More

  ಶಿರಸಿಯಲ್ಲಿ ಫಲಪುಷ್ಪ ಪ್ರದರ್ಶನ ಫೆ. 1ರಿಂದ

  ವಿಜಯವಾಣಿ ಸುದ್ದಿಜಾಲ ಶಿರಸಿ: ತೋಟಗಾರಿಕೆ, ಕೃಷಿ ಬೆಳೆಗಳಿಗೆ ಪ್ರೋತ್ಸಾಹದ ಜತೆಗೆ ಪುಷ್ಪ ಉದ್ಯಮದತ್ತ ಬೆಳೆಗಾರರನ್ನು ಆಕರ್ಷಿಸುವ ಉದ್ದೇಶ ದಿಂದ ನಗರದ ತೋಟಗಾರಿಕೆ ಉಪ ನಿರ್ದೇಶಕರ ಕಚೇರಿ ಆವರಣದಲ್ಲಿ ಫೆ. 1ರಿಂದ 3ರವರೆಗೆ ಜಿಲ್ಲಾಮಟ್ಟದ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಸತೀಶ ಹೆಗಡೆ ಹೇಳಿದರು.

  ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ ಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲಾ ಪಂಚಾಯಿತಿ, ತೋಟಗಾರಿಕೆ, ಕೃಷಿ, ಆತ್ಮ ಯೋಜನೆ, ತೋಟಗಾರಿಕೆ ಕಾಲೇಜ್, ಕೃಷಿ ವಿಜ್ಞಾನ ಕೇಂದ್ರದ ಆಶ್ರಯದಲ್ಲಿ ಕಾರ್ಯಕ್ರಮ ಸಂಘಟಿಸಲಾಗಿದೆ. 3 ದಿನಗಳ ಫಲಪುಷ್ಪ ಹಬ್ಬದಲ್ಲಿ ವಿಶೇಷ ಆಕರ್ಷಣೆಯಾಗಿ ಕಮಲ್ ಮಹಲ್, ಅನಾನಸ್- ಅಡಕೆ ಮಂಟಪ, ಚಂದ್ರಯಾನ-3, ಹೂವಿನಿಂದ ತಯಾರಿಸಿದ ಪಕ್ಷಿ ಸಂಕುಲ, ಹೂವಿನ ಜೋಡಣೆ, ತರಕಾರಿ ಕೆತ್ತನೆ, ತರಕಾರಿ ಪ್ರಾತ್ಯಕ್ಷಿಕೆ ಪ್ರದರ್ಶನಕ್ಕೆ ಇಡಲಾಗುವುದು ಎಂದರು.

  ವಿವಿಧ ಜಾತಿಯ ಹೂವಿನ ಬೆಳೆಗಳನ್ನು ಪರಿಚಯಿಸಲಾಗುವುದು. ಫೆ 1ರಂದು ಬೆಳಗ್ಗೆ 8 ಗಂಟೆಗೆ ಪುಷ್ಪರಂಗೋಲಿ ಸ್ಪರ್ಧೆ ಆಯೋಜಿಸಲಾಗಿದೆ. 70ಕ್ಕೂ ಹೆಚ್ಚು ಮಳಿಗೆ ತೆರೆಯಲಾಗುವುದು ಎಂದರು.

  ಸಹಾಯಕ ಕೃಷಿ ನಿರ್ದೇಶಕ ಮಧುಕರ ನಾಯ್ಕ, ತೋಟಗಾರಿಕೆ ಕಾಲೇಜ್​ನ ಶಿವಕುಮಾರ, ಪ್ರಸನ್ನ, ಗಣೇಶ ಹೆಗಡೆ, ವಿ.ಎಂ. ಹೆಗಡೆ ಇದ್ದರು.

  ಉದ್ಘಾಟನೆ: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಫೆ. 1ರ ಬೆಳಗ್ಗೆ 11.30ಕ್ಕೆ ಫಲಪುಷ್ಪ ಪ್ರದರ್ಶನ ಉದ್ಘಾಟಿಸುವರು. ಶಾಸಕ ಶಿವರಾಮ ಹೆಬ್ಬಾರ ಅಧ್ಯಕ್ಷತೆ ವಹಿಸುವರು. ಜಿಪಂ ಅಧ್ಯಕ್ಷೆ ಜಯಶ್ರೀ ಮೊಗೇರ, ವಾಕರಸಾ ಸಂಸ್ಥೆ ಅಧ್ಯಕ್ಷ ವಿ.ಎಸ್. ಪಾಟೀಲ, ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಅಶೀಸರ, ಶಾಸಕ ಆರ್.ವಿ. ದೇಶಪಾಂಡೆ, ದಿನಕರ ಶೆಟ್ಟಿ, ಸುನೀಲ ನಾಯ್ಕ, ರೂಪಾಲಿ ನಾಯ್ಕ, ಶಿರಸಿ ತಾಪಂ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಜಿಪಂ ಸದಸ್ಯ ಬಸವರಾಜ ದೊಡ್ಮನಿ, ಉಷಾ ಹೆಗಡೆ, ರೂಪಾ ನಾಯ್ಕ, ಪ್ರಭಾವತಿ ಗೌಡ, ಜಿ.ಎನ್. ಹೆಗಡೆ ಪಾಲ್ಗೊಳ್ಳಲಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts