ಬೆಳಗಾವಿ: ಕಾಂಗ್ರೆಸ್ ಯುವ ಮುಖಂಡ ಮೃಣಾಲ ಹೆಬ್ಬಾಳ್ಕರ್ ಸೋಮವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧೆಡೆ ತೆರಳಿ ಸರ್ಕಾರಿ ಶಾಲೆಗಳ ಸ್ಥಿತಿಗತಿ ಪರಿಶೀಲಿಸಿದರು.
ಗ್ರಾಮಸ್ಥರು, ಶಿಕ್ಷಕರು ಹಾಗೂ ಮಕ್ಕಳೊಂದಿಗೆ ಮಾತನಾಡಿ, ಸಮಸ್ಯೆಗಳನ್ನು ಆಲಿಸಿ, ಶೀಘ್ರ ಸ್ಪಂದಿಸುವ ಭರವಸೆ ನೀಡಿ ದರು. ಬಾಕನೂರ ಗ್ರಾಮದ ಹಿರಿಯ ಮರಾಠಿ ಪ್ರಾಥ ಮಿಕ ಶಾಲೆಗೆ ಭೇಟಿ ನೀಡಿ, ಶಾಲೆಯ ಕುಂದು-ಕೊರತೆ ಆಲಿಸಿ, ಸೌಕರ್ಯ ಒದಗಿಸುವ ಭರವಸೆ ನೀಡಿದರು.
ಗ್ರಾಮದ ಅಂಗನವಾಡಿ ಕೇಂದ್ರಕ್ಕೂ ಭೇಟಿ ನೀಡಿ, ಮಕ್ಕಳ ಆರೋಗ್ಯ ಹಾಗೂ ಮಕ್ಕಳಿಗೆ ಪೂರೈಸುವ ಆಹಾರದ ಬಗ್ಗೆ ಮಾಹಿತಿ ಪಡೆದರು. ಮನೋಹರ ಬೆಳಗಾಂವ್ಕರ್, ಪಾಂಡು ನಾಯಿಕ, ನಿಂಗು ಕುಲಮ್, ಅಮೂಲ ಮೆನಸೆ, ಸುರೇಶ ನಾಯಿಕ, ರಾಮಲಿಂಗ ಸಾವಂತ, ಪರಶುರಾಮ ಮಜುಕರ, ಶಾಂತಾರಾಮ ಮಜುಕರ, ದಶರಥ ನಾಯಿಕ, ಧರೆಪ್ಪ ನಾಯಿಕ ಹಾಗೂ ಶಾಲಾ ಸಿಬ್ಬಂದಿ ಇದ್ದರು.
ಬಳಿಕ ಇನಾಮ್ ಬಡಸ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಗೆ ಭೇಟಿ ನೀಡಿ, ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡ ಪರಿಶೀಲಿಸಿ, ನೂತನ ಕಟ್ಟಡ ನಿರ್ಮಾಣದ ಭರವಸೆ ನೀಡಿದರು. ಮಳೆಯಿಂದ ಹಾನಿಗೊಳಗಾಗಿರುವ ಗ್ರಾಮದ ರಸ್ತೆ ಅಭಿವೃದ್ಧಿ ಕುರಿತು ಗ್ರಾಮಸ್ಥರೊಂದಿಗೆ ಚರ್ಚಿಸಿದರು.