More

    ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ

    ಬಳ್ಳಾರಿ: ಇಲ್ಲಿನ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸಿದ್ಧರಾಮೇಶ್ವರ ಶಿವಮೊಗ್ಗ ರಂಗಾಯಣ ವು ಚಿಣ್ಣರಗಾಗಿ ಏರ್ಪಡಿಸಿದ್ದ ಬೇಸಿಗೆ ಶಿಬಿರದಲ್ಲಿ ತರಬೇತಿದಾರರಾಗಿ ಪಾಲ್ಗೊಂಡು ಮಕ್ಕಳಿಗೆ ರಂಗ ಸಜ್ಜಿಕೆ, ವಸ್ತ್ರ ವಿನ್ಯಾಸ , ಹುಲಿ ಕುಣಿತ ಕುರಿತಂತೆ ತರಬೇತಿ ನೀಡಿದ್ದಾರೆ. ಜೆ. ವಿನಯ ಪ್ರಸಾದ ಬಳ್ಳಾರಿಯ ಮಹಾದೇವ ಎಜುಕೇಶನ್ ಆರ್ಟ್ ಮತ್ತು ಕಲ್ಚರಲ್ ಟ್ರಸ್ಟ್ ಆಯೋಜಿಸಿದ್ದ ಬಾರಿಸು ಕನ್ನಡ ಡಿಂಡಿಮ ಕಾರ್ಯಕ್ರಮದಲ್ಲಿ ಗಾಯನ ಪ್ರಸ್ತುತಪಡಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ. ನಾಟಕ ವಿಭಾಗದ ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಚಾರ್ಯ, ನಾಟಕ ವಿಭಾಗದ ಮುಖ್ಯಸ್ಥ ದಸ್ತಗೀರಸಾಬ್ ದಿನ್ನಿ , ಅತಿಥಿ ಉಪನ್ಯಾಸಕ ವಿಷ್ಣು ಹಡಪದ ಹರ್ಷ ವ್ಯಕ್ತಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts