18 C
Bangalore
Friday, December 6, 2019

ಶಮನವಾಗುವುದೇ ಕೈ ಬಂಡಾಯ?

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಹಾವೇರಿ: ನಾಮಪತ್ರ ವಾಪಸಾತಿಗೆ ಸೋಮವಾರ (ಏ.8) ಕೊನೆಯ ದಿನವಾಗಿದೆ. ಕಾಂಗ್ರೆಸ್​ನಿಂದ ಬಂಡಾಯವೆದ್ದು ಅಖಾಡಕ್ಕಿಳಿದಿರುವ ಮುಸ್ಲಿಂ ಮುಖಂಡರ ಮನವೊಲಿಕೆ ಮಾಡುವುದು ಕಾಂಗ್ರೆಸ್​ಗೆ ಬಿಸಿತುಪ್ಪವಾಗಿ ಪರಿಣಮಿಸಿದೆ.

ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಬಹುತೇಕವಾಗಿ ಅಲ್ಪಸಂಖ್ಯಾತರಿಗೇ ಕಾಂಗ್ರೆಸ್ ಟಿಕೆಟ್ ಮೀಸಲಿತ್ತು. ಆದರೆ, ಈ ಬಾರಿ ಟಿಕೆಟ್ ಕೈ ತಪ್ಪಿದ್ದರಿಂದ ಅಲ್ಪಸಂಖ್ಯಾತರು ಮುನಿಸಿಕೊಂಡಿದ್ದಾರೆ. ಜಿಲ್ಲಾ ಕಾಂಗ್ರೆಸ್​ನ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಡಾ. ಟಿ.ಎಚ್. ಕಲಕೋಟಿ, ಹಾನಗಲ್ಲ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ. ಮುಲ್ಲಾ ಸೇರಿ ಕಾಂಗ್ರೆಸ್​ನಲ್ಲಿ ಗುರುತಿಸಿಕೊಂಡಿದ್ದ ಕೆಲ ಅಲ್ಪಸಂಖ್ಯಾತರು ಚುನಾವಣೆ ಕಣಕ್ಕಿಳಿದಿದ್ದಾರೆ. ಇದು ಕಾಂಗ್ರೆಸ್ ಅಭ್ಯರ್ಥಿಗೆ ಆರಂಭಿಕ ಹಿನ್ನಡೆ ತಂದಿದೆ. ಹೀಗಾಗಿ, ಅವರ ನಾಮಪತ್ರ ವಾಪಸಾತಿಗೆ ಕೈ ಮುಖಂಡರು ಕಸರತ್ತು ನಡೆಸಿದ್ದಾರೆ.

ಕಣದಲ್ಲಿರುವ ಅಲ್ಪಸಂಖ್ಯಾತ ಮುಖಂಡರನ್ನು ಕಣದಿಂದ ಹಿಂದೆ ಸರಿಸುವ ಕೆಲಸವನ್ನು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಮಾಡಬೇಕು ಎಂಬ ಒತ್ತಾಯವೂ ಕೈ ಪಾಳಯದಲ್ಲಿ ಕೇಳಿಬಂದಿದೆ. ಜಮೀರ್ ಅಹ್ಮದ್ ಅವರು ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆ ಬಂದಿದ್ದು ಬಿಟ್ಟರೆ, ಚುನಾವಣೆ ಪ್ರಕ್ರಿಯೆ ಆರಂಭಗೊಂಡಾಗಿನಿಂದ ಜಿಲ್ಲೆಯತ್ತ ಸುಳಿದಿಲ್ಲ. ಜಿಲ್ಲೆಯ ಅಲ್ಪಸಂಖ್ಯಾತ ಮುಖಂಡರೊಂದಿಗೂ ಚರ್ಚೆ ನಡೆಸಿಲ್ಲ. ಇತ್ತ ಅಭ್ಯರ್ಥಿ ಕಡೆಯವರೂ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರನ್ನು ಸಂರ್ಪಸಿ ಮನವೊಲಿಕೆ ಮಾಡುವ ಕಸರತ್ತನ್ನೂ ನಡೆಸಿಲ್ಲ. ಇನ್ನೊಂದೆಡೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಇವರೊಂದಿಗೆ ಮಾತನಾಡಲು ಪುರುಸೊತ್ತಿಲ್ಲ. ಇದೆಲ್ಲದರ ಪರಿಣಾಮ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಡಾ. ಟಿ.ಎಚ್. ಕಲಕೋಟಿ ಸೋಮವಾರದಿಂದ ಪ್ರಚಾರದ ಅಖಾಡಕ್ಕೆ ಧುಮುಕಲು ಸಜ್ಜಾಗಿದ್ದಾರೆ.

ಲೋಕಸಭೆ ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿದವರು ಚುನಾವಣೆಗೆ ಸ್ಪರ್ಧಿಸಿಲ್ಲ ಎಂಬ ನಿಲುವನ್ನು ಕಾಂಗ್ರೆಸ್ ಮುಖಂಡರು ತಾಳಿರುವುದು ಮುಸ್ಲಿಂ ಸಮುದಾಯದವರನ್ನು ಕೆರಳಿಸಿದೆ. ಲೋಕಸಭೆ ಟಿಕೆಟ್​ಗಾಗಿ ಸಲೀಂ ಅಹ್ಮದ್ ಅವರು ಅರ್ಜಿ ಹಾಕಿದ್ದರಿಂದ ನಮ್ಮ ಸಮುದಾಯದಿಂದ ಬೇರೊಬ್ಬರಿಂದ ಅರ್ಜಿ ಹಾಕಿಸಿರಲಿಲ್ಲ. ಅವರಿಗೆ ಟಿಕೆಟ್ ತಪ್ಪಿರುವುದರಿಂದ ನಾವು ಕಣಕ್ಕಿಳಿದಿದ್ದೇವೆ. ನಮ್ಮ ಸಮುದಾಯದ ಶಕ್ತಿ ಏನು ಎಂಬುದನ್ನು ತೋರಿಸುವ ಕಾಲವೂ ಸನ್ನಿಹಿತವಾಗಿದೆ ಎಂದು ಹೆಸರು ಹೇಳಲಿಚ್ಛಿಸದ ಮುಸ್ಲಿಂ ಮುಖಂಡರೊಬ್ಬರು ತಿಳಿಸಿದರು.

ಜಮೀರ್​ಗೆ ಹೊಣೆ: ಬಂಡಾಯ ಅಭ್ಯರ್ಥಿಗಳನ್ನು ಕಣದಿಂದ ಹಿಂದೆ ಸರಿಸುವ ಹೊಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಾಂಗ್ರೆಸ್ ನಾಯಕರು ವಹಿಸಿದ್ದಾರೆ. ಜಿಲ್ಲೆಗೆ ಬಂದು ಕೇವಲ 10 ತಿಂಗಳಾಗಿರುವ ಜಮೀರ್ ಅಹ್ಮದ್ ಅವರು ಮುಸ್ಲಿಂ ಮುಖಂಡರೊಂದಿಗೆ ಅಷ್ಟೊಂದು ಸಂಪರ್ಕ ಸಾಧಿಸಿಲ್ಲ. ಹೀಗಾಗಿ, ಅವರ ಮಾತಿಗೆ ಮನ್ನಣೆ ಸಿಗುವುದೇ ಅಥವಾ ಇಲ್ಲವೇ ಎನ್ನುವುದು ನಾಮಪತ್ರ ವಾಪಸಾತಿಯ ಏ. 8ರಂದು ಮಧ್ಯಾಹ್ನ 3ರ ನಂತರ ತಿಳಿಯಲಿದೆ.

ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ 2 ಕ್ಷೇತ್ರಗಳಲ್ಲಿ ಟಿಕೆಟ್ ಕೊಡಬೇಕು ಎಂಬ ಚರ್ಚೆಯಾಗಿತ್ತು. ಅದರಂತೆ ಪಕ್ಷದ ವರಿಷ್ಠರು ನಡೆದುಕೊಳ್ಳುವ ವಿಶ್ವಾಸವಿತ್ತು. ಆದರೆ, ವಿಶ್ವಾಸಕ್ಕೆ ಧಕ್ಕೆ ಬಂದಿದ್ದರಿಂದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ರಾಜ್ಯದಲ್ಲಿಯೇ 2ನೇ ಅತಿಹೆಚ್ಚು ಅಲ್ಪಸಂಖ್ಯಾತರು ಹಾವೇರಿ ಕ್ಷೇತ್ರದಲ್ಲಿದ್ದೇವೆ. ನಮ್ಮ ಶಕ್ತಿ ಏನು ಎಂಬುದನ್ನು ತೋರಿಸಲು ಇದೊಂದು ಅವಕಾಶ. ನನ್ನೊಂದಿಗೆ ಇನ್ನೂ ಕೆಲ ಮುಸ್ಲಿಂ ಮುಖಂಡರು ನಾಮಪತ್ರ ಸಲ್ಲಿಸಿದ್ದು, ಅವರೊಂದಿಗೆ ರ್ಚಚಿಸುತ್ತಿದ್ದು, ಎಲ್ಲರೂ ಒಮ್ಮತದಿಂದ ಒಬ್ಬರನ್ನು ಕಣದಲ್ಲಿ ಉಳಿಸಿ ಇನ್ನುಳಿದವರು ನಾಮಪತ್ರ ವಾಪಸ್ ಪಡೆಯುತ್ತೇವೆ. ಯಾರು ಏನೇ ಹೇಳಿದರೂ ಒಬ್ಬ ಅಭ್ಯರ್ಥಿ ಕಣದಲ್ಲಿ ಉಳಿಯುವುದು ನಿಶ್ಚಿತ.
| ಡಾ. ಟಿ.ಎಚ್. ಕಲಕೋಟಿ, ಅಲ್ಪಸಂಖ್ಯಾತ ಮುಖಂಡ

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...