ರಾಣೆಬೆನ್ನೂರ: ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಕೈಗೆ ಕಪ್ಪು ಬಟ್ಟೆ ಧರಿಸಿ ನಗರದ ಮಿನಿ ವಿಧಾನಸೌಧ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಸಂಘದ ತಾಲೂಕು ಅಧ್ಯಕ್ಷ ಡಾ. ನಾಗರಾಜ ದೊಡ್ಮನಿ ಮಾತನಾಡಿ, ಪಶ್ಚಿಮ ಬಂಗಾಳದ ಎನ್ಆರ್ಎಸ್ ವೈದ್ಯಕೀಯ ಸಂಸ್ಥೆಯ ವೈದ್ಯ ಡಾ. ಪರಿಭಾ ಮುಖರ್ಜಿ ಮೇಲೆ ರೋಗಿಯೊಬ್ಬರ ಸಂಬಂಧಿಕರು ಹಲ್ಲೆ ಮಾಡಿರುವುದು ಖಂಡನೀಯ.
ಘಟನೆ ಕುರಿತು ಸೂಕ್ತ ತನಿಖೆ ನಡೆಸಬೇಕು. ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ, ಶಿಕ್ಷೆ ವಿಧಿಸಬೇಕು. ಕೇಂದ್ರ ಹಾಗೂ ಅಲ್ಲಿಯ ರಾಜ್ಯ ಸರ್ಕಾರ ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಶಿರಸ್ತೇದಾರ್ ಎಂ.ಎನ್. ಹಾದಿಮನಿ ಅವರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ರವಾನಿಸಿದರು.
ಸಂಘದ ಕಾರ್ಯದರ್ಶಿ ಡಾ. ರವಿ ಕುಲಕರ್ಣಿ, ಡಾ. ವಿದ್ಯಾ ವಾಸುದೇವಮೂರ್ತಿ, ಡಾ. ಅಭಿನಂದನ ಸಾವುಕಾರ, ಡಾ. ಪ್ರವೀಣ ಖನ್ನೂರ, ಡಾ. ಆರ್.ಬಿ. ಮುಡದೇವಣ್ಣನವರ, ಡಾ. ಶೈಲಶ್ರೀ ಖನ್ನೂರ, ಡಾ. ವೀಣಾ ಕೆಂಚಪ್ಪನವರ, ಡಾ. ಎ.ಟಿ. ಬೆನ್ನೂರ, ಡಾ. ಹೇಮಾ ಪಾಟೀಲ ಇತರರು ಪಾಲ್ಗೊಂಡಿದ್ದರು.