20.3 C
Bangalore
Sunday, December 15, 2019

ವೀರೇಂದ್ರ ಪಾಟೀಲ್ ಶಿಕಾರಿಪುರ ಬಿಜೆಪಿ ಅಧ್ಯಕ್ಷ

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

ಶಿಕಾರಿಪುರ: ಶಿಕಾರಿಪುರ ತಾಲೂಕು ಬಿಜೆಪಿ ನೂತನ ಸಾರಥಿಯಾಗಿ ಅರಿಶಿನಗೆರೆಯ ವೀರೇಂದ್ರ ಪಾಟೀಲ್ ಶುಕ್ರವಾರ ಅವಿರೋಧ ಆಯ್ಕೆಯಾದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಂಗಳದಿಂದ ಬಂದ ವೀರೇಂದ್ರ ಪಾಟೀಲ್ ಮೂಲತಃ ಕೃಷಿ ಕುಟುಂಬದವರು. ಹಿಂದಿನ ಅವಧಿಯಲ್ಲಿ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅನುಭವವಿದೆ. ಪ್ರಸ್ತುತ ಅವಧಿಯಲ್ಲಿ ಗ್ರಾಪಂ, ತಾಪಂ, ಜಿಪಂ ಚುನಾವಣೆಗಳು ಬರುವುದರಿಂದ ಅವರ ಜವಾಬ್ದಾರಿ ಹೆಚ್ಚಿದೆ. ಸ್ವತಃ ಮುಖ್ಯಮಂತ್ರಿಗಳ ಕ್ಷೇತ್ರವಾದ್ದರಿಂದ ಇಡೀ ನಾಡಿನ ಗಮನ ಶಿಕಾರಿಪುರದ ಮೇಲಿರುವ ಕಾರಣ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕಾಗಿದೆ.

ಪಟ್ಟಣದ ಪಕ್ಷದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಬಿಜೆಪಿ ಸಂಘಟನೆ ಆಧಾರದ ಮೇಲೆ ಇಂದು ಇಷ್ಟು ಎತ್ತರಕ್ಕೆ ಬೆಳೆದು ನಿಂತಿದೆ. ಇಡೀ ವಿಶ್ವದಲ್ಲೇ ಅತೀ ಹೆಚ್ಚು ಸದಸ್ಯರನ್ನು ಹೊಂದಿದ ಏಕೈಕ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದಕ್ಕೆ ಮೂಲ ಕಾರಣ ಕಾರ್ಯಕರ್ತರು. ಕಾರ್ಯಕರ್ತರೇ ಪಕ್ಷದ ಜೀವಾಳ ಎಂದು ಹೇಳಿದರು.

ನಾಲ್ಕು ದಶಕಗಳ ಹಿಂದೆ ಪಕ್ಷದ ಅಸ್ತಿತ್ವವೇ ಇಲ್ಲದಿದ್ದಾಗ ಅನೇಕ ಹಿರಿಯರು ಹಳ್ಳಿ ಹಳ್ಳಿಗಳಿಗೆ ಹೋಗಿ ಯಡಿಯೂರಪ್ಪ ಅವರ ನೆರಳಾಗಿ ನಿಂತು ಪಕ್ಷ ಸಂಘಟನೆ ಮಾಡಿದರು. ಅವರೆಲ್ಲರ ಪರಿಶ್ರಮದ ಫಲದಿಂದ ಇವತ್ತು ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರದ ಗದ್ದುಗೆಯೇರಲು ಸಹಕಾರವಾಯಿತು. ಕೇವಲ ಪುರಸಭೆಯ ಸದಸ್ಯರಾಗಿದ್ದ ಯಡಿಯೂರಪ್ಪ ನಿಮ್ಮೆಲ್ಲರ ಆಶೀರ್ವಾದ ದಿಂದ ನಾಲ್ಕು ಬಾರಿ ಈ ನಾಡಿನ ಮುಖ್ಯ ಮಂತ್ರಿಯಾಗಿದ್ದಾರೆ ಎಂದು ಹೇಳಿದರು.

15 ಕ್ಷೇತ್ರದಲ್ಲಿ ವಿಧಾನಸಭೆ ಉಪಚುನಾವಣೆ ನಡೆಯುತ್ತಿದೆ. ಬಿಜೆಪಿಯಿಂದ ಅವರನ್ನು ನಾವು ಗೆಲ್ಲಿಸಲೇಬೇಕು. 105 ಶಾಸಕರನ್ನೂ ಆ ಕ್ಷೇತ್ರದಲ್ಲಿ ಚುನಾವಣೆಗೆ ನಿಯೋಜಿಸಲಾಗಿದೆ .ಅವರ ಗೆಲುವಿಗೆ ಎಲ್ಲರ ಶ್ರಮ ಅಗತ್ಯವಾಗಿದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಎಸ್. ರುದ್ರೇಗೌಡ ಮಾತನಾಡಿ, ಯಡಿಯೂರಪ್ಪ ಅವರಂತಹ ಧೀಮಂತ ನಾಯಕರನ್ನು ಬೆಳೆಸಿದವರು ಶಿಕಾರಿಪುರದ ಮಹಾಜನತೆ. ನಿಮ್ಮಿಂದ ಇಂದು ಬಿಜೆಪಿ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರಿದೆ. ಜನಪರ ಕಾಳಜಿಯಿಂದಲೇ ಅವರು ಹಂತ ಹಂತವಾಗಿ ಮೇಲೆ ಬಂದಿದ್ದಾರೆ .ಪ್ರತಿಯೊಬ್ಬ ಕಾರ್ಯಕರ್ತರಿಗೂ ಅವರೇ ಮಾದರಿ ಮತ್ತು ಆದರ್ಶ. ನೂತನ ಪದಾಧಿಕಾರಿಗಳು ಮುಂಬರುವ ಗ್ರಾಪಂ, ತಾಪಂ, ಜಿಪಂ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಬೇಕು ಎಂದು ಸೂಚಿಸಿದರು.

ಮುಖಂಡರಾದ ಪದ್ಮನಾಭ ಭಟ್, ಕೆ.ಶೇಖರಪ್ಪ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಗುರುಮೂರ್ತಿ, ನಿಕಟಪೂರ್ವ ಅಧ್ಯಕ್ಷ ಕೊಳಗಿ ರೇವಣಪ್ಪ, ಶಂಕರ್, ಮಧುಸೂದನ್, ದಾನಿ ರುದ್ರಪ್ಪ, ಎಂ.ಬಿ.ಚನ್ನವೀರಪ್ಪ, ಕೆ.ಹಾಲಪ್ಪ, ರಾಮಾನಾಯಕ್, ತಾಪಂ ಅಧ್ಯಕ್ಷ ಆರ್.ಕೆ.ಶಂಭು, ಸಣ್ಣ ಹನುಮಂತಪ್ಪ, ಜಿಪಂ ಸದಸ್ಯರಾದ ಅರುಂಧತಿ ರಾಜೇಶ್, ಅಕ್ಷತಾ ಶ್ರೀನಿವಾಸ್, ರೇಣುಕಾ ಹನುಮಂತಪ್ಪ, ಚಾರಗಲ್ಲಿ ಪರಶುರಾಮ್ ಇತರರಿದ್ದರು.

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...