ವಿಡಿಯೋ ಕಾನ್ಪರೆನ್ಸ್ ಮೂಲಕ ಕೈದಿಗಳ ವಿಚಾರಣೆ

ಹುಬ್ಬಳ್ಳಿ: ವಿಚಾರಣಾಧೀನ ಕೈದಿಗಳನ್ನು ಜೈಲಿನಿಂದಲೇ ವಿಡಿಯೋ ಕಾನ್ಪರೆನ್ಸ್ ಮೂಲಕ ಕೋರ್ಟ್​ಗೆ ಹಾಜರುಪಡಿಸುವ ನೂತನ ಪ್ರಕ್ರಿಯೆಗೆ ಹುಬ್ಬಳ್ಳಿ ನ್ಯಾಯಾಲಯದಲ್ಲಿ ಮಂಗಳವಾರ ಚಾಲನೆ ನೀಡಲಾಯಿತು.

ಉಪ ಕಾರಾಗೃಹದಲ್ಲಿರುವ ಸೆಷನ್ ಪ್ರಕರಣದ ವಿಚಾರಣಾಧೀನ ಕೈದಿಗಳನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಗಂಗಾಧರ ಅವರು ವಿಚಾರಣೆ ನಡೆಸುವ ಮೂಲಕ ಚಾಲನೆ ನೀಡಿದರು.

ಕೈದಿಗಳನ್ನು ಪೊಲೀಸ್ ಭದ್ರತೆಯಲ್ಲಿ ನ್ಯಾಯಾಲಯಗಳಿಗೆ ಹಾಜರುಪಡಿಸಬೇಕು. ಭದ್ರತೆಗಾಗಿ ಹೆಚ್ಚಿನ ಸಿಬ್ಬಂದಿ ಲಭ್ಯವಿಲ್ಲದಿದ್ದಾಗ ಅವರನ್ನು ಕೋರ್ಟ್​ಗೆ ಹಾಜರುಪಡಿಸಲು ಸಾಧ್ಯವಾಗುವುದಿಲ್ಲ. ಇದರಿಂದಾಗಿ ವಿಚಾರಣೆಗೆ ತೊಂದರೆ ಉಂಟಾಗುತ್ತದೆ. ಅಂತಹ ಸಂದರ್ಭಗಳಲ್ಲಿ ವಿಡಿಯೋ ಕಾನ್ಪರೆನ್ಸ್ ಸಹಾಯಕ್ಕೆ ಬರುತ್ತದೆ. ಕೆಲವೊಮ್ಮೆ ಸಾಕ್ಷಿಗಳನ್ನೂ ಸಹ ವಿಡಿಯೋ ಕಾನ್ಪರೆನ್ಸ್ ಮೂಲಕ ಹಾಜರುಪಡಿಸಬಹುದು.

ಇದರಿಂದ ಕೋರ್ಟ್​ನ ಸಮಯ ಉಳಿತಾಯವಾಗಿ, ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡಬಹುದು. ನೂತನ ನ್ಯಾಯಾಲಯ ಎಲ್ಲ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದೆ. ಇಲ್ಲಿ 18ರಿಂದ 19 ವಿವಿಧ ಹಂತದ ನ್ಯಾಯಾಲಯಗಳು ಕಾರ್ಯ ನಿರ್ವಹಿಸುತ್ತಿವೆ. ಮುಂದಿನ ದಿನಗಳಲ್ಲಿ ಎಲ್ಲ ನ್ಯಾಯಾಲಯಗಳಿಗೂ ವಿಡಿಯೋ ಕಾನ್ಪರೆನ್ಸ್ ವಿಸ್ತರಿಸಲಾಗುವುದು ಎಂದು ಹಿರಿಯ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಎ.ಕೆ. ನಾಗರಾಜಪ್ಪ ತಿಳಿಸಿದ್ದಾರೆ.

ಹುಬ್ಬಳ್ಳಿ ವಕೀಲರ ಸಂಘದ ಅಧ್ಯಕ್ಷ ಅಶೋಕ ಬಳಿಗಾರ, ಗುರು ಹಿರೇಮಠ ಇತರರು ಇದ್ದರು.

Leave a Reply

Your email address will not be published. Required fields are marked *