ನಾಪೋಕ್ಲು: ಸಮೀಪದ ಕಕ್ಕಬ್ಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಹುತ್ತರಿ (ಪುತ್ತರಿ)ಗೆ ಮುನ್ನಾ ದಿನವಾದ ಶುಕ್ರವಾರ ವಾರ್ಷಿಕ ಕುಂಬ್ಯಾರ್ ಕಲಾಡ್ಚ ಹಬ್ಬವನ್ನು ತಕ್ಕ ಮುಖ್ಯಸ್ಥರು, ಸುತ್ತಮುತ್ತಲಿನ ಭಕ್ತರು ಸೇರಿ ಸಾಂಪ್ರದಾಯಿಕವಾಗಿ ಆಚರಿಸುವುದರೊಂದಿಗೆ ಸಂಪನ್ನಗೊಂಡಿತು.
ಇಗ್ಗುತ್ತಪ್ಪ ಸನ್ನಿಧಿಯಲ್ಲಿ ದೇವತಕ್ಕರಾದ ಪರದಂಡ ಕುಟುಂಬಸ್ಥರ ಎತ್ತುಪೋರಾಟದೊಂದಿಗೆ ದೇವಾಲಯಕ್ಕೆ ತಲುಪಿ ಎತ್ತುಪೋರಾಟವನ್ನು ಒಪ್ಪಿಸಲಾಯಿತು. ನಂತರ ಭಕ್ತಾದಿಗಳಿಂದ ತುಲಾಭಾರ ಸೇವೆ ಸೇರಿದಂತೆ ಹಾಲು ಬಲಿವಾಡು ಹರಕೆ ಇನ್ನಿತರ ಪೂಜೆಗಳನ್ನು ನೆರವೇರಿಸಿದ ಬಳಿಕ ಮಹಾಪೂಜೆ ಜರುಗಿ ಭಕ್ತಾದಿಗಳಿಗೆ ತೀರ್ಥ, ಪ್ರಸಾದ, ಅನ್ನಸಂತರ್ಪಣೆ ನೆರವೇರಿತು. ನಂತರ ದೇವರ ನಡೆಯಲ್ಲಿ ನಿಂತು ತಕ್ಕ ಮುಖ್ಯಸ್ಥರು ನಾಡಿನ ಸುಭಿಕ್ಷ್ಷೆಗಾಗಿ ಪ್ರಾರ್ಥನೆ ಸಲ್ಲಿಸಿದ ಬಳಿಕ ದೇವರ ಪ್ರದರ್ಶನ ಬಲಿ ಜರುಗಿತು.್ತ ಪೋರಾಟದೊಂದಿಗೆ ತಕ್ಕ ಮುಖ್ಯಸ್ಥರು ಭಕ್ತರು ಇಗ್ಗುತ್ತಪ್ಪ ದೇವರ ಆದಿ ಸ್ಥಳವಾದ ಮಲ್ಮ ಬೆಟ್ಟಕ್ಕೆ ಶ್ರದ್ದಾಭಕ್ತಿಯಿಂದ ತೆರಳಿದರು.
ಇದೇ ಸಂದರ್ಭ ಪೇರೂರು ಹಾಗೂ ನೆಲಜಿ ಶ್ರೀ ಇಗ್ಗುತ್ತಪ್ಪ ದೇವಾಲಯದ ತಕ್ಕ ಮುಖ್ಯಸ್ಥರು ಎತ್ತು ಪೋರಾಟದೊಂದಿಗೆ ಮಲ್ಮಕ್ಕೆ ಆಗಮಿಸಿದರು. ಅರ್ಚಕರು ಪೂಜಾಕಾರ್ಯ ನೆರವೇರಿಸಿದ ನಂತರ ಎತ್ತುಪೋರಾಟ ದುಡಿಕೊಟ್ಟ್ ಪಾಟ್ ನೆರವೇರಿತು. ಬಳಿಕ ಎತ್ತುಪೋರಾಟದ ಅಕ್ಕಿಯನ್ನು ಮೂರು ಭಾಗಮಾಡಿ ನೆಲಜಿ, ಪೇರೂರು ಹಾಗೂ ಪಾಡಿ ದೇವಾಲಯದ ತಕ್ಕಮುಖ್ಯಸ್ಥರು ಹಂಚಿಕೊಂಡು ದೇವರ ಕಟ್ಟು ಸಡಿಲಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸಂಜೆ ದೇವಾಲಯದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಕಲಾಡ್ಚ ಸಂಭ್ರಮದಿದ ಜರುಗಿತು. ಸಮೀಪದ ನೆಲಜಿ ಇಗ್ಗುತ್ತಪ್ಪ ದೇವಾಲಯದಲ್ಲಿಯೂ ಕುಂಬ್ಯಾರು ಕಲಾಡ್ಚ ವಾರ್ಷಿಕೋತ್ಸವ ಜರುಗಿತು. ಹಬ್ಬದ ಪ್ರಯುಕ್ತ ಎತ್ತುಪೋರಾಟ, ಹರಕೆ ಇನ್ನಿತರ ಪೂಜೆಗಳನ್ನು ನೆರವೇರಿಸಿದ ಬಳಿಕ ಮಹಾಪೂಜೆ ಜರುಗಿ ಭಕ್ತರಿಗೆ ತೀರ್ಥ ಪ್ರಸಾದ ಅನ್ನಸಂತರ್ಪಣೆ ನೆರವೇರಿತು.
ವಾರ್ಷಿಕ ಕುಂಬ್ಯಾರ್ ಕಲಾಡ್ಚ ಹಬ್ಬ ಸಂಪನ್ನ
![blank](https://www.vijayavani.net/wp-content/plugins/wp-fastest-cache-premium/pro/images/blank.gif)
ಗ್ಯಾಸ್ಗೆ ವಾಸನೆಯೇ ಇಲ್ಲ! ಹೀಗಿದ್ದರೂ ಸಿಲಿಂಡರ್ ಲೀಕ್ ಆಗ್ತಿದೆ ಅಂತ ತಿಳಿಸೋದು ಈ ಕೆಮಿಕಲ್ ಮಾತ್ರ | Gas Leakage
Gas Leakage: ಇಂದು ಪ್ರತಿಯೊಬ್ಬರ ಮನೆಯಲ್ಲಿಯೂ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳನ್ನು ಬಳಕೆ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ…
ಊಟದ ನಂತರ ಸಿಹಿ ತಿನ್ನುವುದು ಒಳ್ಳೆಯದೇ? ವೈದ್ಯರ ಸಲಹೆ..! sweet
sweet: ಸಿಹಿ ತಿಂಡಿ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ... ನಾಲಿಗೆ ಚಪ್ಪರಿಸಿ ಸಿಹಿ ತಿಂಡಿ…
astrology : ಈ ದಿನ ಉಗುರು, ಕೂದಲನ್ನು ಕತ್ತರಿಸಿದ್ರೆ ಕಾದಿದೆ ಸಂಕಷ್ಟ! ಈ ಕೆಲಸಕ್ಕೂ ಇದೆ ಒಳ್ಳೆಯ ದಿನ
astrology: ವಾರದ ಕೆಲವು ದಿನಗಳಲ್ಲಿ ಉಗುರುಗಳನ್ನು ಕತ್ತರಿಸುವುದು ಮತ್ತು ಕೂದಲನ್ನು ಕತ್ತರಿಸುವು ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ. …