
ಮಮದಾಪುರ: ಗೋಕಾಕ ತಾಲೂಕಿನ ಕೊಳವಿ ಗ್ರಾಮದ ರೂಪಾ ಕರೆಪ್ಪ ಕರೆನ್ನವರ (29) ವಿದ್ಯುತ್ ತಗುಲಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಬೆಳಗ್ಗೆ 9 ಗಂಟೆಗೆ ಬಟ್ಟೆ ತೊಳೆದು ಮನೆಯ ಹಿತ್ತಲಿನಲ್ಲಿ ಅಳವಡಿಸಿದ್ದ ಕಬ್ಬಿಣದ ರಾಡ್‌ಗೆ ಬಟ್ಟೆಗಳನ್ನು ಹಾಕುತ್ತಿದ್ದಾಗ ರಾಡ್‌ಗೆ ತಾಗಿದ ವಿದ್ಯುತ್ ಮಹಿಳೆಗೂ ಶಾಕ್ ಹೊಡೆದಿದೆ. ತಕ್ಷಣ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.
ಮೃತರಿಗೆ ಪತಿ, ಪುತ್ರ, ಪುತ್ರಿ ಇದ್ದಾರೆ. ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.