ವಿದ್ಯುತ್ ಸಮಸ್ಯೆ ನಿವಾರಣೆಗೆ ಪಟ್ಟು

ಕೋಲಾರ: ತಾಲೂಕಿನ ನರಸಾಪುರದ ನಾಡ ಕಚೇರಿಯಲ್ಲಿ ವಿದ್ಯುತ್ ಸಮಸ್ಯೆಯಿಂದ ಸಾರ್ವಜನಿಕರಿಗೆ, ರೈತರ ಕೆಲಸಗಳಿಗೆ ಅಡ್ಡಿಯಾಗಿದ್ದು, ಸಮಸ್ಯೆ ನಿವಾರಿಸಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಸಮಿತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ನಾಡ ಕಚೇರಿಯಲ್ಲಿ ವಿದ್ಯುತ್ ಅಭಾವದಿಂದ ಪಹಣಿ ಪಡೆಯಲು ರೈತರು ಪರದಾಡುವಂತಾಗಿದೆ. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಕಾಲಕ್ಕೆ ಸಿಗುತ್ತಿಲ್ಲ ಎಂದು ಸಂಘದ ಕಾರ್ಯಕರ್ತರು ದೂರಿದರು.

ನಾಡಕಚೇರಿಯಲ್ಲಿ ಇರುವ ಯುಪಿಎಸ್ ಕೆಲಸ ಮಾಡುತ್ತಿಲ್ಲ, ಕಂಪ್ಯೂಟರ್ ವಿಭಾಗದ ಸಿಬ್ಬಂದಿ ಕೆಲಸವಿಲ್ಲದೆ ಕೈಕಟ್ಟಿ ಕೂರುವಂತಾಗಿದೆ ಎಂದು ಆರೋಪಿಸಿದರು.

ಮನವಿ ಸ್ವೀಕರಿಸಿದ ಗ್ರೇಡ್ 2 ತಹಸೀಲ್ದಾರ್ ಸುಜಾತಾ, ವಿದ್ಯುತ್ ಸಮಸ್ಯೆ ನಿವಾರಿಸಿ ಸಾರ್ವಜನಿಕರಿಗೆ ಅಗತ್ಯ ಸೇವೆ ಒದಗಿಸುವುದಾಗಿ ಭರವಸೆ ನೀಡಿದರು.

ಸಂಘಟನೆ ಜಿಲ್ಲಾಧ್ಯಕ್ಷ ಕಲ್ವಮಂಜಲಿ ರಾಮುಶಿವಣ್ಣ, ಪ್ರಧಾನ ಕಾರ್ಯದರ್ಶಿ ಜಿ. ನಾರಾಯಣಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ನಂದಕುಮಾರ್, ಎಲ್.ಎನ್. ಬಾಬು, ಮಣಿ, ಗೌರವಾಧ್ಯಕ್ಷ ಕೆಂಬೋಡಿ ಕೃಷ್ಣೇಗೌಡ, ತೇರಹಳ್ಳಿ ಕೃಷ್ಣಪ್ಪ, ವೇಮಗಲ್ ಬಹದ್ದೂರ್ ಖಾನ್, ದೊಡ್ಡಕುರುಬರಹಳ್ಳಿ ಶಂಕರಪ್ಪ, ಅಬೀದ್ ಖಾನ್, ಪಿರ್ದೋಸ್, ಕದಿರೇನಹಳ್ಳಿ ಶ್ರೀನಿವಾಸ್ ಪ್ರತಿಭಟನೆಯಲ್ಲಿದ್ದರು.

Leave a Reply

Your email address will not be published. Required fields are marked *