ಚಿಕ್ಕಬಳ್ಳಾಪುರ : ರಾಜ್ಯ ಉಪ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಶಾಸಕರಿಗೆ ಕೆಲವೇ ದಿನಗಳಲ್ಲಿ ಸಚಿವ ಸ್ಥಾನ ಸಿಗಲಿದೆ ಎಂದು ಉಪಮುಖ್ಯಮಂತ್ರಿ ಡಾ ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದರು.
ತಾಲೂಕಿನ ನಂದಿಯ ಶ್ರೀ ಭೋಗನಂದೀಶ್ವರ ಸ್ವಾಮಿ ಆಲಯದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ಸ್ಥಾನಕ್ಕೆ ಸಂಬಂಧಿಸಿದಂತೆ ಯಾವುದೇ ಗೊಂದಲವಿಲ್ಲ. ಈಗಾಗಲೇ ಮುಖ್ಯಮಂತ್ರಿಗಳು ಪಕ್ಷದ ವರಿಷ್ಠರೊಂದಿಗೆ ಮಾಉಕತೆ ನಡೆಸಿದ್ದಾರೆ. ಅಂತಿಮ ಅನುಮೋದನೆ ಸಿಗುತ್ತಿದ್ದಂತೆ ಬಿಜೆಪಿ ಶಾಸಕರನ್ನು ಸಚಿವರನ್ನಾಗಿಸಲಾಗುತ್ತದೆ ಎಂದರು.
ಅನಿರ್ವಾಯವಾಗಿ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಸಲಾಗಿದೆ. ಉತ್ತಮ ನಿರ್ವಹಣೆ ಮತ್ತು ಸೇವೆಗೆ ಹೊರೆಯಾದರೂ ದೇಶದ ಅಭಿವೃದ್ಧಿಗೆ ಕೆಲ ನಿರ್ಣಯಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.
ಹೊಸ ವರ್ಷಕ್ಕೆ ಪೂಜೆ : ಹೊಸ ವರ್ಷದ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿಗಳು ನಂದಿ ಆಲಯದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಕೆಲ ಕಾಲ ಅಧಿಕಾರಿಗಳೊಂದಿಗೆ ಇಲಾಖೆ ಸಮಸ್ಯೆ ಮತ್ತು ಪ್ರಗತಿಯ ಬಗ್ಗೆ ಚರ್ಚಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್, ತಹಸೀಲ್ದಾರ್ ಕೆ.ನರಸಿಂಹಮೂರ್ತಿ ಮತ್ತಿತರರು ಇದ್ದರು.