25.1 C
Bangalore
Friday, December 6, 2019

ವಿದ್ಯಾರ್ಥಿ-ಪಾಲಕರ ಗೋಳಾಟ

Latest News

ವಿದ್ಯಾರ್ಥಿಗಳು ಸಮಾಜಮುಖಿ ಜೀವನ ನಡೆಸಿ

ಹುನಗುಂದ: ಮಕ್ಕಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಸ್ವಾಸ್ಥೃ ಸಮಾಜ ಪರಿಕಲ್ಪನೆಯೊಂದಿಗೆ ಸಮಾಜಮುಖಿ ಜೀವನ ನಡೆಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಸಮನ್ವಯಾಧಿಕಾರಿ ಗುರುರಾಜ್...

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಜೊಯಿಡಾ: ತಾಲೂಕಿನ ಕುಂಬಾರವಾಡಾ ಮತ್ತು ಉಳವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದ ಕಾರಣ ಶಾಲೆ- ಕಾಲೇಜುಗಳ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಕುಂಬಾರವಾಡಾದಿಂದ ಉಳವಿ ಮಾರ್ಗದಲ್ಲಿನ ಚಂದ್ರಾಳಿ, ಅಂಬೊಳ್ಳಿ, ಕಾಳಸಾಯಿ ಮಾರ್ತR, ಹಲಕುಂಬಿ, ಮೈನೋಳ, ಕೋಂದರ, ಆಮಶೇತ, ಆಂಬಟಗಾಳಿ, ತಾಡಸೇತ ಸೇರಿ ಹತ್ತಾರು ಹಳ್ಳಿಗಳಿಂದ 84 ವಿದ್ಯಾರ್ಥಿಗಳು ಕುಂಬಾರವಾಡಾ ಸರ್ಕಾರಿ ಪ್ರೌಢ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಬಂದು ಹೋಗುತ್ತಾರೆ. ಇವರು ಸಾರಿಗೆ ಬಸ್​ಗಳನ್ನೇ ಅವಲಂಬಿಸಿದ್ದಾರೆ. ಆದರೆ, ಸಮಯಕ್ಕೆ ಸರಿಯಾಗಿ ಬಸ್ ಇರದ ಕಾರಣ ವಿದ್ಯಾಭ್ಯಾಸಕ್ಕೆ ಹಿನ್ನಡೆಯಾಗುತ್ತಿದೆ.

ಬಸ್ ಏರಲು ಹೆಣಗಾಟ: ಇಷ್ಟೊಂದು ವಿದ್ಯಾರ್ಥಿಗಳಿಗೆ ಇರುವುದು ಒಂದೇ ಬಸ್. ಅದೂ ಬೆಳಗ್ಗೆ 7 ಗಂಟೆಗೆ. ಅನಿವಾರ್ಯವಾಗಿ ಎಲ್ಲ ವಿದ್ಯಾರ್ಥಿಗಳು ಇದೇ ಬಸ್​ನಲ್ಲಿ ಪ್ರಯಾಣಿಸಲು ಹೆಣಗಾಡಬೇಕು. ಕಾಲಿಡಲು ಜಾಗವಿಲ್ಲದ ಬಸ್​ನಲ್ಲೇ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಒಬ್ಬರನ್ನೊಬ್ಬರು ತಳ್ಳಾಡುತ್ತ ಹೋಗಬೇಕು. ಒಂದು ವೇಳೆ ಈ ಬಸ್ ತಪ್ಪಿದರೆ ಅಂದು ಶಾಲೆಗೆ ಗೈರುಹಾಜರಿ ನಿಶ್ಚಿತ. ಸಂಜೆ ಕೂಡ ಮಕ್ಕಳಿಗೆ ಜೊಯಿಡಾ- ಕುಂಬಾರವಾಡಾ ಮಾರ್ಗವಾಗಿ ಉಳವಿಗೆ ಹೋಗಲು ಮಧ್ಯಾಹ್ನ 12 ಗಂಟೆಗೆ ಬರುವ ಹುಬ್ಬಳ್ಳಿ ಉಳವಿ ಬಸ್ ಮಾತ್ರ ಆಧಾರ. ತಪ್ಪಿದರೆ ದಾಂಡೇಲಿಯಿಂದ ಉಳವಿಗೆ ಹೋಗುವ ಬಸ್​ಗೆ ಕಾಯಬೇಕು. ಅದು ಬರುವುದು ಸಂಜೆ 5.30ಕ್ಕೆ. ಒಂದೊಂದು ದಿನ ಅದು ಸಂಜೆ 6 ಗಂಟೆಯ ನಂತರ ಮತ್ತು ಕೆಲವೊಮ್ಮೆ ಬರುವುದೇ ಇಲ್ಲ ಎನ್ನುವುದು ಸ್ಥಳೀಯರ ದೂರು.

ವಿವಿಧ ಗ್ರಾಮಗಳ ಹಿರಿಯರು ಹಾಗೂ ವಿದ್ಯಾರ್ಥಿಗಳು ಬಸ್ ವ್ಯವಸ್ಥೆ ಸರಿಪಡಿಸುವಂತೆ ಅನೇಕ ಬಾರಿ ಜನಪ್ರತಿನಿಧಿಗಳು ಹಾಗೂ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರೂ, ಮೌಖಿಕವಾಗಿ ಬೇಡಿಕೊಂಡರೂ ಪ್ರಯೋಜನವಾಗಿಲ್ಲ.

ನಿತ್ಯ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿಗಳು ಇಷ್ಟೊಂದು ಪರದಾಡಬೇಕಾ? ಸಾಮಾನ್ಯ ಪ್ರಯಾಣಿಕರ ಜತೆಗೆ ನಿತ್ಯ ಓಡಾಡುವ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಶಾಲೆ ಪ್ರಾರಂಭವಾಗುವ ಹಾಗೂ ಬಿಡುವ ಸಮಯಕ್ಕೆ ಹೆಚ್ಚಿನ ಬಸ್ ಸೌಲಭ್ಯ ಒದಗಿಸಬೇಕು ಎಂಬುದು ಈ ಭಾಗದವರ ಒತ್ತಾಸೆಯಾಗಿದೆ.

ಸಂಜೆ 5.30ಕ್ಕೆ ಕುಂಬಾರವಾಡಾ ಮಾರ್ಗವಾಗಿ ಬರುವ ಬಸ್ ವೇಳೆ ಬದಲಾಯಿಸಿದರೆ, ಅದೇ ಬಸ್ ಬೇರೆ ಊರುಗಳಿಗೂ ಹೋಗಿ ಬರುವುದರಿಂದ ಆ ಊರುಗಳ ವೇಳಾಪಟ್ಟಿಯಲ್ಲೂ ತೊಂದರೆಯಾಗುತ್ತದೆ. ಈ ಬಗ್ಗೆ ಅಧಿಕಾರಿಗಳ ಜತೆ ರ್ಚಚಿಸಿ 4.30ಕ್ಕೆ

ಬಸ್ ಬಿಡುವ ಬಗ್ಗೆ ಪ್ರಯತ್ನಿಸುತ್ತೇವೆ.

| ಎಸ್.ಎಂ. ಗರಗ ಡಿಪೊ ಮ್ಯಾನೇಜರ್, ವಾಕರಸಾಸಂ, ದಾಂಡೇಲಿ

ನಾವಂತೂ ಶಿಕ್ಷಣದಿಂದ ವಂಚಿತರಾಗಿದ್ದೇವೆ. ಮಕ್ಕಳಿಗಾದರೂ ಕಲಿಸೋಣ ಎಂದರೆ ವೇಳೆಗೆ ಸರಿಯಾಗಿ ಬಸ್ ಸೌಕರ್ಯ ಇಲ್ಲ.ದುಡಿದು ತಿನ್ನುವ ನಮಗೆ ಪ್ರತಿ ದಿನ ಮಕ್ಕಳ ಬಗ್ಗೆಯೇ ಚಿಂತೆಯಾಗಿದೆ. ಕೂಡಲೆ ಸಂಬಂಧಿಸಿದವರು ವೇಳೆಗೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸಿ ನಮ್ಮ ಮಕ್ಕಳ ಶಿಕ್ಷಣಕ್ಕೆ ದಾರಿ ಮಾಡಿಕೊಡಿ.

| ಪಾಂಡುರಂಗ ಗಾವಂಡೆಕರ

ಕಳಸಾಯಿ, ಪಾಲಕ

ನಿದ್ದೆಗೆಡಿಸಿದ ವ್ಯವಸ್ಥೆ

ಹಾಗೋ ಹೀಗೋ ಮಕ್ಕಳು ಬಸ್ ಹಿಡಿದು ಊರಿಗೆ ತೆರಳುವಷ್ಟರಲ್ಲಿ ರಾತ್ರಿಯಾಗಿರುತ್ತದೆ. ಮಕ್ಕಳು ಬರುವವರೆಗೂ ಪಾಲಕರು ತಮ್ಮೆಲ್ಲ ಕೆಲಸ ಕಾರ್ಯ ಬಿಟ್ಟು ಮುಖ್ಯ ರಸ್ತೆಯಲ್ಲಿ ಕಾಯುತ್ತ ನಿಲ್ಲಬೇಕು. ಏಕೆಂದರೆ, ಅಲ್ಲಿಂದ 2-3 ಕಿ.ಮೀ. ಕಾಡಿನಲ್ಲಿ ನಡೆದು ಮನೆಗೆ ತಲುಪಬೇಕಾಗಿದೆ. ದಟ್ಟ ಕಾಡಿನ ಮಧ್ಯೆ ಕರಡಿ, ಹುಲಿ, ಚಿರತೆ, ಆನೆ, ಕಾಡುಕೋಣ ಹಾಗೂ ವಿಷಜಂತುಗಳ ಓಡಾಟ ಇರುವುದರಿಂದ ವಿದ್ಯಾರ್ಥಿಗಳನ್ನಷ್ಟೇ ಬಿಟ್ಟು ಪಾಲಕರು ನೆಮ್ಮದಿಯಿಂದ ಮನೆಯಲ್ಲಿ ಇರಲಾಗದು. ಸ್ವತಃ ಬಸ್ ನಿಲ್ದಾಣಕ್ಕೆ ತೆರಳಿ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ. ಸಮಯಕ್ಕೆ ಸರಿಯಾಗಿ ಹೆಚ್ಚು ಬಸ್​ಗಳ ಸೌಲಭ್ಯ ಒದಗಿಸಿದರೆ ಮಕ್ಕಳು ಹಾಗೂ ಪಾಲಕರ ಈ ಪರದಾಟ ತಪ್ಪಲಿದೆ.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...