ಬೇಲೂರು: ತಾಲೂಕಿನ ಗರ್ಜೆ ಗ್ರಾಮದ ಸಮೀಪ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡಿದ್ದಾನೆ.
ಬಿಕ್ಕೋಡು ಗ್ರಾಮದ ಶೇಖರ್ (38) ಗಾಯಗೊಂಡವ. ಗಂಭೀರ ಗಾಯಗೊಂಡಿರುವ ಆತ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ತಾಲೂಕಿನ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗರ್ಜೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ 7.30 ರ ಸಮಯದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಹಿಂದಿನಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ರಭಸಕ್ಕೆ ಶೇಖರ್‌ಗೆ ತಲೆ ಸೇರಿದಂತೆ ದೇಹದ ಹಲವೆಡೆ ಗಾಯಗಳಾಗಿವೆ. ರಸ್ತೆ ಬದಿಯಲ್ಲಿ ಪ್ರಜ್ಞಾ ಹೀನನಾಗಿ ಬಿದ್ದಿದ್ದನ್ನು ಕಂಡ ಸ್ಥಳೀಯರು ಜಿಲ್ಲಾಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ. ಘಟನೆ ಸಂಬಂಧ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.