ಶೃಂಗೇರಿ: ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರದಲ್ಲಿ ಬೆಳೆಯಲು ಶಾಲಾ ಹಂತದಲ್ಲಿ ಉತ್ತಮ ಅವಕಾಶವಿದೆ ಎಂದು ಜಯಭಾರತಿ ಶಾಲೆ ಸಮಿತಿ ಉಪಾಧ್ಯಕ್ಷ ಡಾ. ಎಚ್.ಜಿ.ಲಕ್ಷ್ಮೀನಾರಾಯಣ ಹೇಳಿದರು.
ಸಚ್ಚಿದಾನಂದಪುರದಲ್ಲಿರುವ ಜಯಭಾರತಿ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಪ್ರತಿಭಾನ್ವೇಷಣೆ ಮತ್ತು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಪ್ರಮಾಣವಚನ ಕಾರ್ಯಕ್ರಮದಲ್ಲಿ ಮಾತನಾಡಿ, ಶೈಕ್ಷಣಿಕವಾಗಿ ಪ್ರಗತಿ ಸಾಧಿಸುವುದರೊಂದಿಗೆ ಇತರ ಕ್ಷೇತ್ರದಲ್ಲೂ ಸಾಧನೆ ಮಾಡಬೇಕು. ಶಾಲೆಯಲ್ಲಿ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ವಿಭಿನ್ನ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳ ಕ್ರಿಯಾಶೀಲತೆಗೆ ಶಾಲೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದರು.
ಮುಖ್ಯಶಿಕ್ಷಕ ವಿನಯ್ ಮಾತನಾಡಿ, ಈ ವರ್ಷ ಶಾಲೆಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ವಾಹನ ಸೇವೆ ಒದಗಿಸಲಾಗಿದೆ. ಉತ್ತಮ ಅಂಕ ಗಳಿಸುವ ವಿದ್ಯಾರ್ಥಿಗಳನ್ನು ಪುರಸ್ಕರಿಸಲು ವಿಶೇಷ ಯೋಜನೆ ಜಾರಿಗೊಳಿಸಲಾಗಿದೆ ಎಂದರು.
ಶಾಲಾ ಸಂಸತ್ ಚುನಾವಣೆಯಲ್ಲಿ ಪ್ರತಿನಿಧಿಗಳಾಗಿ ಆಯ್ಕೆಯಾದ ಅಪೇಕ್ಷಾ ಮತ್ತು ಪ್ರಣವ್ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮವನ್ನು ಗಂಡಘಟ್ಟ ರಾಮಚಂದ್ರ ಭಟ್ಟ ಉದ್ಘಾಟಿಸಿದರು. ಶಿಕ್ಷಕಿ ಇಂದಿರಾ ವೈದ್ಯ, ಶಿಕ್ಷಕ ಗಣಪತಿ, ಅವನಿ, ಆರ್ಯಿಕಾ, ಅನಘಾ ಇದ್ದರು.
ವಿದ್ಯಾರ್ಥಿಗಳ ಕ್ರಿಯಾಶೀಲತೆಗೆ ಆದ್ಯತೆ

ಒಂದು ತಿಂಗಳು ಸಕ್ಕರೆ ಮತ್ತು ಉಪ್ಪು ಬಿಟ್ಟರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? | Sugar
Sugar: ಸಾಮಾನ್ಯವಾಗಿ ಮನುಷ್ಯನ ದೇಹ ಅನಾರೋಗ್ಯಕ್ಕೊಳಗಾದಾಗ ಆಹಾರದಲ್ಲಿ ಸಕ್ಕೆರೆ ಮತ್ತು ಉಪ್ಪುನಂತಹ ಅಂಶಗಳನ್ನು ತ್ಯಜಿಸಬೇಕಾಗುತ್ತದೆ. ಇದರಿಂದ…
ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits
Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…