25.1 C
Bangalore
Friday, December 6, 2019

ವೈದ್ಯರು ಸಮಾಜ ಸೇವೆಗೂ ಒತ್ತು ನೀಡಲಿ

Latest News

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ಧಾರವಾಡ: ವೈದ್ಯ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪಡೆದ ಶಿಕ್ಷಣ ವೃತ್ತಿ ಜೀವನಕ್ಕೆ ಅಡಿಪಾಯ. ತಮ್ಮ ಬಳಿಗೆ ಬರುವ ಬಡ ಜನರಿಗೆ ಉಚಿತ ಸೇವೆ ನೀಡುವ ಮೂಲಕ ವೈದ್ಯರು ಸಮಾಜ ಸೇವೆ ಸಹ ಮಾಡಬೇಕು ಎಂದು ಬೆಂಗಳೂರು ರಾಜೀವಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾಲಯದ ಕುಲಪತಿ ಡಾ. ಎಸ್. ಸಚ್ಚಿದಾನಂದ ಹೇಳಿದರು.

ಸತ್ತೂರಿನ ಡಾ. ಡಿ. ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಬುಧವಾರ ನಡೆದ ಎಸ್​ಡಿಎಂ ದಂತ ಮಹಾವಿದ್ಯಾಲಯದ 29ನೇ ಪದವಿ ಪ್ರದಾನ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು. ಇಂದಿನ ದಿನಗಳಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿವೆ. ಅದಕ್ಕೆ ತಕ್ಕಂತೆ ಹೊಸ ಸಂಶೋಧನೆ ನಡೆಸಬೇಕು ಎಂದು ಸಲಹೆ ನೀಡಿದರು.

ಋಣಾತ್ಮಕ ವಿಚಾರ ಮಾಡುವುದನ್ನು ಬಿಟ್ಟು ಧನಾತ್ಮಕ ವಿಚಾರ ಮಾಡಲು ಪ್ರಾರಂಭಿಸಿದಾಗ ಮಾತ್ರ ಯಶಸ್ಸು ಪಡೆಯಲು ಸಾಧ್ಯ. ಋಣಾತ್ಮಕ ವಿಚಾರ ಮಾಡುವುದರಿಂದ ದೇಶದಲ್ಲಿ ಸುಮಾರು 1 ಕೋಟಿ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಕಾರಾತ್ಮಕ ವಿಚಾರಗಳು ನಾವು ಕೆಲಸದಲ್ಲಿ ತೊಡಗಿಕೊಳ್ಳುವಂತೆ ಮಾಡುತ್ತವೆ. ಹೀಗಾಗಿ ಸದಾ ಒಳ್ಳೆಯ ವಿಚಾರಗಳನ್ನು ಮಾಡಬೇಕು. ಜೀವನ ತುಂಬಾ ಅಮೂಲ್ಯ. ಅದನ್ನು ಅನುಭವಿಸುವ ಜೊತೆಗೆ, ಉತ್ತಮ ಜೀವನ ನಡೆಸಲು ಯೋಜನೆ ರೂಪಿಸಿಕೊಳ್ಳಬೇಕು.

ಜಗತ್ತಿನಲ್ಲಿ ಮನುಷ್ಯನ ಬುದ್ಧಿಗಿಂತ ದೊಡ್ಡದು ಇನ್ನೊಂದಿಲ್ಲ. ಸಾಧನೆ ಮಾಡಬೇಕು ಎಂಬ ಕನಸು ಕಂಡರೆ ಸಾಲದು. ಆ ಸಾಧನೆಯ ಗುರಿ ತಲುಪಲು ಪ್ರಾರಂಭದಿಂದಲೇ ಸತತ ಪ್ರಯತ್ನ ಮಾಡಬೇಕು. ಯಾವುದೇ ಅಡೆತಡೆಗಳ ಎದುರಾದರೂ ಅವುಗಳನ್ನು ಸವಾಲಾಗಿ ಸ್ವೀಕರಿಸಿ ಗುರಿ ತಲುಪುವತ್ತ ಹೆಜ್ಜೆ ಹಾಕಬೇಕು ಎಂದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವ ವಿದ್ಯಾಲಯದ ಕುಲಪತಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ಜೀವನದಲ್ಲಿ ಹಣಕ್ಕೆ ಹೆಚ್ಚಿನ ಮಹತ್ವ ನೀಡದೆ ಆದರ್ಶ, ವ್ಯಕ್ತಿತ್ವ ಹಾಗೂ ಮೌಲ್ಯಗಳಿಗೆ ಆದ್ಯತೆ ನೀಡಬೇಕು. ನಮ್ಮ ಸಂಸ್ಥೆಯಲ್ಲಿ ಪಡೆದ ಶಿಕ್ಷಣ ತಳಪಾಯವಾಗಿದೆ. ಇನ್ನೂ ಜೀವನದಲ್ಲಿ ಕಲಿಯುವುದು ಸಾಕಷ್ಟಿದೆ. ಸಂಸ್ಥೆಯ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ನೀತಿ, ಮೌಲ್ಯ, ತತ್ತ್ವಳನ್ನೂ ಕಲಿಸಲಾಗುತ್ತಿದೆ ಎಂದರು.

ಸಮಾರಂಭದಲ್ಲಿ ಪದವಿ ವಿಭಾಗದಲ್ಲಿ 90 ವಿದ್ಯಾರ್ಥಿಗಳು, ಸ್ನಾತಕೋತ್ತರ ವಿಭಾಗದಲ್ಲಿ 43 ವಿದ್ಯಾರ್ಥಿಗಳು ಸೇರಿ 133 ವಿದ್ಯಾರ್ಥಿಗಳು ಪ್ರಮಾಣಪತ್ರ ಪಡೆದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವ ವಿದ್ಯಾಲಯದ ಉಪ ಕುಲಪತಿ ಡಾ. ನಿರಂಜನಕುಮಾರ ಅಧ್ಯಕ್ಷತೆ ವಹಿಸಿದ್ದರು. ಉಪ ಕುಲಪತಿಗಳಾದ ಡಾ. ಎಸ್.ಕೆ. ಜೋಶಿ, ವಿ. ಜೀವಂಧರಕುಮಾರ, ರಜಿಸ್ಟ್ರಾರ್ ಡಾ. ಯು.ಎಸ್. ದಿನೇಶ, ವಿವಿಧ ವಿಭಾಗಗಳ ಮುಖ್ಯಸ್ಥರು, ವಿದ್ಯಾರ್ಥಿಗಳು, ಪಾಲಕರು, ಇತರರು ಇದ್ದರು. ಕಾಲೇಜಿನ ಪ್ರಾಚಾರ್ಯ ಡಾ. ಶ್ರೀನಾಥ ಠಾಕೂರ ಸ್ವಾಗತಿಸಿದರು. ಡಾ. ಆನಂದ ಪಾಟೀಲ ವಂದಿಸಿದರು.

ರಶ್ಮಿತಾ ಚಿನ್ನದ ಹುಡುಗಿ: ಕಾಲೇಜಿನ ಡಾ. ರಶ್ಮಿತಾ ಆರ್. ಅವರು ಡಾ. ಡಿ. ವೀರೇಂದ್ರ ಹೆಗ್ಗಡೆ ಬಂಗಾರದ ಪದಕ ಸೇರಿ ಒಟ್ಟು ಆರು ಪದಕಗಳನ್ನು ಪಡೆದರು. ಡಾ. ವಿನಯದತ್ತಾ ಬಿ.ಎಸ್., ಡಾ. ಗುಂಜಿತ ಮಾರ್ವಾಹ ತಲಾ 2 ಮತ್ತು ಡಾ. ಮೊಹಮ್ಮದ ನೌಮಾನ ಎ. ಮುಜಾವರ, ಡಾ. ಪಾರ್ಖಿ ಮಾಥೂರ, ಡಾ. ಋಷಿಕೇಶಕುಮಾರ ಹಾಗೂ ಡಾ. ಸಾವ್ಲಾ ಬಕುಲೇಶ ತಲಾ ಒಂದು ಚಿನ್ನದ ಪದಕ ಪಡೆದರು.

ಕಲಿಕೆ ವಿಷಯದಲ್ಲಿ ಪಾಲಕರು ಮಕ್ಕಳ ಮೇಲೆ ಒತ್ತಡ ಹಾಕದೇ ಕನಸು ಬಿತ್ತಿದರೆ ಸಾಧನೆ ಮಾಡಲು ಅನುಕೂಲವಾಗುತ್ತದೆ. ನನ್ನ ತಂದೆ-ತಾಯಿ ಸಹ ಯಾವುದೇ ಒತ್ತಡ ಹೇರದೇ ಪ್ರೋತ್ಸಾಹಿಸಿದ್ದರಿಂದ 6 ಚಿನ್ನದ ಪದಕ ಪಡೆಯಲು ಸಾಧ್ಯವಾಯಿತು. ಪಾಲಕರು, ಎಸ್​ಡಿಎಂ ಸಂಸ್ಥೆ ಹಾಗೂ ಉತ್ತಮ ಶಿಕ್ಷಣ ನೀಡಿದ ಗುರುಗಳಿಗೆ ಚಿರಋಣಿಯಾಗಿದ್ದೇನೆ.
ಡಾ.ರಶ್ಮಿತಾ ಆರ್, ಆರು ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...