ಶಾಮನೂರ್​ಗೆ ಡಿಸಿಎಂ ಇರಲಿ ಸಚಿವ ಸ್ಥಾನವೂ ಸಿಗಲಿಲ್ಲ!

ದಾವಣಗೆರೆ: ಚಿತ್ರದುರ್ಗ-ದಾವಣಗೆರೆ ಅವಳಿ ಜಿಲ್ಲೆಗಳಿಗೆ ಒಂದೂ ಸಚಿವ ಸ್ಥಾನ ನೀಡದೆ ಸಮ್ಮಿಶ್ರ ಸರ್ಕಾರ ಶಾಕ್ ನೀಡಿದೆ. ಡಿಸಿಎಂ ಅಭ್ಯರ್ಥಿ ಎಂದೇ ಬಿಂಬಿತವಾಗಿದ್ದ ದಾವಣಗೆರೆಯ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಸಚಿವ ಸ್ಥಾನವೂ ಸಿಕ್ಕಿಲ್ಲ. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರೂ ಆಗಿರುವ ಅವರನ್ನು ಉಪ ಮುಖ್ಯಮಂತ್ರಿ ಮಾಡಬೇಕು ಎಂಬ ಬೇಡಿಕೆ ಕೇಳಿಬಂದಿತ್ತು. ಶಿವಶಂಕರಪ್ಪ ಅವರನ್ನು ಡಿಸಿಎಂ ಮಾಡಬೇಕು ಎಂದು ಕೆಲವು ಮಠಾಧೀಶರೂ ಅಭಿಪ್ರಾಯ ಪಟ್ಟಿದ್ದರು. ಲಿಂಗಾಯತ ಕೋಟಾದಲ್ಲಿ ಅವರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ಮಾತುಗಳೂ ಕೇಳಿಬಂದಿದ್ದವು. ಆದರೆ ಆ ನಿರೀಕ್ಷೆಗಳೂ ಹುಸಿಯಾಗಿವೆ.

Leave a Reply

Your email address will not be published. Required fields are marked *