26.8 C
Bangalore
Friday, December 13, 2019

ಶಿರಸಿ ತಾಲೂಕಿನ ಶೇ.40ಕ್ಕಿಂತ ಹೆಚ್ಚಿನ ತೋಟಗಳಲ್ಲಿ ಅಡಕೆ ಬೆಳೆಗೆ ಕೊಳೆ

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಶಿರಸಿ: ಆಗಸ್ಟ್ ತಿಂಗಳಿನಲ್ಲಿ ಸುರಿದ ಭರ್ಜರಿ ಮಳೆಗೆ ತಾಲೂಕಿನಲ್ಲಿ ಅಡಕೆ ಬೆಳೆ ನೆಲಕಚ್ಚಿದೆ. ಕಂದಾಯ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಸಮೀಕ್ಷೆ ನಡೆಸಿ 6600 ಹೆಕ್ಟೇರ್ ಪ್ರದೇಶದಲ್ಲಿ ಶೇ.40ಕ್ಕಿಂತ ಅಧಿಕ ಬೆಳೆ ಕೊಳೆರೋಗದಿಂದಾಗಿ ಉದುರಿರುವುದನ್ನು ದಾಖಲಿಸಿದೆ.

ತಾಲೂಕಿನಲ್ಲಿ ಅಡಕೆ ಪ್ರಧಾನ ಬೆಳೆ. ಇಲ್ಲಿಯ 8457 ಹೆಕ್ಟೇರ್ ಪ್ರದೇಶದಲ್ಲಿ ಅಡಕೆ ಬೆಳೆ ಬೆಳೆಯಲಾಗುತ್ತಿದೆ. ಇವುಗಳಲ್ಲಿ 1857 ಹೆಕ್ಟೇರ್ ಪ್ರದೇಶದಲ್ಲಿ ಹೊಸದಾಗಿ ಅಡಕೆ ಗಿಡ ನೆಡಲಾಗಿದ್ದು, ಇನ್ನೂ ಫಸಲಿಗೆ ಬಂದಿಲ್ಲ. 6600 ಹೆಕ್ಟೇರ್ ಪ್ರದೇಶದಲ್ಲಿ ಫಲಭರಿತ ತೋಟವಿದ್ದು, ಎಲ್ಲ ಕಡೆಗಳಲ್ಲಿಯೂ ಕೊಳೆ ರೋಗ ಕಾಣಿಸಿಕೊಂಡಿದೆ.

ಆ.6ರಿಂದ 11ರವೆರೆಗೆ ಸುರಿದ ಮಳೆಯಿಂದಾಗಿ ಏಕ ಕಾಲಕ್ಕೆ ಎಲ್ಲೆಡೆ ಕೊಳೆ ಆರಂಭಗೊಂಡಿವೆ. ಸಂಪಖಂಡ ಮತ್ತು ಹುಲೇಕಲ್ ಹೋಬಳಿಯಲ್ಲಿ ಅಡಕೆ ಕೊಳೆ ರೋಗ ತೀವ್ರವಾಗಿದೆ. ಇಲ್ಲಿಯ ದೇವನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಹುತೇಕ ಎಲ್ಲ ಅಡಕೆ ಮರಗಳಲ್ಲಿಯೂ ಕೊಳೆ ರೋಗವಿದೆ. ಬಲವಳ್ಳಿ, ಮತ್ತಿಗಾರ, ನೇರ್ಲವಳ್ಳಿ ಭಾಗದಲ್ಲಿಯೂ ರೋಗದ ಪ್ರಭಾವ ತೀವ್ರವಾಗಿದೆ. ಹುಲೇಕಲ್ ಮತ್ತು ಸಂಪಖಂಡಕ್ಕೆ ಹೋಲಿಸಿದರೆ ಬನವಾಸಿ ಹೋಬಳಿಯ ರೈತರ ಸ್ಥಿತಿ ಸ್ವಲ್ಪ ವಾಸಿ. ಇಲ್ಲಿ ಶೇ.34ರಿಂದ 38ರವರೆಗೆ ಅಡಕೆ ಬೆಳೆ ಹಾನಿಯಾಗಿದೆ.

ತಾಲೂಕಿನ ಎಲ್ಲ 32 ಗ್ರಾಮ ಪಂಚಾಯಿತಿಗಳಲ್ಲಿ ಕಂದಾಯ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಜಂಟಿಯಾಗಿ ಅಡಕೆ ಕೊಳೆ ಹಾನಿಯ ಸಮೀಕ್ಷೆ ನಡೆಸಿದ್ದು, ಕಳೆದವಾರ ಈ ಕಾರ್ಯ ಪೂರ್ಣಗೊಂಡಿದೆ. ತಾಲೂಕಿನಲ್ಲಿ ಒಟ್ಟು 113 ಕೋಟಿ ರೂ. ಅಡಕೆ ಬೆಳೆ ಹಾನಿ ಆಗಿದೆ ಎಂದು ವರದಿ ಸಿದ್ಧಪಡಿಸಲಾಗಿದೆ. ಬೆಳೆಹಾನಿಯ ಮಾಹಿತಿಯನ್ನು ಜಿಲ್ಲಾಧಿಕಾರಿಗೆ ಈಗಾಗಲೇ ಸಲ್ಲಿಸಲಾಗಿದೆ. ಪರಿಹಾರ ತಂತ್ರಾಂಶಕ್ಕೆ ಹಾನಿಯ ಮಾಹಿತಿ, ರೈತರ ಮಾಹಿತಿಯನ್ನು ಅಪ್​ಲೋಡ್ ಮಾಡುವ ಪ್ರಕ್ರಿಯೆ ಈಗ ಚಾಲನೆಯಲ್ಲಿದೆ.

ಡಬಲ್ ಹಾನಿ: ಈ ವರ್ಷ ತಾಲೂಕಿನ ಅಡಕೆ ಬೆಳೆಗಾರರು ಎರಡು ರೀತಿಯಲ್ಲಿ ಹಾನಿ ಅನುಭವಿಸಿದ್ದಾರೆ. ಏಪ್ರಿಲ್, ಮೇ ತಿಂಗಳಿನಲ್ಲಿ ಮಳೆಯಾಗದ ಕಾರಣ ಅಡಕೆ ಸಿಂಗಾರ ಒಣಗಿ ಮೊದಲ ಹಂತದಲ್ಲಿ ಹಾನಿ ಅನುಭವಿಸಿದ್ದಾರೆ. ಅಂತೂ ಉಳಿದುಕೊಂಡ ಅಡಕೆ ಕಾಯಿ ಆಗಸ್ಟ್ ಮಳೆಗೆ ಕೊಳೆ ರೂಪದಲ್ಲಿ ಆಹುತಿಯಾಗಿದೆ.

ತಾಲೂಕಿನಲ್ಲಿ 113 ಕೋಟಿ ರೂ. ಅಡಕೆ ಬೆಳೆ ಹಾನಿಯಾಗಿದ್ದರೂ ಪರಿಹಾರದ ಮಾನದಂಡಗಳ ಪ್ರಕಾರ 11 ಕೋಟಿ ರೂ. ಮಾತ್ರ ರೈತರಿಗೆ ಲಭಿಸಲಿದೆ. ಪ್ರತಿ ಗುಂಟೆಗೆ 180 ರೂ. ಪರಿಹಾರ ನೀಡಲಾಗುತ್ತಿದ್ದು, ರೈತರು ಅಷ್ಟರಲ್ಲೇ ತೃಪ್ತಿಪಟ್ಟುಕೊಳ್ಳಬೇಕಿದೆ.

ಮರ ಸಾಯುವ ಆತಂಕ: ಆಗಸ್ಟ್ ತಿಂಗಳಲ್ಲಿ ಮಳೆ ಜೋರಾಗಿ ಸುರಿದರೂ ಆ ಬಳಿಕ ಕೆಲ ದಿನಗಳ ಕಾಲ ಸಂಪೂರ್ಣವಾಗಿ ನಿಂತಿತ್ತು. ರೈತರಲ್ಲಿ ಅಲ್ಪ ಸಮಾಧಾನ ತಂದಿತ್ತು. ಕೊಳೆ ರೋಗ ನಿಯಂತ್ರಣಕ್ಕೆ ಬಂದಿತ್ತು. ಆದರೆ, ಕಳೆದ ನಾಲ್ಕು ದಿನಗಳಿಂದ ತಾಲೂಕಿನಲ್ಲಿ ಸುರಿಯುತ್ತಿರುವ ಮಳೆಗೆ ಮತ್ತೆ ಕೊಳೆ ರೋಗ ಕಾಣಿಸಿಕೊಂಡಿದ್ದು, ಅಡಕೆ ಮರಗಳೇ ಸಾವಿಗೀಡಾಗುವ ಆತಂಕದಲ್ಲಿ ರೈತರಿದ್ದಾರೆ.

ಆಗಸ್ಟ್ ತಿಂಗಳಿನಲ್ಲಿಯೇ ಕೊಳೆ ಕಾಣಿಸಿಕೊಂಡಿದ್ದರಿಂದ ಈ ಮಳೆಗೆ ಮತ್ತೆ ಜೋರಾಗಲಿದೆ. ಆದರೆ, ಈ ವೇಳೆ ರೆಡೋಮಿಲ್ ದ್ರಾವಣವನ್ನು ಸಿಂಪಡಿಸಿಕೊಂಡು ಒಂದು ವಾರದ ಬಳಿಕ ಬೋಡೋ ಸಿಂಪಡಿಸಿದರಷ್ಟೇ ಕೊಳೆ ರೋಗ ನಿಯಂತ್ರಣ ಮಾಡಬಹುದಾಗಿದೆ. | ಸತೀಶ ಹೆಗಡೆ, ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ, ಶಿರಸಿ.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....