ನಿಪ್ಪಾಣಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ(ವಿಟಿಯು) ಅಂತರಕಾಲೇಜು ಪುರುಷರ ಹಗ್ಗಜಗ್ಗಾಟ ಪಂದ್ಯಾವಳಿಯಲ್ಲಿ ವಿಎಸ್‌ಎಂ ಸೋಮಶೇಖರ ಆರ್.ಕೋಠಿವಾಲೆ ತಾಂತ್ರಿಕ ಮಹಾವಿದ್ಯಾಲಯ(ವಿಎಸ್‌ಎಂಎಸ್‌ಆರ್‌ಕೆಐಟಿ) ದ್ವಿತೀಯ ಸ್ಥಾನ ಗಳಿಸಿತು.
ವಿಟಿಯೂ ಮತ್ತು ವಿಎಸ್‌ಎಂಎಸ್‌ಆರ್‌ಕೆಐಟಿ ಆಶ್ರಯದಲ್ಲಿ ಈಚೆಗೆ ವಿಎಸ್‌ಎಂಎಸ್‌ಆರ್‌ಕೆಐಟಿಯಲ್ಲಿ ಪಂದ್ಯಾವಳಿ ಜರುಗಿತು. ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದ ವಿಎಸ್‌ಎಂಎಸ್‌ಆರ್‌ಕೆಐಟಿಯ ಪುರುಷರ ತಂಡವು ತುಮಕೂರಿನ ಅಕ್ಷಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆಯಲಿರುವ ರಾಜ್ಯಮಟ್ಟದ ಪಂದ್ಯಾವಳಿಗೆ ಆಯ್ಕೆಗೊಂಡಿದೆ.
ಪ್ರಶಸ್ತಿ ಪಡೆದ ತಂಡಕ್ಕೆ ವಿದ್ಯಾ ಸಂವರ್ಧಕ ಮಂಡಳದ ಅಧ್ಯಕ್ಷ ಚಂದ್ರಕಾಂತ ಕೋಠಿವಾಲೆ, ಎಂಬಿಎ-ಎಂಸಿಎ ಮಹಾವಿದ್ಯಾಲಯದ ಉಪಾಧ್ಯಕ್ಷ ಪಪ್ಪು ಪಾಟೀಲ, ಕಾರ್ಯದರ್ಶಿ ಸಮೀರ ಬಾಗೇವಾಡಿ, ಸಂಚಾಲಕ ಅವಿನಾಶ ಪಾಟೀಲ, ವಕೀಲ ಸಂಜಯ ಶಿಂತ್ರೆ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಸಿಇಒ ಡಾ.ಸಿದ್ದಗೌಡ ಪಾಟೀಲ, ಪ್ರಾಚಾರ್ಯ ಡಾ.ಉಮೇಶ ಪಾಟೀಲ, ದೈಹಿಕ ಶಿಕ್ಷಣ ಸಂಚಾಲಕ ಪ್ರವೀಣ ಮಾನೆ ಇತರರಿದ್ದರು.