21 C
Bengaluru
Thursday, January 23, 2020

ವಿಮರ್ಶಾ ಲೋಕಕ್ಕಿದೆ ವೈಕಲ್ಯ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ತುಮಕೂರು: ವಿಮರ್ಶಾ ಲೋಕಕ್ಕೆ ಅಂಗವೈಕಲ್ಯವಿದೆ. ಹಾಗಾಗಿ, ಕೆ.ಬಿ.ಸಿದ್ದಯ್ಯ ಸೇರಿ ಸಾಕಷ್ಟು ಸಾಹಿತಿಗಳ ಕಾವ್ಯಕ್ಕೆ ನಿರೀಕ್ಷಿತ ಮನ್ನಣೆ ಸಿಗಲಿಲ್ಲ ಎಂದು ಸಾಹಿತಿ ನಾಡೋಜ ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.

ತುಮಕೂರು ವಿವಿ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಬಂಡಾಯ ಸಾಹಿತ್ಯ ಸಂಘಟನೆ ಹಾಗೂ ಕಾಲೇಜು ಕನ್ನಡ ಅಧ್ಯಾಪಕರ ಒಕ್ಕೂಟದಿಂದ ಬುಧವಾರ ಆಯೋಜಿಸಿದ್ದ ‘ಕೆ.ಬಿ.ಸಿದ್ದಯ್ಯ: ಕಾವ್ಯ ಗೌರವ’ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿಮರ್ಶಾಲೋಕ ಅರ್ಥ ಮಾಡಿಸಿಕೊಡಲು ಸಾಧ್ಯವಾಗದ ಕಾವ್ಯದ ರಚನಾ ಸ್ವರೂಪ ತಿಳಿಸಿಕೊಡಬೇಕು, ಸಾಹಿತ್ಯ ರಂಗದಲ್ಲಿ ಸಿದ್ದಯ್ಯ ಅವರಿಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ ಎಂದಾದರೆ ಅದಕ್ಕೆ ವಿಮರ್ಶಾ ಲೋಕದ ರಾಜಕೀಯವೇ ಕಾರಣ ಎಂದರು.

ರಾಜ್ಯದಲ್ಲಿ ಬಂಡಾಯ ಸಾಹಿತ್ಯ ಸಂಘಟನೆ ಕಟ್ಟಿದ ಸಂದರ್ಭದಲ್ಲಿ ತುಮಕೂರು ಜಿಲ್ಲಾ ಸಂಚಾಲಕರಾಗಿದ್ದ ಕೆ.ಬಿ.ಸಿದ್ದಯ್ಯ ಸಂಘಟಕರಾಗಿದ್ದರು. ಬಂಡಾಯ ಸಂಘಟನಾತ್ಮಕ ಕ್ರಿಯೆಯಿಂದ ನಮ್ಮ ಸಂಬಂಧ ನಡೆದಿತ್ತು ಎಂದು ಸ್ಮರಿಸಿದರು.

ಸಿದ್ದಯ್ಯ ಅವರ ಕಾವ್ಯದಲ್ಲಿ ಸಾಮಾಜಿಕ ನ್ಯಾಯಕ್ಕೆ ಮನ್ನಣೆ ಇತ್ತು. ದಲಿತ ಅಥವಾ ಶೋಷಿತ ಮೂಲದವರು ಕಾವ್ಯ ಬರೆದವರು ಸಾಕಷ್ಟು ಜನವಿದ್ದರೂ ಸಿದ್ದಯ್ಯ ಕಾವ್ಯ ಓದಿದಾಗ ಶೋಷಿತರಿಗೆ ಬಂಡೇಳಬೇಕು ಎನಿಸದಿರದು ಎಂದರು.

ಸಾವನ್ನು ಮಣಿಸುವ ಸರ್ವಾಧಿಕಾರಿ ಜಗತ್ತಿನಲ್ಲಿಲ್ಲ, ಸಾವಿಗೆ ಸಾವಿಲ್ಲ, ನಮ್ಮನ್ನು ಅಗಲಿರುವ ಕೆ.ಬಿ.ಸಿದ್ದಯ್ಯ ಅವರು ರಚಿಸಿದ್ದು ಭೂತಕಾಲದಲ್ಲಿ ಹೂತುಹೋಗುವ ಕಾವ್ಯವಲ್ಲ. ಪ್ರಗತಿಪರ ಲೋಕದ ಚಾರಿತ್ರಿಕ ಐತಿಹ್ಯಗಳು, ಪುರಾಣಗಳ ಚಾರಿತ್ರಿಕ ಶೋಧ ನಡೆಸುವ ಸಮಕಾಲೀನ ಪರಿಭಾಷೆ ಅವರ ಸಾಹಿತ್ಯದಲ್ಲಿದೆ ಎಂದು ಹೇಳಿದರು.

ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ಮಾತನಾಡಿ, ಕೆ.ಬಿ.ಸಿದ್ದಯ್ಯ ವಾಸ್ತವಕ್ಕೆ ಒತ್ತುಕೊಟ್ಟು ಬದುಕಿದವರು, ಸದಾ ಕ್ರಿಯಾಶೀಲರಾಗಿದ್ದ ಅವರಿಗೆ ವಾಸ್ತವದ ಅರಿವಿತ್ತು. ಅವರ ಕ್ರಿಯಾಶೀಲತೆ, ನೇರ ನಡೆ-ನುಡಿಯನ್ನು ನಾವು ಅನುಸರಿಸುವ ಮೂಲಕ ಅವರಿಗೆ ನಮನ ಸಲ್ಲಿಸಬಹುದು ಎಂದರು.

ವಿಮರ್ಶಕರಾದ ಕೆ.ಪಿ.ನಟರಾಜು, ಡಾ.ಅರುಂಧತಿ, ಡಾ.ತಾರಣಿ ಶುಭಾದಾಯಿನಿ, ಗಂಗರಾಜಮ್ಮ ಸಿದ್ದಯ್ಯ, ಪ್ರಾಧ್ಯಾಪಕ ಡಾ.ಶಿವಲಿಂಗಮೂರ್ತಿ, ಓ.ನಾಗರಾಜು, ನಾಗಭೂಷಣ ಮತ್ತಿತರರು ಇದ್ದರು.

ಧಮನಿತರ ದನಿ ಕೆ.ಬಿ.ಅವರ ಕಾವ್ಯದ ದನಿ ಶಕ್ತಿಯೂ ಆಗಿದೆ, ನಿಘಂಟಿನ ಅರ್ಥದಲ್ಲಿ ಕಾವ್ಯ ನಿಲ್ಲುವುದಿಲ್ಲ. ಇವುಗಳನ್ನು ಅರ್ಥಮಾಡಿಕೊಳ್ಳುವ ಕಾವ್ಯನ್ಯಾಯ ಸಿದ್ದಯ್ಯನವರಿಗೆ ಸಿಗಲಿಲ್ಲ.

ನಾಡೋಜ ಬರಗೂರು ರಾಮಚಂದ್ರಪ್ಪ

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...