ವಿದ್ಯುತ್ ಕಾಯ್ದೆ ತಿದ್ದುಪಡಿಗೆ ವಿರೋಧ

ಧಾರವಾಡ: ಕೇಂದ್ರ ಸರ್ಕಾರವು 2003ರ ವಿದ್ಯುತ್ ಕಾಯ್ದೆಗೆ ಪ್ರಸ್ತಾಪಿತ ತಿದ್ದುಪಡಿ ತರಲು ಹೊರಟಿರುವುದನ್ನು ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದವರು ನಗರದ ವಿದ್ಯಾಗಿರಿಯ ಹೆಸ್ಕಾಂ ಕಚೇರಿ ಎದುರು ಕಪ್ಪುಪಟ್ಟಿ ಕಟ್ಟಿಕೊಂಡು ಸೋಮವಾರ ಪ್ರತಿಭಟನೆ ನಡೆಸಿದರು. ವಿದ್ಯುತ್ ನಿಗಮದಲ್ಲಿ ಖಾಸಗೀಕರಣ ಮಾಡುತ್ತಿರುವುದು ಕಾರ್ವಿುಕ ವಿರೋಧಿ ನೀತಿಯಾಗಿದೆ. ಇದರಿಂದ ತಮಗೆ ತೊಂದರೆಯಾಗುತ್ತದೆ. ಹೀಗಾಗಿ ವಿದ್ಯುತ್ ಕಾಯ್ದೆಯಲ್ಲಿ ತಿದ್ದುಪಡಿ ತರುವುದು ಬೇಡ ಎಂದು ಒತ್ತಾಯಿಸಿದರು.

ಹುಬ್ಬಳ್ಳಿ ವರದಿ: ಎಐಯುಟಿಯುಸಿ, ಕರ್ನಾಟಕ ವಿದ್ಯುತ್ ಸರಬರಾಜು ಕಂಪನಿಗಳ ಗುತ್ತಿಗೆ ನೌಕರರ ಸಂಘ ಹಾಗೂ ಹೆಸ್ಕಾಂ ಗುತ್ತಿಗೆ ನೌಕರರ ಸಂಘದ ವತಿಯಿಂದ ನೌಕರರು ಕಪ್ಪುಪಟ್ಟಿ ಧರಿಸಿ ಸೋಮವಾರ ಪ್ರತಿಭಟನೆ ನಡೆಸಿದರು. ನಂತರ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದರು. ವಿದ್ಯುತ್ ಬಿಲ್ 2020 ರದ್ದುಗೊಳಿಸಬೇಕು. ವಿದ್ಯುತ್ ವಲಯದ ಖಾಸಗೀಕರಣ ಕೈಬಿಡಬೇಕು. ಏಪ್ರಿಲ್ ತಿಂಗಳಿನಿಂದ ಪರಿಷ್ಕೃತ ವೇತನ ಜಾರಿಯಾಗಬೇಕು. ಕೋವಿಡ್ 19 ಅವಧಿಯಲ್ಲಿ ಹೆಚ್ಚುವರಿ ವೇತನ ನೀಡಬೇಕು ಹಾಗೂ ವಿಶೇಷ ಪರಿಹಾರ ಪ್ಯಾಕೇಜ್ ಘೊಷಿಸಬೇಕು. ಲಾಕ್​ಡೌನ್ ಅವಧಿಯಲ್ಲಿ ಪಿಎಫ್ ನೌಕರರ ಪಾಲಿನ ಕಂತು ಕಡಿತಗೊಳಿಸದೇ ವೇತನದಲ್ಲಿ ಸೇರಿಸಿ ಪಾವತಿಸಬೇಕು. ಎಲ್ಲ ಗುತ್ತಿಗೆ ನೌಕರರ ಸೇವೆ ಕಾಯಂಗೊಳಿಸಬೇಕು. ಗುತ್ತಿಗೆ ಕಾರ್ವಿುಕರನ್ನು ವಜಾಗೊಳಿಸಬಾರದು ಸೇರಿ ವಿವಿಧ ಹಕ್ಕೊತ್ತಾಯ ಮಂಡಿಸಲಾಯಿತು ಎಂದು ಎಐಯುಟಿಯುಸಿ ಮುಖಂಡ ರಮೇಶ ಹೊಸಮನಿ ತಿಳಿಸಿದ್ದಾರೆ.

Share This Article

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…

ಹಾವು ಕಚ್ಚಿದಾಗ ಮಾಡುವ ಈ ಒಂದು ತಪ್ಪಿನಿಂದ ಪ್ರಾಣ ಹೋಗುತ್ತೆ ಎಚ್ಚರ! ಈ ರೀತಿ ಮಾಡೋದನ್ನು ತಪ್ಪಿಸಿ | Snakes

ಕೊಲ್ಲಂ: ಹಾವುಗಳು ( Snakes ) ಕಚ್ಚಿದ ಸಂದರ್ಭದಲ್ಲಿ ಯಾವ ಹಾವು ಕಚ್ಚಿತ್ತು ಎಂಬುದನ್ನು ತಿಳಿದುಕೊಳ್ಳಲು…