24.7 C
Bangalore
Sunday, December 15, 2019

ಶಿಕ್ಷಣ ಇಲಾಖೆ ಮುಡಿಗೆ ಗರಿ

Latest News

ಈರುಳ್ಳಿ ಬೆಲೆ ಏರಿಕೆಯನ್ನೇ ಬಂಡವಾಳ ಮಾಡಿಕೊಂಡು ತನ್ನ ವ್ಯಾಪಾರ ಬಲಪಡಿಸಿಕೊಳ್ಳುತ್ತಿರುವ ಬಟ್ಟೆ ಅಂಗಡಿ ಮಾಲೀಕ

ಮುಂಬೈ: ಈರುಳ್ಳಿ ಬೆಲೆ ಏರಿಕೆಯಾಗುತ್ತಿದ್ದು ಸಾಮಾನ್ಯಜನರಿಗೆ ಹೊರೆಯಾಗುತ್ತಿದೆ. ಅದನ್ನು ಕೊಳ್ಳುವವರ ಸಂಖ್ಯೆ ಕಡಿಮೆಯಾಗಿ ವ್ಯಾಪಾರಿಗಳಿಗೂ ಸಮಸ್ಯೆಯಾಗಿದೆ.ಹೀಗಿರುವಾಗ ಇದೇ ಈರುಳ್ಳಿಯನ್ನು ಇಲ್ಲೋರ್ವ ಬಟ್ಟೆ ವ್ಯಾಪಾರಿ ತನ್ನ ಉದ್ಯಮವನ್ನು...

ನೀರಿನ ಹೊಂಡಕ್ಕೆ ಬಿದ್ದ ಯುವತಿ ರಕ್ಷಣೆ ವಿಡಿಯೋ ವೈರಲ್

ವಿಜಯವಾಣಿ ಸುದ್ದಿಜಾಲ ರಾಯಚೂರು ಖಾಸಗಿ ನಿವೇಶನ ನಿರ್ಮಾಣಕ್ಕಾಗಿ ತೆಗೆದ ಗುಂಡಿಯಲ್ಲಿ ಆಯತಪ್ಪಿ ಬಿದ್ದಿದ್ದ ಬಾಲಕಿ ಯನ್ನು ಯುವಕನೊಬ್ಬ ರಕ್ಷಣೆ ಮಾಡಿದ ವಿಡಿ ಯೋ ಸಾಮಾಜಿಕ...

ವಿಶ್ವಸುಂದರಿ ವಿಜೇತೆಗೆ ಕೊನೆಯ ಪ್ರಶ್ನೋತ್ತರ ಸುತ್ತಿನಲ್ಲಿ ಕೇಳಿದ ಪ್ರಶ್ನೆಗಾಳವುವು? ಜಮೈಕಾ ಬ್ಯೂಟಿಯ ಉತ್ತರ ಹೇಗಿತ್ತು?

ಲಂಡನ್​: 2019ನೇ ಸಾಲಿನ ವಿಶ್ವಸುಂದರಿ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತೆಯಾಗುವ ಮೂಲಕ ಜಮೈಕಾದ ಟೋನಿ ಅನ್​ ಸಿಂಗ್​ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಸ್ಪರ್ಧೆಯ ಕೊನೆಯ ಪ್ರಶ್ನೋತ್ತರ...

ಶಿವಸೇನೆ ಕೈಯಲ್ಲಿರುವ ಗೃಹ ಇಲಾಖೆ ಮೇಲೆ ಎನ್​ಸಿಪಿ ಕಣ್ಣು; ಅಜಿತ್​ ಪವಾರ್​ಗೆ ಜವಾಬ್ದಾರಿ ವಹಿಸುವ ಪ್ರಯತ್ನ

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ-ಎನ್​ಸಿಪಿ-ಕಾಂಗ್ರೆಸ್​ ನೇತೃತ್ವದ ಸರ್ಕಾರ ರಚನೆಯಾಗಿದ್ದರೂ ಇನ್ನು ಸಚಿವ ಸಂಪುಟ ರಚನೆಯಾಗಿಲ್ಲ. ಸದ್ಯ ಯಾವ ಪಕ್ಷಗಳಿಗೆ ಯಾವ ಖಾತೆ ಎಂಬುದನ್ನು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ...

ಸ್ಮಾರಕದ ಮೇಲೆ ಕುಳಿತ ಪಾರಿವಾಳದಲ್ಲಿ ನೆಚ್ಚಿನ ನಟ ದಿ.ಅಂಬರೀಶ್​ ಅವರನ್ನು ಕಂಡ ಅಭಿಮಾನಿಗಳು

ಮಂಡ್ಯ: ರೆಬಲ್​ಸ್ಟಾರ್​ ದಿ.ಅಂಬರೀಶ್​ ಅವರ ಸ್ಮಾರಕವನ್ನು ಯಲಿಯೂರು ಗ್ರಾಮದಲ್ಲಿ ಪುತ್ರ ಅಭಿಷೇಕ್​ ಅಂಬರೀಶ್​ ಲೋಕಾರ್ಪಣೆ ಮಾಡಿದರು. ಮಂಡ್ಯ ತಾಲೂಕಿನ ಯಲಿಯೂರು ಗ್ರಾಮದಲ್ಲಿ ಅಭಿಮಾನಿಗಳು ದಿ....

ಕುಮಟಾ: ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಕೊಂಕಣ ಎಜುಕೇಶನ್ ಟ್ರಸ್ಟ್ ವಿದ್ಯಾರ್ಥಿನಿ ಕಾಗಾಲದ ಹುಬ್ಬಣಗೇರಿ ಗ್ರಾಮದ ನಾಗಾಂಜಲಿ ಪರಮೇಶ್ವರ ನಾಯ್ಕ ಮನೆಗೆ ಬುಧವಾರ ಭೇಟಿ ನೀಡಿದ ಕಾರವಾರ ಡಿಡಿಪಿಐ ಕೆ. ಮಂಜುನಾಥ, ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ ನಾಯ್ಕ ಹಾಗೂ ಜಿಲ್ಲಾಧಿಕಾರಿ ಪರವಾಗಿ ಉಪವಿಭಾಗಾಧಿಕಾರಿ ಪ್ರೀತಿ ಗೆಹ್ಲೋಟ್ ಸನ್ಮಾನಿಸಿ, ಅಭಿನಂದಿಸಿದರು.

ಡಿಡಿಪಿಐ ಕೆ. ಮಂಜುನಾಥ ಮಾತನಾಡಿ, ‘ನಾಗಾಂಜಲಿ ನಾಯ್ಕ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಬಂದಿರುವುದು ಶಿಕ್ಷಣ ಇಲಾಖೆಯ ಮುಡಿಗೆ ಗರಿ ಏರಿದೆ. ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ 4ನೇ ಸ್ಥಾನದಲ್ಲಿದೆ. ಇಲಾಖೆಯಲ್ಲಿ ಸಾಧನೆಯಿಂದ ಶಿಕ್ಷಣದ ಗುಣಮಟ್ಟದ ಪರಿಚಯವಾಗುತ್ತದೆ. ಸರ್ಕಾರಿ ಶಾಲೆಗಳಲ್ಲಿಯೂ ಮಕ್ಕಳು ಕಲಿತು ಉತ್ತಮ ಸಾಧನೆ ಮಾಡುತ್ತಾರೆ. ಸಿವಿಎಸ್​ಕೆ ಪ್ರೌಢಶಾಲೆಯಲ್ಲಿ ಉಳಿದ 6 ವಿದ್ಯಾರ್ಥಿಗಳು ಕೂಡಾ ಉನ್ನತ ಸಾಧನೆ ಮಾಡಿದ್ದಾರೆ. ಹೊರ ಜಿಲ್ಲೆಗಳಿಗೆ ಹೋಗಿ ಕಲಿಯುವ ವಿದ್ಯಾರ್ಥಿಗಳಿಗೆ ನಾಗಾಂಜಲಿ ಒಂದು ಮಾದರಿ’ ಎಂದರು.

ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ ನಾಯ್ಕ ಮಾತನಾಡಿ, ‘ನಾಗಾಂಜಲಿಯ ಸಾಧನೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ. ಕೊಂಕಣ ಶಿಕ್ಷಣ ಸಂಸ್ಥೆಗೆ, ಶಿಕ್ಷಕರಿಗೆ ಇಲಾಖೆಯ ಪರವಾಗಿ ಶುಭ ಕೋರುತ್ತೇನೆ’ ಎಂದರು.

ಐಡಿಯಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿ.ಎಂ. ಮಲ್ಲಿಕ್ ಮಾತನಾಡಿ, ‘ನಾಗಾಂಜಲಿ ನಾಯ್ಕ ನಮ್ಮ ಐಡಿಯಲ್ ಶಾಲೆಯಲ್ಲಿ 3 ರಿಂದ 6ನೇ ತರಗತಿವರೆಗೆ ವ್ಯಾಸಂಗ ಮಾಡಿದ್ದು ಅವಳಲ್ಲಿ ಉನ್ನತ ಸಾಧನೆಯ ಕುರುಹುಗಳಿದ್ದವು’ ಎಂದು ಅಭಿಮಾನ ವ್ಯಕ್ತಪಡಿಸಿದರು.

ಗಜಾನನ ಗುನಗ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಅಧಿಕಾರಿಗಳು, ನಾಮಧಾರಿ ಸಮಾಜ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ನಾಗಾಂಜಲಿ ಅವರನ್ನು ಅಭಿನಂದಿಸಿದರು. ಶಿಕ್ಷಣ ಇಲಾಖೆ ಅಧಿಕಾರಿ ಎನ್. ಜಿ. ನಾಯ್ಕ, ಜಯಶ್ರೀ, ಐಡಿಯಲ್ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಮುಜಫರ್ ಶೇಖ್, ನಾಗೇಶ ನಾಯ್ಕ, ಆರ್.ಎಚ್. ನಾಯ್ಕ, ಸದಾನಂದ ಹರಿಕಂತ್ರ ಇನ್ನಿತರರು ಇದ್ದರು.

ಭವಿಷ್ಯ ಮತ್ತಷ್ಟು ಉಜ್ವಲವಾಗಲಿ
ಎಸ್​ಎಸ್​ಎಲ್​ಸಿಯಲ್ಲಿ ರಾಜ್ಯಕ್ಕೆ ಟಾಪರ್ ಆಗಿರುವ ನಾಗಾಂಜಲಿ ಅವರನ್ನು ಜಿಲ್ಲಾಧಿಕಾರಿ ಡಾ. ಹರೀಶಕುಮಾರ್ ಕೆ. ಅಭಿನಂದಿಸಿದ್ದಾರೆ. ‘ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿರುವ ತಮಗೆ ಜಿಲ್ಲಾಡಳಿತ ಅಭಿನಂದಿಸುತ್ತದೆ. ತಮ್ಮ ಭವಿಷ್ಯ ಮತ್ತಷ್ಟು ಉಜ್ವಲವಾಗಲಿ’ ಎಂದು ಅವರು ಬುಧವಾರ ದೂರವಾಣಿ ಮೂಲಕ ಅಭಿನಂದಿಸಿದ್ದಾರೆ. ಸಂಸದ ಅನಂತಕುಮಾರ ಹೆಗಡೆ ಅವರು ನಾಗಾಂಜಲಿಗೆ ದೂರವಾಣಿ ಮೂಲಕ ಸಂರ್ಪಸಿ ಅಭಿನಂದಿಸಿದ್ದಾರೆ.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...