ವಿಜಯಪುರ: ನಗರದ ಪ್ರೇರಣಾ ಶಾಲೆ ವಿದ್ಯಾರ್ಥಿಗಳಿಗೆ ಶನಿವಾರ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕೌಶಲಾಭಿವೃದ್ಧಿ ತರಬೇತಿ ನೀಡಲಾಯಿತು.
ಸಂಸ್ಥೆ ಅಧ್ಯಕ್ಷ ಡಾ.ಅರವಿಂದ ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ಪಠ್ಯಕ್ರಮಕ್ಕೆ ಸೀಮಿತವಾಗಿರದೆ, ವಿದ್ಯಾರ್ಥಿಗಳ ಜ್ಞಾನ ವಿಶಾಲವಾಗಿರಬೇಕು. ಮಕ್ಕಳಲ್ಲಿ ವಿವಿಧ ರೀತಿಯ ಕೌಶಲ, ಜ್ಞಾನ ಬೆಳೆಸಲು ಆಯಾ ವೃತ್ತಿಯಲ್ಲಿ ನಿರತರಾದವರ ಕುರಿತು ನೈಪುಣ್ಯ ಹೊಂದಬೇಕು ಎಂದರು. ಇದೇ ವೇಳೆ ಕೃಷಿ ಕ್ಷೇತ್ರದಲ್ಲಿನ ಚಟುವಟಿಕೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.
ಸುಕೃತ್ ಪಾಟೀಲ ಮಾತನಾಡಿ, ಭವಿಷ್ಯದಲ್ಲಿ ಪ್ರತಿಯೊಂದು ಸಮಸ್ಯೆಯನ್ನೂ ಪರಿಹರಿಸಿಕೊಳ್ಳುವ ಸಾಮರ್ಥ್ಯ ಮಕ್ಕಳಲ್ಲಿ ಬೆಳೆಸಬೇಕು ಎಂದರು. ಶಾಲೆ ಎಲ್ಲ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.