ಮೈಸೂರು: ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಾಮನ್ ಸಂಶೋಧನಾ ಸಂಸ್ಥೆಯ 75ನೇ ವಾರ್ಷಿಕೋತ್ಸವ ಹಾಗೂ ಬೆಂಗಳೂರು ಪರಿಸರ ಸಂಘದ 25ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ.
ಅರ್ಬನ್ ಮ್ಯಾನೇಜ್‌ಮೆಂಟ್ ಆ್ಯಂಡ್ ವಾಟರ್ ಕನ್ಸರ್ರ‌್ವೇಶನ್ ವಿಷಯದ ಬಗ್ಗೆ ಒಂದು ದಿನದ ಆನ್‌ಲೈನ್ ಕಾರ್ಯಾಗಾರ ಹಾಗೂ ಸುಸ್ಥಿರ ಭವಿಷ್ಯಕ್ಕಾಗಿ ಹಸಿರು ನಗರಗಳು ವಿಷಯದ ಮೇಲೆ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ ನಡೆಯಲಿದೆ.
ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಮಾತ್ರ ಸ್ಪರ್ಧಿಸಬಹುದಾಗಿದ್ದು, ಪ್ರಬಂಧ ಬರೆದು ಕಳುಹಿಸಲು ಜೂನ್ 1 ಕೊನೆಯ ದಿನವಾಗಿದೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಸಾವಿರ ಪದಗಳಿಗೆ ಮೀರದಂತೆ ಪ್ರಬಂಧಗಳನ್ನು ಬರೆಯಬಹುದಾಗಿದ್ದು, ಒಬ್ಬರು ಒಂದು ಭಾಷೆಯಲ್ಲಿ ಪ್ರಬಂಧವನ್ನು ಬರೆಯಲು ಅವಕಾಶವಿರುತ್ತದೆ.
ಹೆಚ್ಚಿನ ಮಾಹಿತಿ ಮೊ: 9008675123 ಅಥವಾ 9845258894 ಅನ್ನು ಸಂಪರ್ಕಿಸಬಹುದು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ. ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.