26.8 C
Bangalore
Friday, December 13, 2019

ವೈಚಾರಿಕತೆಯ ಕೇಂದ್ರ ತೋಂಟದ ಮಠ

Latest News

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಮಲ್ಲಾಪುರದಲ್ಲಿ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ: ಜಾತ್ರೆ ಕಣ್ತುಂಬಿಕೊಂಡ ಅಪಾರ ಭಕ್ತರು

ನೆಲಮಂಗಲ: ತಾಲೂಕಿನ ಮಲ್ಲಾಪುರದ ಪ್ರಸಿದ್ಧ ಶ್ರೀ ಬಯಲು ಉದ್ಭವ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಹಾಗೂ ಕಡಲೆಕಾಯಿ ಪರಿಷೆ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಪರಿಷೆ...

ಹೆದ್ದಾರಿ 4ರ ಜಾಸ್ ಟೋಲ್ ಬಳಿ ಲಾರಿ-ಬಸ್ ಡಿಕ್ಕಿಯಾಗಿ 16 ಮಂದಿಗೆ ಗಾಯ

ನೆಲಮಂಗಲ: ತುಮಕೂರು-ಬೆಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ 4ರ ಜಾಸ್ ಟೋಲ್ ಬಳಿ ಗುರುವಾರ ರಾಜ್ಯ ಸಾರಿಗೆ ಬಸ್ ಮತ್ತು ಲಾರಿ ನಡುವೆ ಸಂಭವಿಸಿರುವ ಅಪಘಾತದಲ್ಲಿ ಚಾಲಕ...

ಗದಗ: ಮಠಗಳು ಕೇವಲ ಧಾರ್ವಿುಕತೆಗೆ ಸೀಮಿತ ಎನ್ನುವಂತಹ ಸಿದ್ಧಸೂತ್ರವನ್ನು ಮುರಿದು, ನಾಡು-ನುಡಿಯ ಸಂರಕ್ಷಣೆಯ ಕೇಂದ್ರವನ್ನಾಗಿಸಿ ಜನರಲ್ಲಿ ವೈಚಾರಿಕ ಪ್ರಜ್ಞೆ ಬೆಳೆಸಿದ ಲಿಂಗೈಕ್ಯ ಡಾ. ಸಿದ್ಧಲಿಂಗ ಶ್ರೀಗಳು ಉಪಮಾತೀತರು. ಅವರ ವ್ಯಕ್ತಿತ್ವ ನಾಡಿನ ಎಲ್ಲ ಸ್ವಾಮೀಜಿಗಳಿಗೆ ಆದರ್ಶಪ್ರಾಯವಾಗಿದೆ ಎಂದು ಶಿವಮೊಗ್ಗ ಆನಂದಪುರಂ ಮುರುಘಾಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.

ನಗರದ ಜಗದ್ಗುರು ತೋಂಟದಾರ್ಯ ಜಾತ್ರಾ ಮಹೋತ್ಸವದ ಪ್ರಾರಂಭೋತ್ಸವ ಹಾಗೂ ಪುಸ್ತಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ತೋಂಟದಾರ್ಯ ಮಠವು ತನ್ನ ವೈಭವವನ್ನು ಕಳೆದುಕೊಂಡು ಬರಡಾದ ಸಂದರ್ಭದಲ್ಲಿ ಪೀಠವನ್ನೇರಿದ ಲಿಂಗೈಕ್ಯ ತೋಂಟದ ಸಿದ್ಧಲಿಂಗ ಶ್ರೀಗಳು ಶ್ರೀಮಠದ ಚಿತ್ರಣವನ್ನೇ ಬದಲಾಯಿಸಿದರು ಎಂದರು.

ಮೌಢ್ಯ-ಕಂದಾಚಾರಗಳನ್ನು ಅಲ್ಲಗಳೆದು ಅಪ್ಪಟ ಬಸವತತ್ತ್ವನ್ನು ಸಾರಿದ ಶ್ರೀಗಳು ಅಡ್ಡಪಲ್ಲಕ್ಕಿಯನ್ನು ಅಲ್ಲಗಳೆದು ಭಕ್ತರ ಹೃದಯ ಸಿಂಹಾಸನದಲ್ಲಿ ಮೆರೆದರು. ಸಿದ್ಧಲಿಂಗ ಶ್ರೀಗಳು ಭೌತಿಕವಾಗಿ ನಮ್ಮೊಂದಿಗೆ ಇಲ್ಲವಾದರೂ ಅವರ ತತ್ತ್ವಾದರ್ಶಗಳು ಸದಾ ನಮ್ಮೊಂದಿಗಿವೆ ಎಂದು ಹೇಳಿದರು.

ಸಾನ್ನಿಧ್ಯ ವಹಿಸಿ ಮಾತನಾಡಿದ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ, ಶ್ರೀಮಠದ ಪೀಠ ಪರಂಪರೆಗೆ ಮೇರು ಕಳಸವಾಗಿದ್ದ ಲಿಂಗೈಕ್ಯ ಗುರುಗಳು ಬಸವಾದಿ ಶರಣರು ಹಾಕಿಕೊಟ್ಟ ಮಾರ್ಗದಲ್ಲಿ ಮಠವನ್ನು ಮುನ್ನಡೆಸಿ, ವೈಚಾರಿಕ-ವೈಜ್ಞಾನಿಕ ಪ್ರಜ್ಞೆ ಬೆಳೆಸಿದರು. ಅರ್ಥಹೀನ ಆಚರಣೆಗಳಿಂದ ಶ್ರೀಮಠದ ಜಾತ್ರೆಯನ್ನು ಮುಕ್ತವಾಗಿಸಿದ ಶ್ರೀಗಳು, ಪುಸ್ತಕ ಪ್ರಕಟಣೆ ಮೂಲಕ ಜ್ಞಾನಾರ್ಚನೆ ಮಾಡಿದ್ದರು ಎಂದು ಹೇಳಿದರು.

ಸಮ್ಮುಖ ವಹಿಸಿದ್ದ ಕಲಬುರಗಿ ಸುಲಫಲಮಠದ ಡಾ. ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ, ರಾಮದುರ್ಗದ ಶಿವಮೂರ್ತೀಶ್ವರ ಮಠದ ಶಾಂತವೀರ ಸ್ವಾಮೀಜಿ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿವಿಧ ಲೇಖಕರಿಂದ ರಚಿತಗೊಂಡ 19 ಗ್ರಂಥಗಳನ್ನು ಬಿಡುಗಡೆಗೊಳಿಸಲಾಯಿತು. ಡಾ. ಬಾಳಣ್ಣ ಶೀಗಿಹಳ್ಳಿ ಮತ್ತು ಶಶಿಧರ ತೋಡಕರ್ ಅವರು ಬಿಡುಗಡೆಗೊಂಡ ಗ್ರಂಥಗಳ ಸಮೀಕ್ಷೆ ಮಾಡಿದರು. ಬಿ.ಸಿ. ರಾಯ್ ಪ್ರಶಸ್ತಿ ಪುರಸ್ಕೃತ ಧಾರವಾಡದ ಡಾ. ಜಿ.ಬಿ. ಸತ್ತೂರ ಅವರನ್ನು ಸನ್ಮಾನಿಸಲಾಯಿತು. ಬೆಂಗಳೂರು ಕಲರವ ತಂಡದ ಸಿದ್ಧರಾಮ ಕೇಸಾಪುರ ಅವರಿಂದ ವಚನ ಸಂಗೀತ ಜರುಗಿತು.

ಜಾತ್ರಾ ಸಮಿತಿ ಅಧ್ಯಕ್ಷರಾದ ಡಾ.ಎಂ.ಬಿ. ನಿಂಬಣ್ಣವರ ಸ್ವಾಗತಿಸಿದರು, ಎಸ್.ಎಸ್. ಹರ್ಲಾಪುರ ಹಾಗೂ ಕ್ಷಮಾ ವಸ್ತ್ರದ ನಿರೂಪಿಸಿದರು.

ಬಿಡುಗಡೆಗೊಂಡ ಗ್ರಂಥಗಳು:ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ ಕುರಿತು ಸಿದ್ಧರಾಮ ಕೇಸಾಪೂರ ಅವರು ಹಾಡಿದ ಧ್ವನಿಸುರಳಿ ಹಾಗೂ ವಿವಿಧ ಲೇಖಕರು ಬರೆದ ಜ್ಯೋತಿಬಾ ಫುಲೆ ಪುರಾಣ, ವಿಶ್ವನಾಥರೆಡ್ಡಿ ಮುದ್ನಾಳ, ಜಸ್ಟಿಸ್ ಶಿವರಾಜ ಪಾಟೀಲ, ಬಿ.ಎಸ್. ಪಾಟೀಲ ಸಾಸನೂರು, ಬಿ.ಎಸ್. ಪಾಟೀಲ ಮನಗೂಳಿ, ಎಸ್.ಆರ್. ತಲ್ಲೂರ, ಎಂ. ನಾಗಪ್ಪ, ಲಿಂಗಣ್ಣ ಸತ್ಯಂಪೇಟೆ, ಡಾ. ಬಸವರಾಜ ಮಲಶೆಟ್ಟಿ, ಡಂಬಳ ಮಠದ ಅವಲೋಕನ, ಕೋ. ಚೆನ್ನಬಸಪ್ಪ, ಬಿ. ಮಹಾದೇವಪ್ಪ, ಪಂ. ಚೆನ್ನಪ್ಪ ಎರೆಶೀಮೆ, ಶಿಗ್ಲಿಯ ನಿರಂಜನರು, ವಿ.ಎ. ಉಮರಾಣಿ, ಎಂ.ಎ. ಹಂಚಿನಾಳ, ಬಿ.ಎಲ್. ಪಾಟೀಲ ಗ್ರಂಥಗಳನ್ನು ಬಿಡುಗಡೆಗೊಳಿಸಲಾಯಿತು.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....