Thursday, 15th November 2018  

Vijayavani

ಸಚಿವ ಸ್ಥಾನಕ್ಕಾಗಿ ಬಳ್ಳಾರಿ ಶಾಸಕರ ಲಾಬಿ - ತುಕಾರಾಂ ಸೇರಿದಂತೆ ಐವರ ಪೈಪೋಟಿ        RSS ಬೈಠಕ್​​ನಲ್ಲಿ ರಾಮಮಂದಿರ ಪ್ರತಿಧ್ವನಿ-ಶಬರಿಮಲೆ ಹೋರಾಟದಿಂದ ಹಿಂದೆ ಸರಿಯಲ್ಲ-ಷಾ ಸಮ್ಮುಖದಲ್ಲಿ ನಿರ್ಧಾರ        KRS ಬಳಿ 125 ಅಡಿ ಎತ್ತರದ ಕಾವೇರಿ ಮಾತೆ ಸ್ಟ್ಯಾಚ್ಯೂ ನಿರ್ಧಾರ-ಡಿಕೆಶಿ ನೇತೃತ್ವದ ಸಮಿತಿಯ ತೀರ್ಮಾನ        ರವಿ ಕೊಲೆ ಹಿಂದೆ ಸೈಲೆಂಟ್ ಸುನಿಲನ ನೆರಳು - ತುಮಕೂರು ಡಾಬಾದಲ್ಲೇ ನಡೆದಿತ್ತು ಹಂತಕ ಮೀಟಿಂಗ್        ತಮಿಳುನಾಡಿನಲ್ಲಿ ಗಜ ಆರ್ಭಟ-ಸಮುದ್ರದಲ್ಲಿ ಅಲೆಗಳ ಅಬ್ಬರ-ಬೆಂಗಳೂರಿನ ಹಲವೆಡೆ ಮಳೆ ಸಾಧ್ಯತೆ        ದೀಪ್​-ವೀರ್​​ ಕಲ್ಯಾಣೋತ್ಸವ-ನಿನ್ನೆ ಕೊಂಕಣಿ, ಇಂದು ಸಿಂಧಿ ಸ್ಟೈಲ್​ ಕಲ್ಯಾಣ-ಇಟಲಿಯಲ್ಲಿ ಅದ್ದೂರಿ ವಿವಾಹ       
Breaking News

ವಿದ್ಯುತ್ ತಗುಲಿ ಹಸು ಕರುವಿನೊಂದಿಗೆ ರೈತ ಸಾವು

Friday, 13.07.2018, 3:17 AM       No Comments

ಚನ್ನರಾಯಪಟ್ಟಣ: ವಿದ್ಯುತ್ ತಂತಿ ತಗುಲಿ ಹೋಬಳಿಯ ಅಂಬಲೀಪುರ ನಾರಾಯಣಸ್ವಾಮಿ (45) ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ಬುಧವಾರ ಮಳೆ ಸುರಿದ ಹಿನ್ನೆಲೆ ಮನೆ ಸಮೀಪವಿದ್ದ ವಿದ್ಯುತ್ ಕಂಬದಿಂದ ಮುಳ್ಳಿನ ತಂತಿಬೇಲಿಗೆ ವಿದ್ಯುತ್ ಹರಿದಿದೆ. ಇದನ್ನು ತಿಳಿಯದೆ ಕಟ್ಟಿದ್ದ ಹಸು ಹಾಗೂ ಕರುವಿಗೆ ವಿದ್ಯುತ್ ಸ್ಪರ್ಶವಾಗಿದೆ. ಹಸು-ಕರು ರಕ್ಷಣೆಗೆ ಮುಂದಾದ ನಾರಾಯಣಸ್ವಾಮಿಗೂ ವಿದ್ಯುತ್ ತಗಿಲು ಹಸು, ಕರುವಿನೊಂದಿಗೆ ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದೆ.

ಸ್ಥಳಕ್ಕೆ ತಹಸೀಲ್ದಾರ್ ರಾಜಣ್ಣ ಪರಿಶೀಲಿಸಿದರು. ಬೆಸ್ಕಾಂ ಅಧಿಕಾರಿಗಳಿಂದ ಸ್ಥಳ ಪರಿಶೀಲಿಸಿದ ಬಳಿಕ ರೈತನ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

ರಾಜಸ್ವ ನಿರೀಕ್ಷಕ ವೇಣುಗೋಪಾಲ್, ಸಬ್ ಇನ್​ಸ್ಪೆಕ್ಟರ್ ನಂದೀಶ್, ಪಶು ಆರೋಗ್ಯಾಧಿಕಾರಿ ಹಾಗೂ ಬೆಸ್ಕಾಂ ಅಧಿಕಾರಿಗಳು ಇದ್ದರು.

Leave a Reply

Your email address will not be published. Required fields are marked *

Back To Top