ಬಾಗಲಕೋಟೆ: ಜಿಲ್ಲೆಯ ಬಾದಾಮಿ ಹಾಗೂ ಗುಳೇದಗುಡ್ಡ ತಾಲೂಕಿನ ವಿವಿಧ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ ಭೇಟಿ ನೀಡಿ ಮೂಲ ಸೌಕರ್ಯ ಪರಿಶೀಲಿಸಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚನೆ ನೀಡಿದರು.
ಬಾದಾಮಿ ತಾಲೂಕಿನ ಮಾಲಗಿ ಗ್ರಾಮದಲ್ಲಿರುವ ಅಂಗನವಾಡಿ ಕಟ್ಟಡ ಕಾಮಗಾರಿ, ಉಗಲವಾಟ ಗ್ರಾಮದ ಬದು ನೀರು ನಿರ್ವಹಣೆ ಕಾಮಗಾರಿ, ಕುಳಗೇರಿ ಕ್ರಾಸ್‌ನಲ್ಲಿ ಎಂ.ಆರ್.ಎಫ್ ಹಾಗೂ ಘನತಾಜ್ಯ ನಿರ್ವಹಣೆ ಕಾಮಗಾರಿ ಹಾಗೂ ಗುಳೇದಗುಡ್ಡ ತಾಲೂಕಿನ ತೋಗುಣಸಿ ಗ್ರಾಮದ ನೀರು ಸಂಸ್ಕರಣಾ ಘಟಕದ ಕಾಮಗಾರಿಯನ್ನು ವೀಕ್ಷಣೆ ಮಾಡಿ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ನಿಗದಿತ ಅವಽಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ಆಡಗಲ್ಲ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಕಂಪೌAಡ್ ಕಾಮಗಾರಿಯನ್ನು ಪರಿಶೀಲಿಸಿದರು. ಕುಳಗೇರಿ ಕ್ರಾಸ್‌ನಲ್ಲಿರುವ ನವೋದಯ ಶಾಲೆ ಮತ್ತು ಆಡಗಲ್ಲ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳ ಕಲಿಕೆಯ ಬಗ್ಗೆ ಪರೀಕ್ಷೆ ಮಾಡಿದರು. ಮಕ್ಕಳ ಬುದ್ದಿಮಟ್ಟವನ್ನು ಪ್ರತ್ಯೇಕವಾಗಿ ಗಮನಿಸಿ ಬೋಧನೆ ಮಾಡಲು ಶಿಕ್ಷಕರಿಗೆ ಸೂಚಿಸಿದರು. ನಂತರ ಮಕ್ಕಳೊಂದಿಗೆ ಸಂವಾದ ನಡೆಸಿ ಕುಂದು ಕೊರತೆಗಳನ್ನು ಆಲಿಸಿದರು. ಅಲ್ಲದೇ ಬಿಸಿ ಊಟದ ಕೋಣೆಗೆ ತೆರಳಿ ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು. ದಾಸ್ತಾನು ಕೋಣೆಗೆ ತೆರಳಿ ಆಹಾರ ಧಾನ್ಯಗಳ ಪರಿಶುದ್ದತೆಯನ್ನು ಗಣಮಿಸಿದರು.
ಈ ಸಂದರ್ಭದಲ್ಲಿ ಬಾದಾಮಿ ತಾ.ಪಂ ಕಾಯಾನಿರ್ವಾಹಕ ಅಽಕಾರಿ ಸುರೇಶ ಕೊಕ್ಕರೆ, ಗುಳೇದಗುಡ್ಡ ತಾ.ಪಂ ಕಾರ್ಯನಿರ್ವಾಹಕ ಅಽಕಾರಿ ಮಲ್ಲಿಕಾರ್ಜುನ ಬಡಿಗೇರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಆಕಾಶ ವಂದೆ, ಪಂಚಾಯಿತಿ ರಾಜ್ ಇಂಜಿನಿಯರಿAಗ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಅಶೋಕ ತೋಪಲಕಟ್ಟಿ ಸೇರಿದಂತೆ ಇತರರು ಇದ್ದರು.