20.4 C
Bangalore
Monday, December 9, 2019

ಶಾಲೆಗೆ ತಳಿರು ತೋರಣಗಳ ಶೃಂಗಾರ!

Latest News

ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಕಾಗವಾಡ, ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಮುನ್ನಡೆ

ಬೆಳಗಾವಿ: ಕಾಗವಾಡದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಮೊದಲ ಸುತ್ತಿನ ಎಣಿಕೆಯಲ್ಲಿ ಮುಂದಿದ್ದಾರೆ. ಅಂಚೆಮತಗಳ ಎಣಿಕೆಯಲ್ಲೂ ಮುಂದಿದ್ದ ಅವರು ನಂತರ ಮೊದಲ ಸುತ್ತಿನಲ್ಲೂ...

ಹಾವೇರಿ:2 ತಿಂಗಳ ಬೇಸಿಗೆ ರಜೆಯ ನಂತರ ಶಾಲೆಗಳು ಬುಧವಾರದಿಂದ ಪುನಾರಂಭಗೊಳ್ಳಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಅಗತ್ಯ ಪುಸ್ತಕ ಪೂರೈಸುವ ಜೊತೆಗೆ ಶಾಲಾ ಪ್ರಾರಂಭೋತ್ಸವಕ್ಕೆ ಭರದ ಸಿದ್ಧತೆಯಲ್ಲಿ ತೊಡಗಿದೆ.

ಮಂಗಳವಾರ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶಾಲಾ ಕೊಠಡಿ, ಮೈದಾನಗಳನ್ನು ಸ್ವಚ್ಛಗೊಳಿಸಿ, ತಳಿರು ತೋರಣಗಳಿಂದ ಸಿಂಗರಿಸಲಾಗುತ್ತಿದೆ. ಶಾಲೆಯ ಒಂದಿಷ್ಟು ಶಿಕ್ಷಕರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡರೆ, ಉಳಿದ ಶಿಕ್ಷಕರು ವಿದ್ಯಾರ್ಥಿಗಳ ಮನೆಮನೆಗೆ ಹೋಗಿ ಶಾಲಾ ಪ್ರಾರಂಭೋತ್ಸವ ಹಾಗೂ ಹೊಸ ಪ್ರವೇಶಕ್ಕೆ ಆಹ್ವಾನ ನೀಡಿದರು.

ಎಲ್ಲ ಶಾಲೆಗಳಲ್ಲಿ ಮೊದಲ ದಿನವಾದ ಬುಧವಾರ ಮಕ್ಕಳಿಗೆ ಸಿಹಿಯೂಟ ಮಾಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೆಲ ಶಾಲೆಗಳಲ್ಲಿ ಮೊದಲ ದಿನವೇ ಪುಸ್ತಕಗಳನ್ನು ವಿತರಿಸಲು ನಿರ್ಧರಿಸಿದ್ದು ಇದಕ್ಕಾಗಿ ಶಿಕ್ಷಕರು ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಬಸಾಪುರದಲ್ಲಿ ಜನಾಂದೋಲನ ಕಾರ್ಯಕ್ರಮ:ಜಿಲ್ಲಾದ್ಯಂತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮೇ 29ರಂದು ಜಿಲ್ಲಾಮಟ್ಟದ ಶಾಲಾ ಪ್ರಾರಂಭೋತ್ಸವ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ಸೇರಿಸುವ ಜನಾಂದೋಲನ ಕಾರ್ಯಕ್ರಮ ತಾಲೂಕಿನ ಬಸಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಲಿದೆ.

ಮೇ 29ರಿಂದ ಜೂನ್ 8ರವರೆಗೆ ವಿವಿಧ ಅಧಿಕಾರಿಗಳ ತಂಡಗಳನ್ನು ರಚಿಸಿ ಮಿಂಚಿನ ಸಂಚಾರದೊಂದಿಗೆ ಶಾಲೆಯ ದಾಖಲಾತಿ ಹಾಜರಾತಿ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳ ಪುನರ್ ದಾಖಲಾತಿ ಇತ್ಯಾದಿ ವಿಷಯಗಳ ಮೌಲ್ಯಮಾಪನ ನಡೆಸಲಾಗುವುದು ಎಂದು ಡಿಡಿಪಿಐ ಅಂದಾನೆಪ್ಪ ವಡಿಗೇರಿ ತಿಳಿಸಿದ್ದಾರೆ.

ಪುಸ್ತಕಗಳು ಲಭ್ಯ:ವಿವಿಧ ಮುದ್ರಣಾಲಯಗಳಿಂದ ಜಿಲ್ಲೆಗೆ ಒಂದರಿಂದ 10ನೇ ತರಗತಿಯ ಪುಸ್ತಕಗಳು ಬಂದಿದ್ದು, ವಿತರಿಸುವ ಕಾರ್ಯ ನಡೆದಿದೆ. ದೈಹಿಕ ಶಿಕ್ಷಣ ಸೇರಿ ಕೆಲ ವಿಷಯಗಳ ಪುಸ್ತಕಗಳು ಹೊರತುಪಡಿಸಿದರೆ ಬಹುತೇಕ ಎಲ್ಲ ವಿಷಯಗಳ ಪುಸ್ತಕಗಳು ಪೂರೈಕೆಯಾಗಿವೆ. ಜಿಲ್ಲೆಗೆ ಒಂದರಿಂದ 10ನೇ ತರಗತಿವರೆಗೆ ಒಟ್ಟು 19.19 ಲಕ್ಷ ಪುಸ್ತಕಗಳ ಬೇಡಿಕೆಯಿದ್ದು, ಇದರಲ್ಲಿ ಶೇ. 85ರಷ್ಟು ಪುಸ್ತಕಗಳು ಪೂರೈಕೆಯಾಗಿವೆ. ಪುಸ್ತಕಗಳನ್ನು ಶಾಲೆಗಳಿಗೆ ಪೂರೈಸಿ, ಅಲ್ಲಿಂದ ಮಕ್ಕಳಿಗೆ ವಿತರಿಸುವ ಕಾರ್ಯ ನಡೆದಿದೆ. ಇನ್ನೊಂದು ವಾರದಲ್ಲಿ ಎಲ್ಲ ಪುಸ್ತಕಗಳು ಬಂದು, ವಿದ್ಯಾರ್ಥಿಗಳ ಕೈ ಸೇರುವ ನಿರೀಕ್ಷೆಯಿದೆ.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...