16 C
Bangalore
Thursday, December 12, 2019

ಶತಮಾನದ ದಾರ್ಶನಿಕ ಚೇತನ

Latest News

ಮಣ್ಣು ಮಾಲಿನ್ಯದಿಂದ ಜೀವಸಂಕುಲಕ್ಕೆ ಸಂಕಟ

ಮಣ್ಣಿನ ಮಾಲಿನ್ಯವನ್ನು ನಿರ್ಲಕ್ಷಿಸುತ್ತಿದ್ದೇವೆ. ಲಕ್ಷಾಂತರ ವರ್ಷಗಳ ನೈಸರ್ಗಿಕ ಪ್ರಕ್ರಿಯೆಯಿಂದ ಮಣ್ಣು ರೂಪುಗೊಳ್ಳುತ್ತದೆ. ಆದರೆ, ಅದಕ್ಕೆ ಹೇಗೆ ಹಾನಿ ಮಾಡುತ್ತಿದ್ದೇವೆ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ...

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

| ವೆಂಕಟಸುಬ್ಬು ಮೋಕ್ಷಗುಂಡಂ

ಜಗದ್ಗುರು ಶ್ರೀ ಆದಿಶಂಕರಾಚಾರ್ಯ ಪರಂಪರೆಯ ಪೀಠಾಧಿಪತಿಗಳಾಗಿ ಸಮಾಜಮುಖಿ ಸೇವೆ ಸಲ್ಲಿಸಿ ಆದರ್ಶಪ್ರಾಯರಾಗಿದ್ದ ಮಹಾನ್ ಚೇತನ, ತಪಸ್ವಿ ಶ್ರೀ ಸಚ್ಚಿದಾನಂದ ವಾಲುಕೇಶ್ವರ ಭಾರತೀ ಮಹಾಸ್ವಾಮಿಗಳು. ಅವರ ಜನ್ಮಶತಾಬ್ದದ ಆರಂಭೋತ್ಸವ ಇದೇ ಭಾನುವಾರ (ಸೆ. 22) ಕೋಟೆನಾಡು ಚಿತ್ರದುರ್ಗದಲ್ಲಿ ಆಯೋಜನೆಗೊಂಡಿದೆ.

ಭಾರತದ ಪ್ರಾಚೀನ ಧಾರ್ವಿುಕ ಕೇಂದ್ರಗಳಲ್ಲಿ ಪ್ರಮುಖವಾದುದು ಶ್ರೀ ಕೂಡಲಿ ಶೃಂಗೇರಿ ಶಂಕರಾಚಾರ್ಯ ಮಹಾಸಂಸ್ಥಾನ. ಇದರ ಈ ಹಿಂದಿನ ಪೀಠಾಧೀಶರಾಗಿದ್ದ ಶ್ರೀ ಸಚ್ಚಿದಾನಂದ ವಾಲುಕೇಶ್ವರ ಭಾರತೀ ಮಹಾಸ್ವಾಮಿಗಳು ಇಡೀ ರಾಷ್ಟ್ರದಲ್ಲೇ ಶ್ರೇಷ್ಠ ವಿದ್ವಾಂಸರೆಂದೂ, ಸರಳ-ಸಜ್ಜನರೆಂದೂ, ಪವಾಡಪುರುಷರೆಂದೂ, ಕೀರ್ತಿ ಗಳಿಸಿದ್ದವರು.

ಶ್ರೀ ಸಚ್ಚಿದಾನಂದ ವಾಲುಕೇಶ್ವರ ಭಾರತೀ ಮಹಾಸ್ವಾಮಿಗಳ ಪೂರ್ವಾಶ್ರಮದ ಹೆಸರು ಲಿಂಗಾಶಾಸ್ತ್ರಿ ಎಂದು. ಚಿತ್ರದುರ್ಗ ಸಮೀಪದ ಹೊರೆಕರೆದೇವರಪುರ ಗ್ರಾಮದಲ್ಲಿ ನೂರು ವರ್ಷಗಳ ಹಿಂದೆ ಜನನ. ತಂದೆ ವೇದವಿದ್ವಾಂಸರಾಗಿದ್ದ ಅನಂತರಾಮಶಾಸ್ತ್ರಿಗಳು. ತಾಯಿ ಸಾವಿತ್ರಮ್ಮನವರು.

ಕೂಡಲಿ ಸಂಸ್ಥಾನದ ಅಂದಿನ ಪೀಠಾಧಿಪತಿಗಳ ಸಮ್ಮುಖದಲ್ಲಿ ಮೈಸೂರಿನಲ್ಲಿ 1930ರಿಂದಲೇ ವೇದ-ಸಂಸ್ಕೃತ-ವಿದ್ವತ್​ಗಳ ಶಾಸ್ತ್ರವಿಹಿತ ವಿದ್ಯಾಭ್ಯಾಸ ಜರುಗಿತು. ಶೃಂಗೇರಿ ಶಾರದಾಪೀಠದ ಪೂಜ್ಯ ಜಗದ್ಗುರು ಶ್ರೀ ಚಂದ್ರಶೇಖರ ಭಾರತೀ ಮಹಾಸ್ವಾಮಿಗಳಿಗೆ ವೇದಾಂತಪಾಠ ಬೋಧಿಸಿದ್ದ ಶ್ರೀ ವಿದ್ಯಾಭಿನವ ವಾಲುಕೇಶ್ವರ ಸ್ವಾಮಿಗಳೇ ಅಂದು ಬ್ರಹ್ಮಚಾರಿ ಲಿಂಗಾಶಾಸ್ತ್ರಿಗಳಿಗೆ ಮೊದಲ ಗುರುಗಳಾಗಿದ್ದರು ಎಂಬುದು ವಿಶೇಷ. ಆ ದಿನಗಳಲ್ಲಿ ಮೈಸೂರಿನ ದಸರಾ ಹಬ್ಬದ ವೇಳೆ ವಿದ್ಯಾರ್ಥಿ ಲಿಂಗಾಶಾಸ್ತ್ರಿಗಳ ವೃಂದದವರು ಅರಮನೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಆಶೀರ್ವಚನ ಮಾಡುತ್ತಿದ್ದರಂತೆ. ಲಿಂಗಾಶಾಸ್ತ್ರಿಗಳು 1940ರಲ್ಲಿ ಖ್ಯಾತ ವಿದ್ವಾಂಸ, ಜ್ಯೋತಿಷಿ ಚಿತ್ರದುರ್ಗದ ಶ್ರೀನಿವಾಸ ಅವಧಾನಿಗಳ ಪುತ್ರಿ ವೆಂಕಟಲಕ್ಷ್ಮಮ್ಮನವರನ್ನು ವಿವಾಹವಾದರು.

ಈ ಆದರ್ಶ ದಂಪತಿಗೆ ನಾಲ್ವರು ಮಕ್ಕಳು. ಎಪ್ಪತೆôದು ವರ್ಷಗಳ ಹಿಂದೆ ಶಾಸ್ತ್ರಿಗಳು ಕೋಟೆನಾಡು ಎನಿಸಿದ ಚಿತ್ರದುರ್ಗದಿಂದ ಶಿಕ್ಷಕ ವೃತ್ತಿಯನ್ನು ಆರಂಭಿಸಿದರು. ಕರ್ನಾಟಕ ಹಲವು ಪ್ರಮುಖ ಸ್ಥಳಗಳಲ್ಲಿಯೂ ಬೋಧಕರಾಗಿ ಸೇವೆ ಸಲ್ಲಿಸಿದರು.

ಶಿವಮೊಗ್ಗ ಸಮೀಪ ತುಂಗಾಭದ್ರಾನದಿಯ ಪವಿತ್ರ ಸಂಗಮದ ಬಳಿಯ ಶ್ರೀ ಕೂಡಲಿ ಕ್ಷೇತ್ರದಲ್ಲಿ 1976ರಲ್ಲಿ ಅಂದಿನ ಶ್ರೀ ನರಸಿಂಹ ಭಾರತೀ ಮಹಾಸ್ವಾಮಿಗಳಿಂದ ಲಿಂಗಾಶಾಸ್ತ್ರಿಗಳು ವಿಧಿವತ್ತಾಗಿ ಸಂನ್ಯಾಸಾಶ್ರಮ ಸ್ವೀಕಾರ ಮಾಡಿದರು. ಆಶ್ರಮಪದ್ಧತಿಯಂತೆ ಶ್ರೀ ಸಚ್ಚಿದಾನಂದ ವಾಲುಕೇಶ್ವರ ಭಾರತೀ ಎಂಬ ಅಭಿಧಾನವನ್ನು ಪಡೆದರು. 1976ರಿಂದ ನಲವತ್ತು ವರ್ಷಗಳ ಕಾಲ ಕೂಡಲಿ ಸಂಸ್ಥಾನದ ಪೀಠಾಧಿಪತಿಗಳಾಗಿದ್ದರು. ಕೂಡಲಿಕ್ಷೇತ್ರವು ಪ್ರಾಚೀನ ದೇವಾಲಯಗಳ ನಯನಮನೋಹರ ಯಾತ್ರಾಸ್ಥಳವಾಗಿದೆ.

ಈ ಕ್ಷೇತ್ರದಲ್ಲಿ ವಿದ್ಯಾಮಾತೆ ಶಾರದಾದೇವಿಯ ನೂತನ ದೇವಾಲಯ ನಿರ್ವಣಕಾರ್ಯ ಆರಂಭಗೊಂಡಿದೆ. ಶ್ರೀಮಠದ ಇಂದಿನ ಗುರುಗಳಾದ ಶ್ರೀ ವಿದ್ಯಾಭಿನವ ವಿದ್ಯಾರಣ್ಯ ಭಾರತೀ ಮಹಾಸ್ವಾಮಿಗಳು ಇದನ್ನು ಪೂರ್ಣಗೊಳಿಸಲು ಶ್ರದ್ಧಾಪೂರ್ವಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೆ ಕೂಡಲಿಮಠದ ಮೂಲಕ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಇದೇ ಭಾನುವಾರ (ಸೆ. 22) ಚಿತ್ರದುರ್ಗದ ಶ್ರೀನಿವಾಸ ಅವಧಾನಿ ಪ್ರಾಂಗಣದಲ್ಲಿ ಶ್ರೀ ಸಚ್ಚಿದಾನಂದ ವಾಲುಕೇಶ್ವರ ಭಾರತೀ ಮಹಾಸ್ವಾಮಿಗಳ ಶತಮಾನೋತ್ಸವ ಆಚರಣೆಯ ಕಾರ್ಯಕ್ರಮಗಳು ಶುಭಾರಂಭಗೊಳ್ಳಲಿವೆ.
ಈ ಕುರಿತ ಹೆಚ್ಚಿನ ವಿವರಗಳಿಗಾಗಿ ಸಂಪರ್ಕ: 81971-34802 / 98445-70404 (ಸಂಕರ್ಷಣ ಆಪಸ್ತಂಭ)

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...