23.2 C
Bangalore
Saturday, December 14, 2019

ವೈದ್ಯ ಹುದ್ದೆ ಭರ್ತಿಗೆ ಕ್ರಮ

Latest News

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡಣೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡಣೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

16 ಯುವಕರ ಮೇಲೆ ಪ್ರಕರಣ ದಾಖಲು

ಬಾದಾಮಿ: ದ್ವಿಚಕ್ರ ವಾಹನಕ್ಕೆ ಹಾದು ಹೋಗಲು ಅವಕಾಶ ನೀಡಲಿಲ್ಲ ಎಂಬ ಕ್ಷುಲಕ ಕಾರಣಕ್ಕೆ ಇಬ್ಬರು ಯುವಕರ ಮಧ್ಯೆ ಆರಂಭವಾದ ಜಗಳ ಶನಿವಾರ ವಿಕೋಪಕ್ಕೆ...

ಮೆಟ್ರೋಗೆ ಹಾರಿ ಗಂಡ ಮೃತಪಟ್ಟ ಒಂದು ಗಂಟೆಯಲ್ಲೇ ಮನೆಯಲ್ಲಿ ನೇಣು ಬಿಗಿದುಕೊಂಡ ಹೆಂಡತಿ, ಮಗಳು!

ನವದೆಹಲಿ: ಗಂಡ ಮೆಟ್ರೋಗೆ ಹಾರಿ ಮೃತಪಟ್ಟ ಗಂಟೆಯೊಳಗೆ ಮನೆಯಲ್ಲಿ ಹೆಂಡತಿ ಮತ್ತು ಮಗಳು ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ದೆಹಲಿಯ ಜವಹರ ಲಾಲ್​ ನೆಹರು ಮೆಟ್ರೋ ನಿಲ್ದಾಣದಲ್ಲಿ ಬೆಳಗ್ಗೆ...

ಬ್ಯಾಡಗಿ: ತಾಲೂಕು ಆಸ್ಪತ್ರೆಯಲ್ಲಿ ಖಾಲಿಯಿರುವ ವೈದ್ಯ ಸಿಬ್ಬಂದಿ ಹುದ್ದೆ ಭರ್ತಿಗೊಳಿಸಲು ಇಲಾಖೆ ಮೇಲಧಿಕಾರಿಗಳೊಂದಿಗೆ ರ್ಚಚಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.

ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಆವರಣದಲ್ಲಿ ಶನಿವಾರ ಜರುಗಿದ ಆರೋಗ್ಯ ರಕ್ಷಾ ಸಮಿತಿ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ಕಟ್ಟಡ ಹಾಗೂ ಹೆಚ್ಚು ಸೌಲಭ್ಯ ಹೊಂದಿದ ಆಸ್ಪತ್ರೆಯಿದ್ದರೂ, ಸಿಬ್ಬಂದಿ ಕೊರತೆ ತೀವ್ರವಾಗಿದೆ. ಮಂಜೂರಾದ 82 ಹುದ್ದೆಗಳ ಪೈಕಿ, 24 ವೈದ್ಯ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಇನ್ನುಳಿದ 58 ಹುದ್ದೆ ಖಾಲಿಯಿವೆ. ಸರ್ಕಾರಕ್ಕೆ ವೈದ್ಯಾಧಿಕಾರಿಗಳು ಹಲವು ಬಾರಿ ಪತ್ರ ಬರೆದರೂ ಸಿಬ್ಬಂದಿ ನೇಮಕ ಮಾಡಿಲ್ಲ. ಹೀಗಾಗಿ ನಿತ್ಯ ಬಂದು ಹೋಗುವ ರೋಗಿಗಳಿಗೆ ತೀವ್ರ ಸಮಸ್ಯೆ ಉಂಟಾಗುತ್ತಿದೆ. ಈ ಕುರಿತು ಅಧಿವೇಶನದಲ್ಲಿ ಪ್ರಸ್ತಾಪಿಸುವ ಮೂಲಕ ಸರ್ಕಾರದ ಗಮನ ಸೆಳೆಯುತ್ತೇನೆ ಎಂದರು.

ಗುತ್ತಿಗೆ ನೌಕರರಿಗೆ ವೇತನವಿಲ್ಲ: ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವ ಗುತ್ತಿಗೆ ಆಧಾರಿತ ಡಿ ದರ್ಜೆ ನೌಕರರಿಗೆ ಕಳೆದ ಆರು ತಿಂಗಳಿಂದ ವೇತನ ನೀಡಿಲ್ಲ. ಪ್ರತಿಯೊಬ್ಬ ಸಿಬ್ಬಂದಿಗೆ ಕನಿಷ್ಠ 40-50 ಸಾವಿರ ರೂ. ವೇತನ ಬಾಕಿ ಉಳಿದುಕೊಂಡಿದೆ. ಈ ಕುರಿತು ಸಂಬಂಧಿಸಿದ ಗುತ್ತಿಗೆದಾರರ ಜೊತೆ ಮಾತನಾಡಿ ವೇತನ, ಪಿಎಫ್ ಸೇರಿ ಇತರೆ ಸೌಲಭ್ಯ ಕಲ್ಪಿಸಲು ಸೂಚಿಸಲಾಗುವುದು. ದಿನಗೂಲಿ, ಗುತ್ತಿಗೆ ಸಿಬ್ಬಂದಿಯನ್ನು ಆಸ್ಪತ್ರೆ ವತಿಯಿಂದ ನೇಮಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಊಟದ ಮನೆ ನಿರ್ವಣ: ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಪುಟ್ಟರಾಜ ಮಾತನಾಡಿ, ಆಸ್ಪತ್ರೆಗೆ ಪ್ರತಿದಿನ 100-300 ಜನ ರೋಗಿಗಳು ಬಂದು ಹೋಗುತ್ತಿದ್ದು, ಇನ್ನಷ್ಟು ಸೌಲಭ್ಯಗಳು ಬೇಕಿದೆ. ರೋಗಿಗಳ ಜೊತೆ ಬರುವ ಸಾರ್ವಜನಿಕರಿಗೆ ಊಟ ಮಾಡಲು ಪ್ರತ್ಯೇಕ ಕೊಠಡಿಗಳಿಲ್ಲದೆ, ರೋಗಿಗಳ ಹಾಲ್​ನಲ್ಲಿ ಊಟ ಮಾಡುವ ಮೂಲಕ ಸ್ವಚ್ಛತೆಗೆ ತೊಂದರೆ ಉಂಟಾಗಿದೆ. ಹೀಗಾಗಿ ಪ್ರತ್ಯೇಕ ಕಟ್ಟಡ ನಿರ್ವಿುಸಲು ಶಾಸಕರು ಅನುದಾನ ನೀಡಬೇಕು. ರಾತ್ರಿ ಹೊತ್ತಲ್ಲಿ ಸ್ಟಾಪ್ ನರ್ಸ್ ಹಾಗೂ ಒಂದೆರಡು ಜನ ಸಿಬ್ಬಂದಿ ಸೇವೆ ಸಲ್ಲಿಸುತ್ತಾರೆ. ಆಗಾಗ ಗಲಾಟೆ, ಇತರೆ ಸಮಸ್ಯೆಗಳು ಉಂಟಾಗುತ್ತಿದ್ದು, ಪೊಲೀಸ ಸಿಬ್ಬಂದಿ ನೇಮಿಸಬೇಕು ಎಂದರು.

ಶೌಚಗೃಹ ಸಮಸ್ಯೆಗಳಿಗೆ ಕಾಯಂ ಪರಿಹಾರ, ಉದ್ಯಾನ ಸೇರಿ ವಿವಿಧ ಸೌಲಭ್ಯ ಕಲ್ಪಿಸುವಂತೆ ಮನವಿ ಸಲ್ಲಿಸಿದರು. ಪಿಕಾರ್ಡ್ ಬ್ಯಾಂಕ್ ರಾಜ್ಯ ನಿರ್ದೇಶಕ ಸುರೇಶ ಯತ್ನಳ್ಳಿ, ಪುರಸಭೆ ಮುಖ್ಯಾಧಿಕಾರಿ ವಿ.ಎಂ. ಪೂಜಾರ, ಆರೋಗ್ಯ ಸಮಿತಿ ಸದಸ್ಯರಾದ ಸುರೇಶ ಉದ್ಯೋಗಣ್ಣನವರ, ವೀರೇಂದ್ರ ಶೆಟ್ಟರ, ಹೊನ್ನೂರಪ್ಪ ಕಾಡಸಾಲಿ, ಶಶಿಕಲಾ ಪೂಜಾರ, ಪುರಸಭೆ ಸದಸ್ಯೆ ಫಕ್ಕಿರಮ್ಮ ಚಲವಾದಿ, ಶಿವನಗೌಡ್ರ ಬಸನಗೌಡ್ರ, ಶಿವಯೋಗಿ ಗಡಾದ, ಮೋಹನ ಕತ್ತಿ, ಡಾ.ಬಿ.ಆರ್. ಲಮಾಣಿ ಇತರರಿದ್ದರು.

ಪ್ರತಿ ತಿಂಗಳು ಸಭೆಗೆ ಸೂಚನೆ: ಪ್ರತಿ ತಿಂಗಳು ಕೊನೆಯ ಶನಿವಾರ ಸಭೆ ಆಯೋಜನೆ ಮಾಡಬೇಕು. ಸಭೆಯ ನಾಲ್ಕು ದಿನ ಮುಂಚೆ ಸಮಸ್ಯೆ ಹಾಗೂ ಬೇಡಿಕೆ ಪತ್ರ, ಅನುದಾನ ಮಂಜೂರಾತಿ ಸೇರಿ ವಿವಿಧ ಮಾಹಿತಿಗಳನ್ನು ಸಭೆ ಪೂರ್ವದಲ್ಲಿ ತಮ್ಮ ಕಚೇರಿಗೆ ಸಲ್ಲಿಸಬೇಕು ಎಂದು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ವೈದ್ಯಾಧಿಕಾರಿಗೆ ಸೂಚಿಸಿದರು.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...