More

  ಶಾಲಾ ಮಕ್ಕಳಿಗೆ ಬ್ಯಾಗ್ ವಿತರಿಸಿದ ಚಂದರಗಿ

  ಬೆಳಗಾವಿ: ಪ್ರಧಾನಿ ನರೇಂದ್ರ ಮೊದಿ ಅವರ ಜನ್ಮದಿನದ ನಿಮಿತ್ತ ಬಿಜೆಪಿ ಮಹಾನಗರ ಘಟಕದ ಉಪಾಧ್ಯಕ್ಷ ರುದ್ರಣ್ಣ ಚಂದರಗಿ ಅವರು ಹನುಮಾನ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ನೀಡಿದರು. ಗುರುವಾರ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸ್ಥಳೀಯ ಶಾಸಕರ ಮೂಲಕ ವಿತರಿಸಿ, ಮಾತನಾಡಿದ ಅವರು, ಬಿಜೆಪಿ ಸೇವಾ ಪಾಕ್ಷಿಕ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ನಿಟ್ಟಿನಲ್ಲಿ ಹನುಮಾನಗರ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸಾಧನೆ ಮಾಡಿ ದೇಶ ಕಟ್ಟುವಲ್ಲಿ ಕೊಡುಗೆ ನೀಡುವಂತಾಗಬೇಕು.

  ಆದರ್ಶ ವ್ಯಕ್ತಿಗಳ ಜೀವನಾದರ್ಶ ಅಳವಡಿಸಿಕೊಳ್ಳುವಂತೆ ತಿಳಿಸಿದರು. ಬೆಳಗಾವಿ ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ ವಿಜಯ ಕೊಡಗನ್ನವರ, ಮಹಾನಗರ ಪಾಲಿಕೆ ಸದಸ್ಯರಾದ ಸಂದೀಪ ಜಿರಗ್ಯಾಳ, ಶ್ರೇಯಸ್ ನಾಕಾಡಿ, ಸವಿತಾ ಕಾಂಬಳೆ, ಬಿಜೆಪಿ ಮಹಾನಗರ ಘಟಕದ ಪ್ರಧಾನ ಕಾರ್ಯದರ್ಶಿ ವಿನಯ ಲಂಗೋಟಿ ಸೇರಿ ಬಿಜೆಪಿ ಕಾರ್ಯಕರ್ತರು, ನಾಗರಿಕರು ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts