ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಶಾಲೆ, ಶಾಲಾ ಮಕ್ಕಳಿಗೆ ಸಾಕಷ್ಟು ಸೌಲಭ್ಯ ಕಲ್ಪಿಸಲಾಗುತ್ತಿದ್ದರೂ ಮಕ್ಕಳ ದಾಖಲಾತಿ, ಹಾಜರಾತಿ ಹೆಚ್ಚುತ್ತಿಲ್ಲ. ಹಾಗಾಗಿ, ಶಿಕ್ಷಕರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೂಚಿಸಿದರು.
ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗಮಟ್ಟದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಮಕ್ಕಳು ನಿಯಮಿತವಾಗಿ ಶಾಲೆಗೆ ಹಾಜರಾಗುವಂತೆ ಶಾಲೆಯಲ್ಲಿ ಪೂರಕ ವಾತಾವರಣ ನಿರ್ಮಿಸಬೇಕು. ಶಿಕ್ಷಕರು, ಅಧಿಕಾರಿಗಳು, ಎಸ್ಡಿಸಿಎಂಸಿ ಸದಸ್ಯರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
“ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮದ ಅಡಿಯಲ್ಲಿ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಉನ್ನತ ಸ್ಥಾನದಲ್ಲಿರುವ ದಾನಿಗಳನ್ನು ಹುಡುಕಿ ಶಾಲೆಗಳನ್ನು ಅಭಿವೃದ್ಧಿಪಡಿಸಬೇಕು. ಹಳೆಯ ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ಸಹಾಯಕ್ಕೆ ಧಾವಿಸುವ ವಾತಾವರಣ ಸೃಷ್ಟಿಸಬೇಕು ಎಂದು ಹೇಳಿದರು.
ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ಸರ್ವ ರೀತಿ ಕ್ರಮ ಕೈಗೊಳ್ಳಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಎಲ್ಲ ಶಾಲೆಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಮಕ್ಕಳ ಕಲಿಕಾ ಕ್ರಮ ಹಾಗೂ ಫಲಿತಾಂಶದ ಸುಧಾರಣೆಗೆ ಮುಂದಾಗಬೇಕು. ಈಗಾಗಲೇ ಬೆಳಗಾವಿ ವಿಭಾಗದಲ್ಲಿ ಮಕ್ಕಳ ಕಲಿಕಾ ಗುಣಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಪ್ರತಿ ಶಾಲೆಗಳಿಗೆ ಉಸ್ತುವಾರಿಗಳನ್ನು ನೇಮಿಸಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಉಸ್ತುವಾರಿಗಳ ನೇಮಕಾತಿಯಿಂದ ಮಕ್ಕಳ ಕಲಿಕಾ ಗುಣಮಟ್ಟ ಸುಧಾರಣೆಯಾಗಿರುವದು ಕಂಡು ಬಂದಲ್ಲಿ ಇದನ್ನು ಇಡೀ ರಾಜ್ಯಾದ್ಯಂತ ಜಾರಿಗೊಳಿಸಲಾಗುವುದು ಎಂದರು.
ಶಾಲಾ ಮಕ್ಕಳಿಗೆ ಸಮವಸ, ಪುಸ್ತಕ, ಶೂ, ಸಾಕ್ಸ್ಗಳನ್ನು ಕೂಡಲೇ ವಿತರಿಸಲು ಕ್ರಮ ವಹಿಸಬೇಕು. ಕಳಪೆ ವಸ್ತುಗಳನ್ನು ವಿತರಣೆ ಮಾಡಿದರೆ ಮುಲಾಜಿಲ್ಲದೆ ಕ್ರಮ ವಹಿಸಲಾಗುವುದು. ಭಾರತದ ಸಂವಿಧಾನದ ಮಹತ್ವದ ಕುರಿತು ಮಕ್ಕಳಿಗೆ ತಿಳಿವಳಿಕೆ ಮೂಡಿಸುವುದು ಅವಶ್ಯ. ಪ್ರತಿದಿನ ಶಾಲೆಗಳಲ್ಲಿ ಸಂವಿಧಾನ ಪಿಠೀಕೆ ಓದಿಸಬೇಕು ಎಂದು ತಿಳಿಸಿದರು.
ಶಾಲಾ ಶಿಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶಕುಮಾರ ಸಿಂಗ್ ಮಾತನಾಡಿ, ಶಾಲೆಗಳಿಗೆ ಅಧಿಕಾರಿಗಳು ನಿಯಮಿತ ಭೇಟಿ ನೀಡಿ ಮಕ್ಕಳ ಕಲಿಕಾ ಗುಣಮಟ್ಟ ಸುಧಾರಿಸಲು ಮುಂದಾಗುವಂತೆ ತಿಳಿಸಿದರು. ಶಾಲಾ ಶಿಣ ಇಲಾಖೆ ಆಯುಕ್ತೆ ಕಾವೇರಿ, ಪದವಿಪೂರ್ವ ಶಿಣ ಇಲಾಖೆ ನಿರ್ದೇಶಕಿ ಸಿಂಧು, ಶಾಲಾ ಶಿಣ ಇಲಾಖೆ ಬೆಳಗಾವಿ ವಿಭಾಗದ ಅಪರ ಆಯುಕ್ತ ಜಯಶ್ರೀ ಶಿಂತ್ರಿ ಇತರರಿದ್ದರು.
ಶಿಕ್ಷಕರೇ ಜವಾಬ್ದಾರಿಯಿಂದ ಕೆಲಸ ಮಾಡಿ
Bathing : ನೀರಿನಲ್ಲಿ ಇವುಗಳನ್ನು ಬೆರೆಸಿ ಸ್ನಾನ ಮಾಡಿದ್ರೆ ಸಾಕು ಅದೃಷ್ಟ ಖುಲಾಯಿಸುತ್ತದೆ…
ಬೆಂಗಳೂರು: ಪ್ರತಿದಿನ ಸ್ನಾನ ( Bathing ) ಮಾಡುವ ಅಭ್ಯಾಸವನ್ನು ಸಾಮಾನ್ಯವಾಗಿ ಎಲ್ಲರೂ ರೂಢಿಸಿಕೊಂಡಿರುತ್ತಾರೆ. ನೀವು…
ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…
ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach ) ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…
Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..
ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan) ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…