25.1 C
Bangalore
Friday, December 6, 2019

ವಿಚಾರದಲ್ಲಿ ಉದಾರತೆ ಅಗತ್ಯ

Latest News

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ಧಾರವಾಡ:ವಿಚಾರದಲ್ಲಿ ಉದಾರತೆ, ಕೃತಿಯಲ್ಲಿ ಮಾನವೀಯತೆ ಉಳ್ಳವರು ಮಾತ್ರ ಸಮಾಜದ ದೃಷ್ಟಿಯಲ್ಲಿ ದೊಡ್ಡವರಾಗುತ್ತಾರೆ ಎಂದು ಹಿರಿಯ ಸಾಹಿತಿ ರಂಜನಾ ನಾಯಕ ಅಭಿಪ್ರಾಯಪಟ್ಟರು.

ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕೀರ್ತಿಶೇಷ ಪ್ರಲ್ಹಾದ ನರೇಗಲ್ ಮಾಸ್ತರ ದತ್ತಿ ಹಾಗೂ ಗುರುದೇವ ರವೀಂದ್ರನಾಥ ಟ್ಯಾಗೋರ್ ಜನ್ಮದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಲ್ಹಾದ ನರೇಗಲ್ ಅವರು ಎಲ್ಲರನ್ನೂ ಪ್ರೀತಿಸುವ ಹಾಗೂ ಪರರ ಏಳ್ಗೆ ಬಗ್ಗೆ ಚಿಂತಿಸುವ ವ್ಯಕ್ತಿಯಾಗಿದ್ದರು. ಅವರನ್ನು ನಾವೆಲ್ಲ ವಿಧೇಯತೆಯಿಂದ ಕಾಣುತ್ತಿದ್ದೆವು. ಅವಿಭಕ್ತ ಭಾವನೆಯ ಅವರು ತಮಗಿಂತ ಕಿರಿಯರು ತಮ್ಮ ಒಳ್ಳೆಯ ಅಭಿಪ್ರಾಯ, ವಿಚಾರ ತಿಳಿಸಿದಾಗ ಒಪ್ಪಿಕೊಳ್ಳುವ ಹೃದಯ ವೈಶಾಲ್ಯತೆ ಹೊಂದಿದ್ದರು ಎಂದರು.

ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಾಹಿತಿ ಶ್ಯಾಮಸುಂದರ ಬಿದರಕುಂದಿ ಮಾತನಾಡಿ, ನಾಡು-ನುಡಿ ಸೇವಕರಾದ ಪ್ರಲ್ಹಾದ ಮಾಸ್ತರ ಆದರ್ಶ ಶಿಕ್ಷಕರಾಗಿ ವೃತ್ತಿ ಧರ್ಮ ಕಾಪಾಡಿಕೊಂಡಿದ್ದರು. ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಪ್ರೀತಿಸುವ ಗುಣ ಹೊಂದಿದ್ದರು. ಅವರ ಪಾಠ ಬೋಧನೆಯ ಶೈಲಿ, ತಂತ್ರಗಾರಿಕೆ ಅದ್ಭುತವಾಗಿತ್ತು. ಇವರು ಬೇಂದ್ರೆಯವರ ವಿದ್ಯಾರ್ಥಿ ಸಹ ಆಗಿದ್ದರು, ಸದಾ ಅಧ್ಯಯನಶೀಲರಾದ ಇವರು ಜನಮಾನಸದಲ್ಲಿ ಗೌರವ ಸ್ಥಾನ ಹೊಂದಿದ್ದರು ಎಂದರು.

ಹಿರಿಯ ಸಾಹಿತಿ ದಮಯಂತಿ ನರೇಗಲ್ಲ, ಶಂಕರ ಕುಂಬಿ, ಎನ್. ಪಿ. ಭಟ್, ಡಾ. ವೀಣಾ ನರೇಗಲ್ಲ, ಡಾ. ಅರವಿಂದ ಯಾಳಗಿ, ಪ್ರಕಾಶ ಮುಳಗುಂದ, ಲಾರೆನ್ಸ್ ಝುಳಕಿ, ಬಿ. ಎಸ್. ಶಿರೋಳ, ಎಚ್. ಡಿ. ನದಾಫ್, ಮಹಾಂತೇಶ ನರೇಗಲ್ಲ, ಚನ್ನಬಸಪ್ಪ ಅವರಾದಿ, ನರೇಗಲ್ಲ ಕುಟುಂಬಸ್ಥರು, ಇತರರು ಇದ್ದರು. ಪ್ರಕಾಶ ಎಸ್. ಉಡಿಕೇರಿ ಸ್ವಾಗತಿಸಿದರು. ಕೃಷ್ಣ ಜೋಶಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೀರಣ್ಣ ಒಡ್ಡೀನ ನಿರೂಪಿಸಿದರು. ಸಹ ಕಾರ್ಯದರ್ಶಿ ಸದಾನಂದ ಶಿವಳ್ಳಿ ವಂದಿಸಿದರು.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...