ಹಾಸನದಲ್ಲಿ ವಿಶ್ವ ಭೂ ದಿನಾಚರಣೆ: ಮನೆಗಳಿಂದ ಕಾಲ್ನಡಿಗೆಯಲ್ಲಿ ಬಂದು ಜಾಥಾದಲ್ಲಿ ಪಾಲ್ಗೊಂಡ ಜಿಲ್ಲಾಡಳಿತದ ಅಧಿಕಾರಿಗಳು

ಹಾಸನ: ವಿಶ್ವ ಭೂ ದಿನದ ಅಂಗವಾಗಿ ನಗರದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಜಿಪಂ ಸಿಇಒ ಡಾ. ವಿಜಯ ಪ್ರಕಾಶ್ ಚಾಲನೆ ನೀಡಿದರು. ಜಿಲ್ಲಾಡಳಿತದ ಎಲ್ಲ ಅಧಿಕಾರಿಗಳು ತಮ್ಮ ತಮ್ಮ ಮನೆಗಳಿಂದ ಕಾಲ್ನಡಿಗೆಯಲ್ಲಿ ಬಂದು ಜಾಥಾದಲ್ಲಿ ಪಾಲ್ಗೊಳ್ಳುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು.

ಸ್ವಂತ ವಾಹನಗಳ ಬಳಕೆಯನ್ನು ಕೈಬಿಟ್ಟು ಸಾರ್ವಜನಿಕ ಸಾರಿಗೆ ಬಳಸುವಂತೆ ಜಾಥಾದಲ್ಲಿ ಪಾಲ್ಗೊಂಡಿದ್ದ ಹಾಸನ ನಗರದ ವಿವಿಧ ಶಾಲೆಗಳ ನೂರಾರು ವಿದ್ಯಾರ್ಥಿಗಳು ಜಾಗೃತಿ ಮೂಡಿಸಿದರು. ಜನಪ್ರಿಯ ಆಸ್ಪತ್ರೆ ಚೇರ್ಮನ್​ ಡಾ. ಅಬ್ದುಲ್​ ಬಷೀರ್​ ಎತ್ತಿನಗಾಡಿಯಲ್ಲಿ ಬಂದು ಗಮನಸೆಳೆದರು. ಐದಕ್ಕೂ ಹೆಚ್ಚು ಜನರು ಕುದುರೆ ಸವಾರಿ ಮಾಡಿದರು.

ಜಿಲ್ಲಾಡಳಿತ ಹಾಗೂ ಹಸಿರುಭೂಮಿ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದ್ದಲ್ಲದೆ, ಸೂರಾರು ಜನರು ಜಾಗೃತಿ ಜಾಥಾದಲ್ಲಿ ಪಾಲ್ಗೊಂಡರು.

Leave a Reply

Your email address will not be published. Required fields are marked *