20.4 C
Bangalore
Monday, December 9, 2019

ಶರೀಫಗಿರಿಯಲ್ಲಿ ಬಂಗಾರದ ಹಬ್ಬ

Latest News

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಹಾವೇರಿ: ತತ್ತ್ವ ಪದಗಳ ಮೂಲಕ ನಾಡಿನಲ್ಲಿ ಭಾವೈಕ್ಯ, ಸೌಹಾರ್ದ ಸಾರಿದ ಶಿಶುನಾಳ ಶರೀಫರ 200ನೇ ಜನ್ಮದಿನವನ್ನು ಶಿಗ್ಗಾಂವಿ ತಾಲೂಕಿನ ಶರೀಫಗಿರಿಯಲ್ಲಿ ಜು. 1ರಿಂದ 3ರವರೆಗೆ ಬಂಗಾರದ ಹಬ್ಬ ಹೆಸರಿನಲ್ಲಿ ಆಯೋಜಿಸಲಾಗಿದ್ದು, ವರ್ಷವಿಡೀ ಶರೀಫರ ಕುರಿತು ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಶಾಸಕ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶರೀಫ ಶಿವಯೋಗಿ ಹಾಗೂ ಗುರುಗೋವಿಂದ ಶಿವಯೋಗಿ ಪಂಚಾಗ್ನಿಮಠ ಟ್ರಸ್ಟ್ ಆಶ್ರಯದಲ್ಲಿ ಜು. 1ರಿಂದ 3ರವೆಗೆ ಅದ್ದೂರಿ ಸಮಾರಂಭ ಆಯೋಜಿಸಲಾಗಿದೆ. ನಂತರ ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಶರೀಫರ ವೈಚಾರಿಕ ಚಿಂತನೆ, ಅವರ ತತ್ತ್ವಪದಗಳ ಕುರಿತ ವಿಮರ್ಶೆ, ಶರೀಫರ ಸಮಕಾಲೀನ ಕವಿಗಳ ನಡುವಿನ ಹೋಲಿಕೆ, ಅಧಾತ್ಮದ ಕುರಿತ ಶರೀಫರ ನಿಲುವು ಸೇರಿ ಹಲವು ರೀತಿಯಲ್ಲಿ ಶರೀಫರನ್ನು ಪರಿಚಯಿಸುವ ಕಾರ್ಯಕ್ರಮ ಆಯೋಜಿಸಲಾಗುವುದು. ನಂತರ ರಾಜಧಾನಿ ಬೆಂಗಳೂರು, ಮೈಸೂರು, ದೆಹಲಿಯಲ್ಲಿ ನಡೆಸಲಾಗುವುದು. ದೆಹಲಿಯಲ್ಲಿ ಸಂತ ಕಬೀರರು ಹಾಗೂ ಶರೀಫರ ನಡುವಿನ ಆಧ್ಯಾತ್ಮಿಕ, ವೈಚಾರಿಕ ಹೋಲಿಕೆ ಮಾಡಲಾಗುವುದು ಎಂದರು.

2020ರ ಜುಲೈ ತಿಂಗಳಲ್ಲಿ ಶಿಶುವಿನಹಾಳದ ಶರೀಫ ಗಿರಿಯಲ್ಲಿಯೇ ಸಮಾರೋಪ ಸಮಾರಂಭ ಆಯೋಜಿಸಿ, ಅದಕ್ಕೆ ರಾಷ್ಟ್ರಪತಿ ಇಲ್ಲವೇ ಪ್ರಧಾನ ಮಂತ್ರಿಗಳನ್ನು ಆಮಂತ್ರಿಸಲು ಚಿಂತನೆ ನಡೆದಿದೆ. ಈ ಮೂಲಕ ಶರೀಫರ ಚಿಂತನೆಗಳನ್ನು ರಾಷ್ಟ್ರಮಟ್ಟದಲ್ಲಿ ಪಸರಿಸುವ ಉದ್ದೇಶವಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಿ.ಡಿ. ಹಿರೇಗೌಡ್ರ, ಸಿದ್ದರಾಜ ಕಲಕೋಟಿ, ಎಸ್.ಎಲ್. ಪಾಟೀಲ ಇತರರಿದ್ದರು.

ಸುವರ್ಣ ಮಹೋತ್ಸವ ಉದ್ಘಾಟನೆ ನಾಳೆ

ಜು. 1ರಂದು ಬೆಳಗ್ಗೆ 11 ಗಂಟೆಗೆ ಶಿಶುವಿನಹಾಳದ ಶರೀಫ ಶಿವಯೋಗೀಶ್ವರ ಪ್ರೌಢಶಾಲೆ ಆವರಣದಲ್ಲಿ ಗುರು ಗೋವಿಂದ ಭಟ್ಟರ ಪ್ರಸಾದ ನಿಲಯದ ಸುವರ್ಣ ಮಹೋತ್ಸವ ಉದ್ಘಾಟನೆ ಸಮಾರಂಭ ನೆರವೇರಲಿದೆ. ಶಿರಹಟ್ಟಿ ಫಕೀರಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಉದ್ಘಾಟನೆ ನೆರವೇರಿಸಲಿದ್ದು, ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3.30ಕ್ಕೆ 1ನೇ ವಿಚಾರ ಸಂಕಿರಣದಲ್ಲಿ ಡಾ. ಬಾಳಣ್ಣ ಶೀಗಿಹಳ್ಳಿ ಹಾಗೂ ಡಾ. ರಹಮತ್ ತರೀಕೆರೆ ಅವರು ಶರೀಫರ ಕುರಿತು ವಿಷಯ ಮಂಡಿಸಲಿದ್ದಾರೆ.

ಜು. 2ರಂದು ಬೆಳಗ್ಗೆ 11ಕ್ಕೆ ಶರೀಫ ಶಿವಯೋಗೀಶ್ವರ ಪ್ರೌಢಶಾಲೆಯ ಸುವರ್ಣ ಮಹೋತ್ಸವ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೆರವೇರಿಸಲಿದ್ದಾರೆ. ‘ಶಿಶುನಾಳ ಸಿರಿ’ ಸ್ಮರಣ ಸಂಚಿಕೆ ಬಿಡುಗಡೆಗೊಳ್ಳಲಿದೆ. 1967ರಿಂದ ಇಲ್ಲಿಯವರೆಗೆ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ಮಾಜಿ ಸಿಎಂ ಜಗದೀಶ ಶೆಟ್ಟರ ಸನ್ಮಾನಿಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ನಡೆಯುವ 2ನೇ ವಿಚಾರ ಸಂಕಿರಣದಲ್ಲಿ ಎಸ್.ಬಿ. ಅಂಗಡಿ ಮತ್ತು ಎ.ಕೆ. ಅದವಾನಿಮಠ ಉಪನ್ಯಾಸ ನೀಡಲಿದ್ದಾರೆ.

ಜು. 3ರಂದು ಬೆಳಗ್ಗೆ 11 ಗಂಟೆಗೆ ಕವಿಗೋಷ್ಠಿ ನಡೆಯಲಿದೆ. ಮಧ್ಯಾಹ್ನ 3.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಕಲ್ಯಾಣ ಮಂಟಪದ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಅರಣ್ಯ ಸಚಿವ ಸತೀಶ ಜಾರಕಿಹೊಳಿ, ಶಾಮನೂರು ಶಿವಶಂಕರಪ್ಪ, ಅಜೀಮಫೀರ್ ಖಾದ್ರಿ, ಸೋಮಣ್ಣ ಬೇವಿನಮರದ, ಗುರುಗೋವಿಂದ ಶಿವಯೋಗಿ ಪಂಚಾಗ್ನಿಮಠ ಟ್ರಸ್ಟ್ ಅಧ್ಯಕ್ಷ ಎಸ್.ಜಿ. ದೇಶಪಾಂಡೆ ಪಾಲ್ಗೊಳ್ಳಲಿದ್ದಾರೆ. ಪ್ರತಿದಿನ ಸಂಜೆ 5.30ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ ಎಂದರು.Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...