25.5 C
Bangalore
Monday, December 16, 2019

ಶಿವಮೊಗ್ಗದಲ್ಲಿ ಮಳೆ, ಹೊನ್ನಾವರದಲ್ಲಿ ನೆರೆ

Latest News

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಮುಸ್ಲಿಂರಿಂದ ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ

* ಸಾಮರಸ್ಯಕ್ಕೆ ಮುನ್ನುಡಿ ಬರೆದ ಕಾರ್ಯಕ್ರಮವಿಜಯವಾಣಿ ಸುದ್ದಿಜಾಲ ಬಳ್ಳಾರಿನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ...

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

ವಿಜಯವಾಣಿ ಸುದ್ದಿಜಾಲ ಹೊನ್ನಾವರ: ಶಿವಮೊಗ್ಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಲಿಂಗನಮಕ್ಕಿ ಮತ್ತು ಗೇರುಸೊಪ್ಪಾ ಜಲಾಶಯದಿಂದ ಗುರುವಾರ ನೀರು ಹೊರ ಬಿಡಲಾಗಿದ್ದು, ಶರಾವತಿ ನದಿ ತೀರದ ತಗ್ಗು ಪ್ರದೇಶ ಜಲಾವೃತಗೊಂಡಿದೆ. ಮಳೆ ಮುಂದುವರಿದಿದ್ದು, ನದಿ ತೀರದ ಜನರು ಆತಂಕದ ಭೀತಿಯಲ್ಲೇ ದಿನದೂಡುತ್ತಿದ್ದಾರೆ.

- Advertisement -

ಶರಾವತಿ ನದಿಯ ಎಡ ಹಾಗೂ ಬಲ ದಂಡೆಯ 35 ಕಿ.ಮೀ. ಉದ್ದದ ಪ್ರದೇಶದಲ್ಲಿ ನೀರು ಮೂರು ಪಟ್ಟು ವಿಸ್ತೀರ್ಣಗೊಂಡು ಹರಿಯುತ್ತಿದೆ. ನಗರಬಸ್ತಿಕೇರಿ, ಕೊಡಾಣಿ, ಬಳಕೂರು, ಮಾಗೋಡ, ಉಪೋ›ಣಿ ಭಾಗದಲ್ಲಿ ರಸ್ತೆಯ ಮೇಲೆ ನೀರು ಹರಿದಿದೆ. ನದಿ ಉಕ್ಕಿ ಹರಿಯುತ್ತಿದ್ದು ಸಮುದ್ರ ಸೇರುವಲ್ಲಿ ತಡೆಯುಂಟಾಗಿ ಸಮುದ್ರಕ್ಕೆ ಹತ್ತಿರವಿರುವ ಮಾವಿನಕುರ್ವಾ, ಕಳಸನಮೋಟೆ, ಕಾಸರಕೋಡು ಮೊದಲಾದ ಗ್ರಾಮಗಳಲ್ಲಿಯೂ ನೀರು ಶೇಖರಣೆಯಾಗಿದೆ.

ಶರಾವತಿ ನದಿ ತೀರದ ತಗ್ಗು ಪ್ರದೇಶದ ಹಲವು ಗ್ರಾಮಗಳ ಮನೆಗಳಿಗೆ ನೀರು ನುಗ್ಗಿದೆ. ಮತ್ತಷ್ಟು ಗ್ರಾಮಗಳಿಗೆ ವ್ಯಾಪಿಸುವ ಮುನ್ಸೂಚನೆ ಇದೆ. ಅನಿಲಗೋಡ, ಮೂರ್ನಕುಳಿ, ಹೈಗುಂದ, ಹೊಸಾಡ ಶಾಲೆಗಳಲ್ಲಿ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 89 ಕುಟುಂಬಗಳ 199 ಜನರು ಆಶ್ರಯ ಪಡೆದಿದ್ದಾರೆ. ಪರಿಹಾರ ಕೇಂದ್ರಗಳಲ್ಲಿ ತಾಲೂಕು ಆಡಳಿತ ಸಕಲ ವ್ಯವಸ್ಥೆ ಕಲ್ಪಿಸಿದೆ.

ಜಲಾಶಯದಿಂದ ಬಿಟ್ಟ ನೀರಿನಿಂದ ಗುಂಡಬಾಳ ನದಿಯಲ್ಲಿಯೂ ನೆರೆ ಉಂಟಾಗಿದೆ. ಈ ನದಿ ತೀರದ ನಾಥಗೇರಿ, ಕಾವೂರು, ಹಡಿನಬಾಳ, ಮುಟ್ಟಾ ಚಿಕ್ಕನಕೋಡು ಗ್ರಾಮಗಳಲ್ಲಿ ನೀರು ನುಗ್ಗಿದೆ. ನೆರೆಯ ಪರಿಸ್ಥಿತಿ ನಿಭಾಯಿಸಲು ಉಪವಿಭಾಗಾಧಿಕಾರಿಗಳು, ತಹಸೀಲ್ದಾರ್, ನೋಡಲ್ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ತಂಡ ಕಾರ್ಯಪ್ರವೃತ್ತರಾಗಿದ್ದು, ನೆರೆ ಸ್ಥಳಗಳಿಗೆ ನಿರಂತರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಗುರುವಾರ ಮಧ್ಯಾಹ್ನ 3 ಗಂಟೆಗೆ ಲಿಂಗನಮಕ್ಕಿ ಜಲಮಟ್ಟ 1818.65 ಅಡಿಗೆ ಇಳಿದಿದೆ. ಒಳಹರಿವು 46,372 ಕ್ಯೂಸೆಕ್, ವಿದ್ಯುತ್ ಉತ್ಪಾದಿಸಿ ಒಟ್ಟು 71,350 ಕ್ಯೂಸೆಕ್ ನೀರು ಹೊರಬಂದು ಗೇರುಸೊಪ್ಪಾ ಜಲಾಶಯವನ್ನು ತುಂಬಿಕೊಳ್ಳುತ್ತಿದೆ. ಗೇರುಸೊಪ್ಪಾ ಅಣೆಕಟ್ಟಿನ ಜಲಮಟ್ಟ 49.22 ಮೀಟರ್ ಏರಿದೆ. ಮಳೆ ನೀರು ಸೇರಿ ತಾಸಿಗೆ 68,015 ಕ್ಯೂಸೆಕ್ ನೀರು ಒಳಹರಿವಾಗಿದೆ. 4 ಘಟಕಗಳಲ್ಲಿ ವಿದ್ಯುತ್ ಉತ್ಪಾದಿಸಿ 63,028 ಕ್ಯೂಸೆಕ್ ನೀರು ಶರಾವತಿ ಸೇರುತ್ತಿತ್ತು. ನಂತರ 4 ಗಂಟೆಗೆ ಲಿಂಗನಮಕ್ಕಿ ಜಲಮಟ್ಟ 1818.60ಕ್ಕೆ ಬಂದಿದ್ದರೂ. ಒಳಹರಿವು 45,801ಕ್ಯೂಸೆಕ್, ಹೊರಹರಿವು 67,800 ಕ್ಯೂಸೆಕ್ ಇದೆ. ಗೇರುಸೊಪ್ಪಾ ಅಣೆಕಟ್ಟಿನ ಜಲಮಟ್ಟ 49.45 ಮೀಟರ್ ಒಳಹರಿವು ಪ್ರತಿ ಗಂಟೆಗೆ 69,053 ಕ್ಯೂಸೆಕ್ ಇದೆ. 3 ಯುನಿಟ್ ವಿದ್ಯುತ್ ಉತ್ಪಾದಿಸಿ ಒಟ್ಟು ಬಿಡುವ ಪ್ರಮಾಣವನ್ನು ಕಡಿಮೆ ಮಾಡಿದ್ದು 57,592 ಕ್ಯೂಸೆಕ್ ನೀರು ಶರಾವತಿ ನದಿಯನ್ನು ಸೇರುತ್ತಿದೆ.

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...