ವೀರಶೈವ ಲಿಂಗಾಯತ ಸಮಾಜದ ಸಂಘಟನೆ ಅಗತ್ಯ: ಶಿವಾನಂದ ತಗಡೂರು

ಹಾಸನ: ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮಾಜ ಅತೀ ಹೆಚ್ಚು ಜನಸಂಖ್ಯೆ ಹೊಂದಿದ್ದರೂ ಇತ್ತೀಚೆಗೆ ಒಗ್ಗಟ್ಟಿನ ಕೊರತೆಯಿಂದ ರಾಜಕೀಯವಾಗಿ ವಂಚಿತರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಬೇಸರ ವ್ಯಕ್ತಪಡಿಸಿದರು.
ನಗರದ ಶ್ರೀ ತಣ್ಣೀರುಹಳ್ಳ ಮಠದ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಹಾಸನ ಜಿಲ್ಲಾ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರು ಹಾಗೂ ನಿರ್ದೇಶಕರ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಬೇಕು. ಇದರಿಂದ ಅರ್ಥಿಕವಾಗಿ ಹಿಂದುಳಿದ ವೀರಶೈವ ಲಿಂಗಾಯತ ಸಮಾಜದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಸಮಾಜದ ಸಂಘಟನೆಗೆ ನಾವೆಲ್ಲ ಜಾಗೃತರಾಗಬೇಕಾಗಿದೆ ಎಂದರು.
ಸಮಾಜದ ಬಾಂಧವರು ಸಾಮಾಜಿಕವಾಗಿ, ಆರ್ಥಿಕವಾಗಿ ಸದೃಢರಾಗಬೇಕು. ವೈಯಕ್ತಿಕ ಭಿನ್ನಾಭಿಪ್ರಾಯ ಬಿಟ್ಟು ವೀರಶೈವ ಲಿಂಗಾಯತ ಸಮಾಜದ ಸಂಘಟನೆಗೆ ತೊಡಗಿಸಿಕೊಂಡು ಕೆಲಸ ನಿರ್ವಹಿಸಬೇಕಾಗಿದೆ. ನೂತನವಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಅಧ್ಯಕ್ಷರು ಹಾಗೂ ನಿರ್ದೇಶಕರಿಗೆ ಶುಭಾಷಯಗಳು ಎಂದು ಶುಭ ಕೋರಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಕಾರ್ಯದರ್ಶಿ ಸಾಗರನಹಳ್ಳಿ ನಟರಾಜ್ ಮಾತಾನಾಡಿ, ಮಹಾಸಭಾದ ವತಿಯಿಂದ ಬೆಂಗಳೂರಿನಲ್ಲಿ ವಿದ್ಯಾರ್ಥಿನಿಲಯ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತಿದೆ. ವೀರಶೈವ ಲಿಂಗಾಯತ ಸಮಾಜದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.
ಇತ್ತೀಚೆಗೆ ಅಖಿಲ ಭಾರತ ವೀರಶೈವ ಮಹಾಸಭೆಯ ತಾಲೂಕು ಜಿಲ್ಲಾ ಘಟಕದ ಚುನಾವಣೆ ನಡೆದು ಆನೇಕ ಯುವಕರು ಅಯ್ಕೆ ಯಾಗಿದ್ದಾರೆ. ಕೆಂದ್ರ ಸಮಿತಿ ಹಾಗೂ ರಾಜ್ಯ ಸಮಿತಿಯ ಚುನಾವಣೆ ಪ್ರಕ್ರಿಯೆ ನಡೆಯುತ್ತಿದೆ. ಇದೆ ತಿಂಗಳ 25ರಂದು ಚುನಾವಣೆ ನಡೆದು ನಿರ್ದೇಶಕರು ಅಯ್ಕೆ ಯಾಗಲಿದ್ದಾರೆ. ಈಗಾಗಲೇ ರಾಜ್ಯ ಅಧ್ಯಕ್ಷರಾಗಿ ಶಂಕರ್ ಬಿದರಿ ಅವಿರೋಧವಾಗಿ ಅಯ್ಕೆಯಾಗಿದ್ದಾರೆ. ಕೇಂದ್ರ ಸಮಿತಿಯ ಅಧ್ಯಕ್ಷರ ಆಯ್ಕೆ ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.
ನೂತನವಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಜಿಲ್ಲಾ ಅಧ್ಯಕ್ಷರು, ಜಿಲ್ಲಾ ನಿರ್ದೇಶಕರಿಗೆ ಚುನಾವಣಾ ಅಧಿಕಾರಿಗಳಾಗಿದ್ದ ಹಾಲೇಗೌಡ ಅವರು ಪ್ರಮಾಣಪತ್ರ ವಿತರಿಸಿದರು.
ಕಾರ್ಯಕ್ರಮದಲ್ಲಿ ಪೂಜ್ಯ ವಿಜಯಕುಮಾರ ಸ್ವಾಮೀಜಿ, ಹಾಸನ ಜಿಲ್ಲಾ ಅಖಿಲ ಭಾರತ ವೀರಶೈವ ಮಹಾಸಭಾದ ಗೌರವಾಧ್ಯಕ್ಷರಾದ ಅರಕಲಗೂಡು ದೊಡ್ಡ ಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಹಾಸನ ಜವನಹಳ್ಳಿ ಮಠದ ಶ್ರೀ ಸಂಗಮೇಶ್ವರ ಸ್ವಾಮೀಜಿ. ಸೀಗೆ ಗುಡ್ಡದ ಶ್ರೀ ಮಲ್ಲೇಶ್ವರ ಸ್ವಾಮಿ ದೇವಾಲಯದ ಮಠದ ಶ್ರೀ ನಂದೀಶ್ವರ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಮಾಜಿ ಶಾಸಕ ಕೆ.ಎಸ್. ಲಿಂಗೇಶ್, ಜಿಲ್ಲಾ ಅಧ್ಯಕ್ಷ ನವೀಲೆ ಪರಮೇಶ್, ಕೇಂದ್ರ ಸಮಿತಿ ನಿರ್ದೇಶಕರಾದ ಬಿ.ಕೆ. ಚಂದ್ರಕಲಾ, ರಾಜ್ಯ ಸಮಿತಿಯ ನಿರ್ದೇಶಕ ಬಿ.ಎಸ್. ಗುರುನಾಥ್, ಜಿಲ್ಲಾ ನಿರ್ದೇಶಕ ಬಿ.ಜಿ . ಯತೀಶ್, ಹಾಸನ ತಾಲೂಕು ಅಧ್ಯಕ್ಷ ಕಟ್ಟಾಯ ಶಿವಕುಮಾರ್, ಆಲೂರು ತಾಲೂಕಿನ ಅಧ್ಯಕ್ಷ ಅಜಿತ್, ಅರಕಲಗೂಡು ತಾಲೂಕು ಅಧ್ಯಕ್ಷ ಎಂ.ಎಂ. ಸುರೇಶ್, ಬೇಲೂರು ತಾಲೂಕು ಅಧ್ಯಕ್ಷ ಅಡಗೂರು ಬಸವರಾಜು, ಚನ್ನರಾಯಪಟ್ಟಣ ತಾಲೂಕು ಅಧ್ಯಕ್ಷ ರಾಜಣ್ಣ ಸೇರಿದಂತೆ ಇತರರು ಭಾಗವಹಿಸಿದ್ದರು.

Share This Article

ನಿಮ್ಮ ಅಂಗೈನಲ್ಲಿ ಈ ಚಿಹ್ನೆ ಇದೆಯಾ ಚೆಕ್​ ಮಾಡಿ ನೋಡಿ… ಇದ್ರೆ ನೀವು ರಾಜಯೋಗ ಅನುಭವಿಸುತ್ತೀರಿ!

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…

ನಿಮ್ಮ ಮನೆಯಲ್ಲಿ ಮರಿ ಹಲ್ಲಿ ಇದ್ರೆ ಈ ಒಂದು ತಪ್ಪು ಮಾತ್ರ ಮಾಡ್ಬೇಡಿ: ಮಾಡಿದ್ರೆ ಈ ಗಂಡಾಂತರ ಫಿಕ್ಸ್!

ಸಾಮಾನ್ಯವಾಗಿ ಹಿಂದು ಪುರಾಣದಲ್ಲಿ ಹಲ್ಲಿಗಳನ್ನು ಅದೃಷ್ಟದ ಸಂಕೇತ ಎಂದು ಕರೆಯಲಾಗಿದೆ. ಹಲ್ಲಿಗಳು ಲೊಚಗುಡುವುದು ಶುಭ ಸೂಚನೆ…

ಮಧ್ಯಾಹ್ನ, ರಾತ್ರಿ ಊಟದಲ್ಲಿ ಜಾಸ್ತಿ ಉಪ್ಪು ಸೇವಿಸಿದ್ರೆ ಕ್ಯಾನ್ಸರ್‌ ಬರೋದು ಪಕ್ಕಾ! ಇರಲಿ ಎಚ್ಚರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…