ ನಿರ್ಧಾರವಾಗಲಿದ್ದು, ಕ್ಷೇತ್ರದಲ್ಲಿ ಯಾರೇ ಗೆದ್ದರೂ ದಾಖಲೆ ಸೃಷ್ಟಿಯಾಗಲಿದೆ.

ಕಾಂಗ್ರೆಸ್​ನಿಂದ ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ ಹಾಗೂ ಬಿಜೆಪಿಯಿಂದ ಚಿತ್ರನಟ ಬಿ.ಸಿ. ಪಾಟೀಲ ಅಖಾಡದಲ್ಲಿದ್ದಾರೆ. ಇಬ್ಬರ ನಡುವೆ ಸಮಬಲದ ಪೈಪೋಟಿ ಕಂಡುಬಂದಿದೆ. ಕಳೆದ ಐದಾರು ಚುನಾವಣೆಗಳಲ್ಲಿ ಇಲ್ಲಿ ಯಾರೇ ಗೆದ್ದರೂ ಅಂತರ ಮಾತ್ರ ಅತಿಕಡಿಮೆ. ಹೀಗಾಗಿ ಈ ಬಾರಿಯೂ ತೀವ್ರ ಜಿದ್ದಾಜಿದ್ದಿ ನಡೆದಿದೆ. ಚುನಾವಣೆ ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯ ಬಿ.ಸಿ. ಪಾಟೀಲ ಮುಂದಿದ್ದು, ಮತದಾರರು ಯಾರ ಕಡೆಗೆ ವಾಲಿದ್ದಾರೆ ಎಂಬುದು ಸೋಮವಾರ ಸ್ಪಷ್ಟವಾಗಲಿದೆ.

ನಿರಂತರವಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತ ಬಂದಿದ್ದ ಕಾಂಗ್ರೆಸ್ ಅಭ್ಯರ್ಥಿ ಬಿ.ಎಚ್. ಬನ್ನಿಕೋಡ 2018ರಲ್ಲಿಯೇ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬಂದಿದ್ದರು. ಹೀಗಾಗಿ 2018ರಲ್ಲಿ ಸ್ಪರ್ಧೆ ಮಾಡಿರಲಿಲ್ಲ. ಆದರೆ, ಉಪ ಚುನಾವಣೆಯಲ್ಲಿ ಅನಿವಾರ್ಯ ಎಂಬಂತೆ ಮತ್ತೆ ಸ್ಪರ್ಧೆ ಮಾಡಿದ್ದು, ಒಂದು ವೇಳೆ ಇವರು ಗೆದ್ದರೆ ನಿವೃತ್ತಿ ಅಂಚಿನಲ್ಲಿದ್ದವರನ್ನೂ ಮತದಾರರು ಗೆಲ್ಲಿಸಿದ್ದಾರೆ ಎಂಬ ದಾಖಲೆ ನಿರ್ವಣವಾಗಲಿದೆ.

ಬಿ.ಸಿ. ಪಾಟೀಲ ಗೆದ್ದರೆ ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ಸೇರಿ ಮೂರು ಪಕ್ಷಗಳಿಂದ ಸ್ಪರ್ಧಿಸಿ ಗೆದ್ದಿರುವ ಜಿಲ್ಲೆಯ ಏಕೈಕ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಅಲ್ಲದೆ, ಜಿಲ್ಲೆಯಲ್ಲಿ ಬಿ.ಸಿ. ಪಾಟೀಲ ಹೊಸ ದಾಖಲೆ ನಿರ್ವಿುಸಿದಂತಾಗಲಿದೆ. ಈ ಹಿನ್ನೆಲೆಯಲ್ಲಿ ಹಿರೇಕೆರೂರ ಕ್ಷೇತ್ರ ಈ ಬಾರಿಯ ಉಪ ಚುನಾವಣೆಯಲ್ಲಿ ವಿಶೇಷ ಗಮನ ಸೆಳೆದಿದೆ.

ಜೋಡೆತ್ತಿನ ಕಮಾಲ್!: ಉಪ ಚುನಾವನೆಯಲ್ಲಿ ಬಿ.ಸಿ. ಪಾಟೀಲ ಹಾಗೂ ಯು.ಬಿ. ಬಣಕಾರ ಜತೆಜತೆಯಾಗಿ ಕೆಲಸ ಮಾಡಿದ್ದರು. ಪ್ರಚಾರಕ್ಕೆ ಬಂದಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಬ್ಬರನ್ನು ಜೋಡೆತ್ತು ಎಂಬುದಾಗಿ ಸಂಬೋಧಿಸಿದ್ದರು. ಹೀಗಾಗಿ ಮತದಾರರು ಜೋಡೆತ್ತುಗಳ ಕೆಲಸಕ್ಕೆ ಯಾವ ರೀತಿ ಮನ್ನಣೆ ನೀಡಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...