ಶಿಕ್ಷಕರ ಕ್ರಿಯಾಶೀಲತೆಗೆ ಸಹಪಠ್ಯ ಚಟುವಟಿಕೆ ಸಹಕಾರಿ

blank

ಚಿತ್ರದುರ್ಗ: ಶಿಕ್ಷಕರಲ್ಲಿರುವ ಪ್ರತಿಭೆ, ಅವರಲ್ಲಿರುವ ಕ್ರಿಯಾಶೀಲತೆ ಹೆಚ್ಚಿಸಲು ಸಹಪಠ್ಯ ಚಟುವಟಿಕೆಗಳು ನೆರವಾಗುತ್ತವೆ ಎಂದು ಚಿತ್ತದುರ್ಗ ಬಿಇಒ ಎಸ್. ನಾಗಭೂಷಣ್ ಹೇಳಿದರು.
ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಿಂದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ನಗರದ ಮಹಾರಾಣಿ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ತಾಲೂಕು ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಿಕ್ಷಕರು ಸ್ಪರ್ಧಾ ಮನೋಭಾವ ಬೆಳೆಸಿಕೊಂಡು ವಿದ್ಯಾರ್ಥಿಗಳಲ್ಲೂ ಈ ಮನೋಭಾವ ಬೆಳೆಸಬೇಕು. ಜಿಲ್ಲಾ ಹಂತದಲ್ಲಿ ಉತ್ತಮ ಪ್ರದರ್ಶನದೊಂದಿಗೆ ರಾಜ್ಯಹಂತವನ್ನೂ ಪ್ರತಿನಿಧಿಸಬೇಕೆಂದು ಆಶಿಸಿದರು.
ನೋಡಲ್ ಅಧಿಕಾರಿ ಕೆ.ಆರ್. ಲೋಕೇಶ್ ಮಾತನಾಡಿ, ಶಿಕ್ಷಕರು ತರಗತಿ ಚಟುವಟಿಕೆಗಳಿಂದ ಹೊರಬಂದು ತಮ್ಮ ಪ್ರತಿಭೆ ಪ್ರದರ್ಶಿಸಲು ಇದು ಸೂಕ್ತ ವೇದಿಕೆ. ಶಿಕ್ಷಕರು ಇಂತಹ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಶಿಕ್ಷಕರಿಗೆ ಭಾವಗೀತೆ, ಆಶುಭಾಷಣ, ಪ್ರಬಂಧ, ಸ್ಥಳದಲ್ಲಿಯೇ ಚಿತ್ರಬರಹ, ಪಾಠೋಪಕರಣ ತಯಾರಿಕೆ, ವಿಜ್ಞಾನ ಮತ್ತು ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿದಂತೆ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ ಎಂದರು.
ಬಿಆರ್‌ಸಿ ಸಂಪತ್‌ಕುಮಾರ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಣ್ಣ, ತಾಲೂಕು ಅಧ್ಯಕ್ಷ ಬಸವರಾಜು, ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಹಂತೇಶ್, ಹನುಮಂತಪ್ಪ, ಕೆ.ಟಿ ತಿಮ್ಮಾರೆಡ್ಡಿ, ಕೆಂಚಪ್ಪ, ರಂಗೇಶ್, ರೂಪಾ, ರಂಗಸ್ವಾಮಿ, ಮಲ್ಲಿಕಾರ್ಜುನ, ಪುಷ್ಪಲತಾ, ರವೀಂದ್ರನಾಥ ಮತ್ತಿತರರಿದ್ದರು.

Share This Article

Spirituality: ಇರುವೆಗಳಿಗೆ ಆಹಾರ ನೀಡಿದರೆ ಶನಿದೇವನ ಪ್ರಭಾವ ಇರುವುದಿಲ್ಲವೇ?

Spirituality: ನಮ್ಮಲ್ಲಿರುವ ವಸ್ತು ಅಥವಾ ಯಾವುದೇ ಪದಾರ್ಥವನ್ನು ಇಲ್ಲದವರಿಗೆ ದಾನ ಮಾಡಿದರೆ ದೇವರ ಅನುಗ್ರಹ ಸದಾ…

2025ರಲ್ಲಿ ಸಾಲದ ಸುಳಿಗೆ ಸಿಲುಕಲಿದ್ದಾರಂತೆ ಈ 3 ರಾಶಿಯವರು!? ಹಣಕಾಸಿನ ವಿಚಾರದಲ್ಲಿ ಬಹಳ ಎಚ್ಚರ | Money

Money : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು…

30 ನೇ ವಯಸ್ಸಿನಲ್ಲಿಯೇ ಕೂದಲು ಬಿಳಿ ಬಣ್ಣಕ್ಕೆ ತಿರುಗುತ್ತಿದೆಯೇ? White Hair ಆಗಿದ್ರೆ ಇಲ್ಲಿದೆ ಉಪಯುಕ್ತ ಮಾಹಿತಿ

White Hair : ಇಂದಿನ ಕಾಲದಲ್ಲಿ ಜನರ ಕೂದಲು ಚಿಕ್ಕ ವಯಸ್ಸಿನಲ್ಲೇ ಬೆಳ್ಳಗಾಗುತ್ತಿದೆ. ಇನ್ನು ಕೆಲವರು…