17.8 C
Bengaluru
Wednesday, January 22, 2020

ವಾಯವ್ಯ ಸಾರಿಗೆಗೆ 727 ಕೋಟಿ ರೂ. ಬಾಕಿ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಹಾನಗಲ್ಲ: ವಾಯವ್ಯ ಸಾರಿಗೆ ಸಂಸ್ಥೆ ಆರ್ಥಿಕ ಸಮಸ್ಯೆಯಿಂದ ನಲುಗುತ್ತಿದ್ದು, ಕಳೆದ ಮೂರು ವರ್ಷಗಳಿಂದ ಸರ್ಕಾರದ ವಿವಿಧ ಯೋಜನೆಗಳಿಂದ ಬರಬೇಕಿರುವ ಸಹಾಯಧನ ಒಟ್ಟು 727 ಕೋಟಿ ರೂ. ಬಾಕಿಯಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್. ಪಾಟೀಲ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಂಸ್ಥೆಯ ಕುಂದು-ಕೊರತೆಗಳ ಕುರಿತು ಜನಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಣ ಬಿಡುಗಡೆಯಾಗಿದ್ದು ಬಿಟ್ಟರೆ, ಮತ್ತೆ ಸಂಸ್ಥೆಗೆ ಹಣ ಬಂದಿಲ್ಲ. ಹೀಗಾಗಿ ಹೊಸ ವಾಹನಗಳ ಖರೀದಿ, ಸಿಬ್ಬಂದಿ ನಿವೃತ್ತಿ ವೇತನ, ಅಪಘಾತ ವಿಮೆ ಪರಿಹಾರ ಬಿಡುಗಡೆಗೆ ಸಮಸ್ಯೆ ಉದ್ಭವಿಸಿದೆ. ಈ ಮಧ್ಯೆ ಬಿಆರ್​ಟಿಎಸ್ ಸಂಸ್ಥೆಯ (ಚಿಗರಿ) ಬಸ್​ಗಳಿಂದಾಗಿ ಪ್ರತಿದಿನ 50 ಲಕ್ಷ ರೂ. ಸಂಸ್ಥೆಗೆ ಆದಾಯ ಕೊರತೆವಾಗುತ್ತಿದೆ. ಆರ್ಥಿಕ ಸಮಸ್ಯೆ ಇದ್ದರೂ, ಜನವರಿ ಹಾಗೂ ಮಾರ್ಚ್​ನಲ್ಲಿ ಹೊಸ ಬಸ್​ಗಳನ್ನು ಖರೀದಿಸಲು ನಿರ್ಧರಿಸಲಾಗಿದೆ ಎಂದರು.

ಶಾಸಕ ಸಿ.ಎಂ. ಉದಾಸಿ ಮಾತನಾಡಿ, ಬಸ್ ನಿಲ್ದಾಣದಲ್ಲಿ ಸಿಸಿ ಕ್ಯಾಮರಾ ಇಲ್ಲದಿರುವುದು ಹಾಗೂ ಭದ್ರತಾ ವ್ಯವಸ್ಥೆ ಕೈಗೊಳ್ಳದಿರುವುದರಿಂದ ಮಹಿಳೆಯರು, ವಿದ್ಯಾರ್ಥಿನಿಯರು ಭಯಪಡುವ ವಾತಾವರಣ ಸೃಷ್ಟಿಸಿದೆ. ರಾತ್ರಿ ವೇಳೆಯಲ್ಲಿ ಅನೈತಿಕ ಚಟುವಟಿಕೆಗಳಿಗೆ ದಾರಿಯಾಗುತ್ತಿವೆ. ಇವೆಲ್ಲವುಗಳಿಗೆ ಕಡಿವಾಣ ಹಾಕಬೇಕಿದೆ. ದ್ವಿಚಕ್ರ ವಾಹನಗಳ ನಿಲುಗಡೆಗೆ ನಿಲ್ದಾಣದ ಎದುರಿನಲ್ಲಿ ಶೆಡ್ ನಿರ್ವಿುಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಘಟಕದ ವ್ಯವಸ್ಥಾಪಕ ವಿ.ಎಸ್. ಜಗದೀಶ ವಿವರ ನೀಡಿ, ಹಾನಗಲ್ಲ ಘಟಕದಲ್ಲಿ 96 ಬಸ್​ಗಳಿದ್ದು, ಈ ವಾಹನಗಳ ನಿರ್ವಹಣೆಗೆ 64 ಹುದ್ದೆಗಳಿದ್ದರೂ, ಕೇವಲ 35 ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಚಾಲಕ-ನಿರ್ವಾಹಕರ ಹುದ್ದೆಗಳೂ ಖಾಲಿಯಿವೆ. ಇನ್ನು 3-4 ತಿಂಗಳ ಅವಧಿಯಲ್ಲಿ ಸಮಸ್ಯೆಗಳಿಗೆ ಪರಿಹಾರ ದೊರೆಯಲಿವೆ ಎಂದರು.

ತಾ.ಪಂ. ಸದಸ್ಯ ಬಸಣ್ಣ ಬೂದಿಹಾಳ, ಮುಖಂಡರಾದ ರಾಜು ಗೌಳಿ, ಶಿವಲಿಂಗಪ್ಪ ತಲ್ಲೂರ, ಕಲ್ಯಾಣಕುಮಾರ ಶೆಟ್ಟರ, ಪದ್ಮನಾಭ ಕುಂದಾಪುರ, ಜಿ.ಎಸ್. ದೇಶಪಾಂಡೆ, ಸದಾನಂದಗೌಡ ಪಾಟೀಲ, ಚಂದ್ರಣ್ಣ ಹರಿಜನ, ಎಂ.ಎಸ್. ಹುಣಸಿಕಟ್ಟಿ, ಸಂಸ್ಥೆಯ ಅಧಿಕಾರಿಗಳಾದ ಎಸ್.ಎಸ್. ಮುಜುಮದಾರ, ಸಿ.ವಿ. ಇಟಗಿ, ಎಸ್. ವಿ. ವಾಡೇಕರ, ಆರ್. ಸರ್ವೆಶ, ಜಿ. ಲೋಕೇಶ, ಶಿವಮೂರ್ತಿ, ಆರ್. ಕೇಶವಮೂರ್ತಿ, ಪಿ.ಎಸ್. ಹಲಗಣ್ಣನವರ, ಅಫ್ತಾಬ ಪಾಳಾ ಇತರರು ಇದ್ದರು.

ವಾಯವ್ಯ ಕರ್ನಾಟಕ ಸಂಸ್ಥೆಯ ವ್ಯಾಪ್ತಿಯಲ್ಲಿ ನಾಲ್ವರು ಸಂಸದರು ಹಾಗೂ 36 ಶಾಸಕರಿದ್ದು, ಶೀಘ್ರದಲ್ಲಿ ಅವರೆಲ್ಲರ ಉಪಸ್ಥಿತಿಯಲ್ಲಿ ಸಭೆ ಕರೆದು ಸಮಸ್ಯೆ ಪರಿಹಾರಕ್ಕೆ ಸಹಕಾರ ಕೋರಲಾಗುವುದು. ಅಕ್ಕಿಆಲೂರು, ಬೆಳಗಾಲಪೇಟೆ, ತಿಳವಳ್ಳಿ ಬಸ್ ನಿಲ್ದಾಣಗಳ ಎದುರು ವಾಣಿಜ್ಯ ಮಳಿಗೆ ನಿರ್ಮಾಣ ಕೈಗೊಳ್ಳಲಾಗುವುದು. ಆರ್ಥಿಕ ಸಂಕಷ್ಟ ಪರಿಹಾರಕ್ಕಾಗಿ ಸರ್ಕಾರ ಬಸ್​ಗಳಿಗೆ ಟೋಲ್ ಫ್ರೀ ಮಾಡಬೇಕು ಎಂದು ಬೇಡಿಕೆ ಸಲ್ಲಿಸಲಾಗಿದೆ.
| ವಿ.ಎಸ್. ಪಾಟೀಲ ಅಧ್ಯಕ್ಷ ವಾಕರಸಾ ಸಂಸ್ಥೆ

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...