25.9 C
Bengaluru
Wednesday, January 22, 2020

ವೀರಶೈವ-ಲಿಂಗಾಯತ ಒಳಪಂಗಡ ವ್ಯವಸ್ಥೆ ಹೋಗಬೇಕು

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಧಾರವಾಡ: ವೀರಶೈವ-ಲಿಂಗಾಯತ ಸಮಾಜದಲ್ಲಿನ ಒಳಪಂಗಡ ವ್ಯವಸ್ಥೆ ಮೊದಲು ಹೋಗಬೇಕು. ಒಳಪಂಗಡಗಳಲ್ಲಿ ಸಂಬಂಧಗಳು ಬೆಳೆಯಬೇಕು. ಅಂದಾಗ ಸಮಾಜ ಸಂಘಟಿತವಾಗುತ್ತದೆ ಎಂದು ಹುಬ್ಬಳ್ಳಿಯ ಮೂರುಸಾವಿರಮಠದ ಶ್ರೀ ಜಗದ್ಗುರು ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮೀಜಿ ಹೇಳಿದರು.

ಅಖಿಲ ಭಾರತ ವೀರಶೈವ ಮಹಾಸಭಾ ಬೆಂಗಳೂರು ರಾಜ್ಯ ಘಟಕ ಹಾಗೂ ಜಿಲ್ಲಾ ಘಟಕದ ಆಶ್ರಯದಲ್ಲಿ ರಾಜ್ಯ, ಜಿಲ್ಲಾ, ತಾಲೂಕು ಘಟಕಗಳ ಪದಾಧಿಕಾರಿಗಳಿಗೆ ನಗರದ ಲಿಂಗಾಯತ ಭವನದಲ್ಲಿ ಶನಿವಾರ ಆಯೋಜಿಸಿದ್ದ ರಾಜ್ಯ ಮಟ್ಟದ ವಿಶೇಷ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಾನಗಲ್ ಕುಮಾರಸ್ವಾಮೀಜಿ ಅವರು ಸಮಾಜದ ಬಗೆಗಿನ ಕಾಳಜಿಯಿಂದ ವೀರಶೈವ ಮಹಾಸಭಾ ಸ್ಥಾಪಿಸಿದ್ದರು. ಆದರೆ, ಅವರು ಸಂಸ್ಥಾಪಕ ಅಧ್ಯಕ್ಷರಾಗಲಿಲ್ಲ. ಹಾಗಾಗಿ ಪದಾಧಿಕಾರಿಗಳು ‘ನಾನು’ ಎನ್ನುವ ಅಹಂಭಾವ ಬಿಟ್ಟು ಸಾಮಾಜಿಕ ಕಳಕಳಿಯಿಂದ ಕಾರ್ಯನಿರ್ವಹಿಸಬೇಕು. ಪೀಠಗಳನ್ನೂ ಪ್ರೀತಿಸಿ, ಗೌರವಿಸೋಣ. ಅಂದಿನ ದಿನಗಳಲ್ಲಿ ವೀರಶೈವ ಪದ ಪ್ರಚಲಿತದಲ್ಲಿತ್ತು. ಅದೇ ಹೆಸರಿನಲ್ಲಿ ಮಹಾಸಭಾ ಆರಂಭವಾದಾಗ ಸ್ವಾಮೀಜಿ ಜಂಗಮರ ಸಲುವಾಗಿ ಎಂಬ ಟೀಕೆ ಕೇಳಿಬಂದಿತ್ತು ಎಂದರು.

ಅಧ್ಯಕ್ಷತೆ ವಹಿಸಿದ್ದ ಮಹಾಸಭಾ ರಾಜ್ಯಾಧ್ಯಕ್ಷ ಎನ್. ತಿಪ್ಪಣ್ಣ ಮಾತನಾಡಿ, ಕೂಡಲಸಂಗಮದಲ್ಲಿ ಸೇರಿದ್ದ ಪಂಚಪೀಠ ಹಾಗೂ ವಿರಕ್ತ ಮಠದ 500 ಸ್ವಾಮೀಜಿಗಳು ನಾವೆಲ್ಲರೂ ಒಂದು ಎಂದು ಪ್ರಮಾಣ ಮಾಡಿದ್ದಾರೆ. ನಂತರ ಕಾರಣಾಂತರಗಳಿಂದ ಪ್ರತ್ಯೇಕಗೊಂಡಿದ್ದಾರೆ. ಹೀಗಾದರೆ ಅವರಿಗೆ ತಿಳಿ ಹೇಳುವವರು ಯಾರು? ಭಾಷಣಗಳಲ್ಲಿ ಇವನಾರವ, ಇವನಾರವ… ಎಂದು ಹೇಳುವವರು, ಒಗ್ಗಟ್ಟಾಗಿ ಸಾಗಲು ಪ್ರಾಯೋಗಿಕ ಕ್ರಮಗಳನ್ನು ಕೈಗೊಂಡಿದ್ದಾರೆಯೇ? ಸಮಾಜ ಒಂದುಗೂಡಿಸಿ, ಒಗ್ಗಟ್ಟಿನ ಮಂತ್ರ ಬೋಧಿಸಬೇಕಾದ ಸ್ವಾಮೀಜಿಗಳು, ಕ್ಷುಲ್ಲಕ ಕಾರಣಕ್ಕೆ ಬೇರೆಯಾದರೆ ಅವರಿಗೆ ಬುದ್ಧಿ ಹೇೕಳುವವರು ಯಾರು? ಗುರು- ವಿರಕ್ತರ ವೈಷಮ್ಯ ದೂರವಾಗಬೇಕು. ಸಮಾಜ ಸಂಘಟನೆಯಾಗುತ್ತಿದೆಯೋ, ವಿಘಟನೆಯಾಗುತ್ತಿದೆಯೋ ಎಂಬುದನ್ನು ಮನಗಾಣಬೇಕು ಎಂದರು.

ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಶಂಕರ ಬಿದರಿ ಮಾತನಾಡಿ, ಅಖಿಲ ಭಾರತ ವೀರಶೈವ- ಲಿಂಗಾಯತ ಎರಡೂ ಒಂದೆ. ವೀರಶೈವರು, ಲಿಂಗಾಯತರು ಬೇರೆಯಲ್ಲ. ಈ ಬಗ್ಗೆ ಭಿನ್ನಾಭಿಪ್ರಾಯ, ಸಂಶಯ ಬೇಡ. ಗುರು, ವಿರಕ್ತ, ಶರಣ ಪರಂಪರೆ ನಮ್ಮಲ್ಲಿವೆ. ಅವುಗಳಲ್ಲಿ ಭೇದಭಾವ ಇಲ್ಲ. ಕ್ರಿಶ್ಚಿಯನ್, ಮುಸ್ಲಿಂ ಸಮಾಜದಂತೆ ನಮ್ಮಲ್ಲೂ ಪಂಗಡಗಳಾಗಿವೆ. ಸಮಾಜ ದೊಡ್ಡದಾದಂತೆ ವರ್ಗಗಳು ಬೆಳೆದಿವೆ. ಆದರೆ, ನಮ್ಮಲ್ಲಿರುವ ಮೂರೂ ಪರಂಪರೆಗಳು ಒಂದೇ ಆಗಿದ್ದು, ನಮ್ಮ ಪರಂಪರೆಯಲ್ಲಿ ನಡೆಯಬೇಕು. ಲಿಂಗಾಯತರು ಮೂರೂ ಪರಂಪರೆಯ ಸ್ವಾಮೀಜಿಗಳನ್ನು ಸಮ ಗೌರವದಿಂದ ನೋಡಿದ್ದಾರೆ. ಸಮಾಜ ಇನ್ನಷ್ಟು ಬಲಿಷ್ಠ ವಾಗಲು ಸಂಘಟನೆ ಮತ್ತು ಆರ್ಥಿಕ ಸಾಮರ್ಥ್ಯ ಹೆಚ್ಚಬೇಕು. ಪ್ರತಿಯೊಬ್ಬರೂ ತಮ್ಮ ಆದಾಯದಲ್ಲಿ ಕನಿಷ್ಠ ಶೇ. 2ರಷ್ಟು ದೇಣಿಗೆ ನೀಡಬೇಕು. ಅದು ಸಮಾಜದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ವಿನಿಯೋಗವಾಗಬೇಕು ಎಂದರು.

ಮಹಾಸಭಾ ಜಿಲ್ಲಾಧ್ಯಕ್ಷ ಗುರುರಾಜ ಹುಣಸೀಮರದ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವಶರಣ ಕಲಬಶೆಟ್ಟರ ಸ್ವಾಗತಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ನಟರಾಜ ಸಾಗರನಹಳ್ಳಿ, ಶಿವಾನಂದ ಅಂಬಡಗಟ್ಟಿ, ಇತರರಿದ್ದರು.

ನಾವು ದಾರಿ ತಪ್ಪಿದರೆ ಸರಿದಾರಿಗೆ ತರಬೇಕಾದವರೇ ಪ್ರತ್ಯೇಕ ದಾರಿ ತುಳಿದರೆ ಸಮಾಜ ಮತ್ತು ಜನರ ಗತಿ ಏನು? ಹಿಂದೆ ಸಮಾಜದ 90ರಿಂದ 95 ಶಾಸಕರು ಇರುತ್ತಿದ್ದರು. ಇಂದು 60ಕ್ಕೆ ಕುಸಿದಿದೆ. ಒಗ್ಗಟ್ಟಿನ ಮೂಲಕ ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಸಬಲರಾಗಬೇಕು. ಅದಕ್ಕೆ ಸದಸ್ಯರು ಹೆಚ್ಚಾಗಬೇಕು. ಬೆಂಗಳೂರಿನಲ್ಲಿ ವಿದ್ಯಾರ್ಥಿ ನಿಲಯ ಕಟ್ಟಿಸಲಾಗುತ್ತಿದ್ದು, ಮಹಾಸಭಾ ಆರ್ಥಿಕ ಸಹಾಯದ ನಿರೀಕ್ಷೆಯಲ್ಲಿದೆ. ಎನ್. ತಿಪ್ಪಣ್ಣ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...