ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ನೀಡಿ ಸ್ವಾಗತ

ಹುಣಸೂರು: ನಗರದ ಬಾಲಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2024-25ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಆರಂಭೋತ್ಸವ ನಿಮಿತ್ತ ಶಿಕ್ಷಕರು ಮತ್ತು ಎಸ್‌ಡಿಎಂಸಿ ಸಮಿತಿ ಸದಸ್ಯರು ವಿದ್ಯಾರ್ಥಿಗಳಿಗೆ ಬುಧವಾರ ಗುಲಾಬಿ ಹೂವು ನೀಡಿ ಸ್ವಾಗತಿಸಿದ್ದು ಗಮನ ಸೆಳೆಯಿತು. ಬುಧವಾರ ಶಾಲಾ ಆವರಣದಲ್ಲಿ ಹಬ್ಬದ ಸಂಭ್ರಮ ಕಳೆಕಟ್ಟಿತ್ತು. ಈವರ್ಷದ ಮೊದಲ ದಿನಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳು ಬಣ್ಣಬಣ್ಣದ ಉಡುಗೆ, ತೊಡುಗೆಗಳನ್ನು ತೊಟ್ಟು ಶಿಕ್ಷಕರು ನೀಡಿದ ಗುಲಾಬಿ ಹೂವುಗಳನ್ನು ಹೆಮ್ಮೆಯಿಂದ ಹಿಡಿದು ತರಗತಿಗಳಿಗೆ ತೆರಳಿದ್ದು ವಿಶೇಷವಾಗಿತ್ತು.
ಶಾಲೆ ದತ್ತು ಪಡೆದಿರುವ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ತಾಲೂಕು ಅಧ್ಯಕ್ಷ ಪುರುಷೋತ್ತಮ್ ಮಾತನಾಡಿ, 150 ವರ್ಷದ ಇತಿಹಾಸ ಹೊಂದಿರುವ ಈ ಶಾಲೆ 4 ವರ್ಷದ ಹಿಂದೆ ವಿದ್ಯಾರ್ಥಿಗಳ ಕೊರತೆಯಿಂದಾಗಿ ಮುಚ್ಚುವ ಹಂತ ತಲುಪಿತ್ತು. ಆದರೆ ಎಸ್‌ಡಿಎಂಸಿಯ ಕ್ರಿಯಾಶೀಲತೆ, ಮುಖ್ಯಶಿಕ್ಷಕರ ಕಟಿಬದ್ಧ ಕರ್ತವ್ಯದಿಂದಾಗಿ ಈ ವರ್ಷ 400ಕ್ಕೂಹೆಚ್ಚು ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಂಡಿರುವುದು ಸಾಧನೆ ಎಂದರು.
ಒಸಾಟ್ ಸಂಸ್ಥೆ ಸೇರಿದಂತೆ ಸರ್ಕಾರೇತರ ವಿವಿಧ ಸಂಘಸಂಸ್ಥೆಗಳು ಶಾಲೆಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುತ್ತಿವೆ. ಕರವೇ ದಾನಿಗಳನ್ನು ಕರೆತಂದು ವಿದ್ಯಾರ್ಥಿಗಳ ಕಲಿಕೆಗೆ ಅಗತ್ಯ ಸೌಲಭ್ಯ ಕಲ್ಪಿಸಲು ಪಣತೊಟ್ಟು ನಿಂತಿದೆ. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕಾದ ಅನಿವಾರ್ಯತೆ ಮತ್ತು ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದರು.
ಸಹಕಾರ ಮುಖ್ಯ: ಮುಖ್ಯಶಿಕ್ಷಕ ಮಾದುಪ್ರಸಾದ್ ಮಾತನಾಡಿ, ಶಾಲೆಯಲ್ಲಿ ಶೈಕ್ಷಣಿಕ ವಾತಾವರಣ ವೃದ್ಧಿಸಲು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರೇವಣ್ಣರ ಸಂಪೂರ್ಣ ಬೆಂಬಲ, ಎಸ್‌ಡಿಎಂಸಿ, ಕರವೇ ಮತ್ತು ಸ್ಥಳೀಯ ಸಂಘ ಸಂಸ್ಥೆ ಮುಖಂಡರ ನೆರವು ಕಾರಣವಾಗಿದೆ ಎಂದರು. ಸರ್ಕಾರಿ ಶಾಲೆಗೆ ಬರುವ ಬಡವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸದಾ ಶ್ರಮಿಸುವೆ ಎಂದವರು ಭರವಸೆ ನೀಡಿದರು.

Share This Article

ಕರಗಿದ ಮೇಣದಬತ್ತಿಯಿಂದ ಏನೆಲ್ಲಾ ಉಪಯೋಗ; ಬಿಸಾಡುವ ಬದಲು ಮರುಬಳಕೆ ಮಾಡಿ..

ಮನೆಯಲ್ಲಿ ಉಪಯೋಗಿಸುವ ಎಷ್ಟೋ ವಸ್ತುಗಳು ಕೆಲಕಾಲದ ನಂತರ ಹಳೆಯದಾಗುತ್ತದೆ. ಮತ್ತೆ ಕೆಲವು ಬಳಸಿದ ನಂತರ ನಾಶವಾಗುತ್ತದೆ.…

ಈರುಳ್ಳಿ ಸಿಪ್ಪೆಯನ್ನು ಎಸೆಯುವ ತಪ್ಪನ್ನು ಮಾಡಬೇಡಿ! ಸಿಪ್ಪೆ ವೇಸ್ಟ್​ ಎಂದು ಬಿಸಾಡೋ ಬದಲು ಹೀಗೆ ಮಾಡಿ

ಯಾವುದೇ ಅಡುಗೆ ಮಾಡಿದ್ರು ಈರುಳ್ಳಿ ಬೇಕೆ... ಬೇಕು. ಈರುಳ್ಳಿಯು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ, ಆದರೆ…

ನಿಮ್ಮ ಅಂಗೈನಲ್ಲಿ ತ್ರಿಶೂಲ ಗುರುತು ಇದೆಯಾ ನೋಡಿ… ಇದರರ್ಥ ತಿಳಿದ್ರೆ ನಿಮ್ಮ ಹುಬ್ಬೇರೋದು ಖಚಿತ!

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…