More

  ವಿಕಸಿತ ಭಾರತ ಸಂಕಲ್ಪ ಯಾತ್ರೆ ಪ್ರಯೋಜನಕ್ಕೆ ಸಲಹೆ

  ಚಿತ್ರದುರ್ಗ: ಕೇಂದ್ರದ ಹಲವು ಯೋಜನೆಗಳನ್ನು ಅರ್ಹರಿಗೆ ತಲುಪಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆ ಜಿಲ್ಲೆಯ ಎಲ್ಲ ಗ್ರಾಪಂಗಳಿಗೂ ಭೇಟಿ ನೀಡಲಿದೆ ಎಂದು ಲೀಡ್ ಬ್ಯಾಂಕ್ ಹಿರಿಯ ವ್ಯವಸ್ಥಾಪಕ ಎಸ್.ತಿಪ್ಪೇಶ್ ಹೇಳಿದರು.
  ಚಿತ್ರದುರ್ಗ ತಾಲೂಕು ದೊಡ್ಡಸಿದ್ದವ್ವನಹಳ್ಳಿ ಗ್ರಾಪಂ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಉದ್ಘಾಟನಾ ಕಾರ‌್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಾದ್ಯಂತ ನಡೆಯುತ್ತಿರುವ ಈ ಅಭಿಯಾನ ಚಿತ್ರದುರ್ಗ ಜಿಲ್ಲೆಯಲ್ಲಿ ನ.27 ರಿಂದ 2024 ಜನವರಿ 25ರವರೆಗೆ ನಡೆಯಲಿದ್ದು, ಇದರ ಪ್ರಯೋಜನ ಪಡೆದುಕೊಳ್ಳುವಂತೆ ಜನರಿಗೆ ಮನವಿ ಮಾಡಿದರು.
  ಪ್ರಧಾನಮಂತ್ರಿ ಸುರಕ್ಷಾ ಬೀಮಾ ಯೋಜನೆ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಯೋಜನೆ, ಪ್ರಧಾನಮಂತ್ರಿ ಉಜ್ವಲ ಯೋಜನೆ, ಕಿ ಸಾನ್ ಕೆಡಿಟ್ ಕಾರ್ಡ್, ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಸೇರಿದಂತೆ ಕೇಂದ್ರದ ಯೋಜನೆಗಳೆಡೆ ಜಾಗೃತಿ ಮೂಡಿಸಲಾಗುತ್ತಿದೆ. ಕೆಲವು ಯೋಜನೆಗಳಿಗೆ ಸ್ಥಳದಲ್ಲೇ ಅರ್ಹರ ನೋಂದಣಿ ಮಾಡಿಕೊಳ್ಳಲಾಗುತ್ತದೆ ಎಂದರು.
  ವಿವಿಧ ಯೋಜನೆಗಳ ಫಲಾನುಭವಿಗಳಾದ ಶರಣಪ್ಪ, ಮಲ್ಲೇಶ್, ವಾಣಿ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಭಾಗ್ಯಮ್ಮ, ಉಪಾಧ್ಯಕ್ಷೆ ಸುಧಾ, ಹಿರಿಯೂರು ಬಬ್ಬೂರು ಫಾರಂನ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಎಸ್.ಓಂಕಾರಪ್ಪ, ಆರ್ಥಿಕ ಸಾಕ್ಷರತಾ ಕೇಂದ್ರದ ತಿಪ್ಪೇಸ್ವಾಮಿ, ಕರ್ನಾಟಕ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ಡಿ.ಸತೀಶ್, ಪಂಜಾಬ್ ನ್ಯಾಷನಲ್ ಬ್ಯಾಂಕ್ ವ್ಯವಸ್ಥಾಪಕಿ ಬಿ.ಸಿ.ಲಲಿತಾ, ಸಿ ಬ್ಬಂದಿ ಎಚ್.ಎಂ.ಯೋಗಿತಾ ಮತ್ತಿತರರು ಇದ್ದರು. ಈ ಸಂದರ್ಭದಲ್ಲಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಉಜ್ವಲ ಫಲಾನುಭವಿಗಳಿಗೆ ದಾಖಲೆ ಪತ್ರಗಳನ್ನು ಹಸ್ತಾಂತರಿಸಲಾಯಿತು.


  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts