More

  ವೈದ್ಯರ ಕಾರ್ಯಕ್ಕೆ ಸಚಿವ ಪ್ರಲ್ಹಾದ ಜೋಶಿ ಮೆಚ್ಚುಗೆ

  ಹುಬ್ಬಳ್ಳಿ/ದೆಹಲಿ: ಕರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಹುಬ್ಬಳ್ಳಿಯ ಕಿಮ್್ಸ ವೈದ್ಯರೊಂದಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭಾನುವಾರ ದೂರವಾಣಿ ಮೂಲಕ ಮಾತನಾಡಿ, ವೈದ್ಯಕೀಯ ಸಿಬ್ಬಂದಿಯ ಸೇವೆಗೆ ಪ್ರಧಾನಿ ಪರವಾಗಿ ಮೆಚ್ಚುಗೆ ವ್ಯಕ್ತಪಡಿಸಿದರು.

  ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ತಮ್ಮ ಕುಟುಂಬ ಬಿಟ್ಟು ಆಸ್ಪತ್ರೆಯಲ್ಲಿ ಸೋಂಕಿತರ ಚಿಕಿತ್ಸೆಗಾಗಿ ಹಗಲಿರುಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಸೋಂಕು ನಿವಾರಣೆಯ ಹೋರಾಟದಲ್ಲಿ ಕೇಂದ್ರ ಸರ್ಕಾರ ಸದಾ ವೈದ್ಯರ ಬೆಂಬಲಕ್ಕೆ ನಿಲ್ಲುವುದಾಗಿ ಸಚಿವ ಜೋಶಿ ತಿಳಿಸಿದರು. ಕಿಮ್ಸ್​ನಲ್ಲಿ ಕರೊನಾ ಸೋಂಕಿತರಿಗೆ ನೀಡುತ್ತಿರುವ ಚಿಕಿತ್ಸೆಯ ಕುರಿತು ಮಾಹಿತಿ ಪಡೆದರು. ಜಿಲ್ಲಾಧಿಕಾರಿ ಹಾಗೂ ತಂಡದ ಕಾರ್ಯವೈಖರಿಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಉತ್ತಮ ಕಾರ್ಯನಿರ್ವಹಿಸಿದೆ ಎಂದು ತಿಳಿಸಿದರು. ವೈದ್ಯರೊಂದಿಗೆ ನರ್ಸ್, ಆಶಾ ಕಾರ್ಯಕರ್ತೆಯರು ಸಹ ಉತ್ತಮ ಕಾರ್ಯನಿರ್ವಹಿಸಿದ್ದಾರೆ. ಪತ್ರಕರ್ತರು ಕರೊನಾ ಸೋಂಕಿನ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

  See also  ಕಾಂಕ್ರಿಟ್ ರಸ್ತೆ ಕಾಮಗಾರಿ ಚುರುಕಿಗೆ ಶಾಸಕ ಟೆಂಗಿನಕಾಯಿ ಸೂಚನೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts