ಶರದ್ ಪವಾರ್​ಗೆ ಬಸವ ಕೃಷಿ ಪ್ರಶಸ್ತಿ

ವಿಜಯಪುರ: ಪ್ರಸಕ್ತ ಸಾಲಿನ ರಾಷ್ಟ್ರಮಟ್ಟದ ಬಸವ ಕೃಷಿ ಪ್ರಶಸ್ತಿಯನ್ನು ಕೇಂದ್ರದ ಮಾಜಿ ಸಚಿವ ಶರದ್​ಪವಾರ್ ಅವರಿಗೆ ನೀಡಲಾಗುವುದು ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಕೃಷಿ ಕ್ಷೇತ್ರದಲ್ಲಿ ಅವಿರತ ಸಾಧನೆಗೈದ ಸಾಧಕರಿಗೆ ಪ್ರತಿ ವರ್ಷ ರಾಷ್ಟ್ರಮಟ್ಟದ ಕೃಷಿ ಪ್ರಶಸ್ತಿ ನೀಡಲಾಗುತ್ತಿದೆ. ಕೂಡಲ ಸಂಗಮದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುವುದು ಎಂದು ಹೇಳಿದರು.

Leave a Reply

Your email address will not be published. Required fields are marked *