More

  ಶಕ್ತಿ ಯೋಜನೆಗೆ ವರ್ಷದ ಸಂಭ್ರಮ

  ಜಿಲ್ಲೆಯ ಸಾರಿಗೆ ಸಂಸ್ಥೆಯಲ್ಲಿ 2.21 ಕೋಟಿ ಮಹಿಳೆಯರು ಪ್ರಯಾಣ ಕೆಎಸ್‌ಆರ್‌ಟಿಸಿ ಅಧಿಕಾರಿ ಸಿದ್ದೇಶ್ವರ ಹೆಬ್ಬಾಳ್ ಮಾಹಿತಿ
  ಚಿತ್ರದುರ್ಗ: ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ವರ್ಷ ತುಂಬಿದೆ.
  ಈ ಯೋಜನೆಯಡಿ ಕಳೆದ ಒಂದು ವರ್ಷದಲ್ಲಿ ಜಿಲ್ಲೆಯ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ 2.21 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ಚಿತ್ರದುರ್ಗ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ ಹೆಬ್ಬಾಳ್ ಮಾಹಿತಿ ನೀಡಿದ್ದಾರೆ.
  ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗಕ್ಕೆ ಈ ಯೋಜನೆಯಿಂದಾಗಿ 85.71 ಕೋಟಿ ರೂ. ಆದಾಯ ಲಭಿಸಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಗರ ಸಾರಿಗೆ, ಸಾಮಾನ್ಯ ಮತ್ತು ವೇಗದೂತ ಬಸ್ಸುಗಳಲ್ಲಿ ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಲು ನಾರಿಯರಿಗೆ ಅವಕಾಶವಿದೆ.
  ಶಕ್ತಿ ಯೋಜನೆ ಜಾರಿಯಾದ ನಂತರ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಜಿಲ್ಲಾದ್ಯಂತ 20ಕ್ಕೂ ಮಾರ್ಗಗಳನ್ನು ಹೆಚ್ಚಿಸಲಾಗಿದೆ. ಚಿತ್ರದುರ್ಗ ವಿಭಾಗಕ್ಕೆ ಅಶ್ವಮೇಧ, ವೇಗದೂತ ಸೇರಿ 30 ಹೊಸ ವಾಹನಗಳು ಸೇರ್ಪಡೆಯಾಗಿವೆ. ಯೋಜನೆ ಜಾರಿ ಬಳಿಕ ನಿತ್ಯ ಸರಾಸರಿ 60 ಸಾವಿರಕ್ಕೂ ಹೆಚ್ಚು ಮಹಿಳೆಯರು ಜಿಲ್ಲೆಯಿಂದ ವಿವಿಧ ಮಾರ್ಗಗಳ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

  See also  ಶಕ್ತಿ ಯೋಜನೆಗೆ ಒಲಿದು ಬಂತು ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts