ವಿಜೃಂಭಣೆಯ ಬ್ರಹ್ಮೇಶ್ವರ ರಥೋತ್ಸವ

ಹಿರೇಕೆರೂರ: ತಾಲೂಕಿನ ಅಬಲೂರು ಗ್ರಾಮದ ಐತಿಹಾಸಿಕ ಪ್ರಸಿದ್ಧ ಶ್ರೀ ಬಸವೇಶ್ವರ ಮತ್ತು ಎಂ.ಕೆ. ಯತ್ತಿನಹಳ್ಳಿಯ ಶ್ರೀ ಬ್ರಹ್ಮೇಶ್ವರ ದೇವರ ದೊಡ್ಡ ರಥೋತ್ಸವ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.

ಬೆಳಗ್ಗೆ ದೇವರಿಗೆ ರುದ್ರಾಭಿಷೇಕ, ಹೂವಿನ ಅಲಂಕಾರ, ಮಹಾಮಂಗಳಾರತಿ, ತೀರ್ಥಪ್ರಸಾದ ಜರುಗಿತು. ನಂತರ ಗುಗ್ಗುಳ ಕಾರ್ಯಕ್ರಮದೊಂದಿಗೆ ಆರಂಭಗೊಂಡ ದೇವರ ದೊಡ್ಡ ರಥೋತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ದೇವಸ್ಥಾನ ಆವರಣಕ್ಕೆ ಆಗಮಿಸಿತು. ವಿವಿಧ ವಾದ್ಯ ಮೇಳಗಳು ರಥೋತ್ಸವಕ್ಕೆ ಮೆರುಗು ತಂದವು. ವಿವಿಧ ಊರುಗಳಿಂದ ಆಗಮಿಸಿದ್ದ ಭಕ್ತರು ದೇವರ ದರ್ಶನ ಪಡೆದು, ಹರಕೆ ತೀರಿಸಿದರು. ದೇವಸ್ಥಾನ ಸಮಿತಿಯಿಂದ ಭಕ್ತರಿಗೆ ಅನ್ನ ಸಂತರ್ಪಣೆ ಜರುಗಿತು.