ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:ಮುಡಾ ನಿವೇಶನ ಹಂಚಿಕೆ ಕುರಿತು ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ 10 ಗಂಟೆಗೆ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಿಗ್ಗಾಂವಿ ವಿಧಾನಸಭೆ ಉಪ ಚುನಾವಣೆ ಸಂಬಂಧ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ್ದ ಅವರು ಮಂಗಳವಾರ ಬೆಳಗ್ಗೆ ಮಾಧ್ಯಮ ಗಳಿಗೆ ಈ ಪ್ರತಿಕ್ರಿಯೆ ನೀಡಿದರು.
ಮೊದಲು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಸಿಎಂ ನಿರಾಕರಿಸಿದ್ದರು. ಮಾಧ್ಯಮದವರನ್ನು ಕಂಡು ನೇರವಾಗಿ ಕಾರಿನತ್ತ ತೆರಳಿದರು. ಈ ವೇಳೆ ಲೋಕಾಯುಕ್ತರು ವಿಚಾರಣೆಗೆ ಹಾಜರಾಗುವಂತೆ ನೀಡಿರುವ ನೋಟಿಸ್ ಕುರಿತು ಸುದ್ದಿಗಾರರ ಪ್ರಶ್ನೆಗೆ ಲೋಕಾಯುಕ್ತ ಕಚೇರಿಗೆ ನಾಳೆ ಬೆಳಗ್ಗೆ 10 ಗಂಟೆಗೆ ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದರು.
ಬೇರೆ ವಿಷಯಗಳ ಬಗ್ಗೆ ಪ್ರತಿಕ್ರಿಯೆ ನೀಡದೇ ಶಿಗ್ಗಾಂವಿಗೆ ಪ್ರಚಾರಕ್ಕೆ ತೆರಳಿದರು.