ಶೃಂಗೇರಿ: ಶಿಕ್ಷಣ ಎಂಬುದು ಕಷ್ಟಪಟ್ಟು ಸಂಪಾದಿಸುವ ಆಸ್ತಿ. ವಿದ್ಯಾವಂತರಿಗೆ ಎಲ್ಲೆಡೆ ಗೌರವ ಇದ್ದು ಜೀವನವೂ ಉಜ್ವಲವಾಗಿರುತ್ತದೆ ಎಂದು ಜ್ಞಾನಸಮೃದ್ಧಿ ಟ್ರಸ್ಟ್‌ನ ರವಿಕುಮಾರ್ ಹೇಳಿದರು.
ಪಟ್ಟಣದ ಅಭಿನವ ವಿದ್ಯಾತೀರ್ಥ ಪ್ರೌಢಶಾಲೆಯಲ್ಲಿ ಶುಕ್ರವಾರ ಜ್ಞಾನಸಮೃದ್ಧಿ ಟ್ರಸ್ಟ್‌ನಿಂದ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಿಸಿ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಪೂರಕವಾಗಿ ಜ್ಞಾನಸಮೃದ್ಧಿ ಟ್ರಸ್ಟ್‌ನಿಂದ ನೋಟ್‌ಬುಕ್ ನೀಡಲಾಗುತ್ತಿದೆ ಎಂದು ಹೇಳಿದರು.
ಟ್ರಸ್ಟ್ ನಿರ್ದೇಶಕ ಭೀಮೇಶ್ ಮಾತನಾಡಿ, ಟ್ರಸ್ಟ್‌ನಿಂದ ಪ್ರತಿವರ್ಷ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ನೀಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳ ಪಾಲಕರಿಗೆ ಆರ್ಥಿಕ ಹೊರೆ ಕಡಿಮೆಯಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಅನಿಲ್, ದಿಶಾ, ಮಿಗಿನಕಲ್ಲು ವೆಂಕಟೇಶ್‌ಭಟ್, ಮುಖ್ಯಶಿಕ್ಷಕ ಸಂತೋಷಕುಮಾರ್, ಶಿಕ್ಷಕ ಟಿ.ಆರ್.ಕೃಷ್ಣಮೂರ್ತಿ ಇದ್ದರು.
ಶಿಕ್ಷಣದಿಂದ ಉಜ್ವಲ ಭವಿಷ್ಯ

ಒಂದು ತಿಂಗಳು ಸಕ್ಕರೆ ಮತ್ತು ಉಪ್ಪು ಬಿಟ್ಟರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? | Sugar
Sugar: ಸಾಮಾನ್ಯವಾಗಿ ಮನುಷ್ಯನ ದೇಹ ಅನಾರೋಗ್ಯಕ್ಕೊಳಗಾದಾಗ ಆಹಾರದಲ್ಲಿ ಸಕ್ಕೆರೆ ಮತ್ತು ಉಪ್ಪುನಂತಹ ಅಂಶಗಳನ್ನು ತ್ಯಜಿಸಬೇಕಾಗುತ್ತದೆ. ಇದರಿಂದ…
ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits
Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…