ಶಿವಾಜಿ ಜಯಂತ್ಯುತ್ಸವ

ಸಾಗರ: ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವವನ್ನು ಮಾ. 23ರಂದು ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವಹಿಂದು ಪರಿಷತ್ ತಾಲೂಕು ಅಧ್ಯಕ್ಷ ಐ.ವಿ.ಹೆಗಡೆ ತಿಳಿಸಿದರು.

ಮಧ್ಯಾಹ್ನ 3ಕ್ಕೆ ಮಹಾಗಣಪತಿ ದೇವಸ್ಥಾನದಿಂದ ಶೋಭಾಯಾತ್ರೆ ಹೊರಡಲಿದೆ. ನಗರದ ಪ್ರಮುಖ ಬೀದಿಗಳಲ್ಲಿ ವಿವಿಧ ಕಲಾತಂಡಗಳೊಂದಿಗೆ ಶೋಭಾಯಾತ್ರೆ ನಡೆಯಲಿದೆ. ಸಂಜೆ 5ಕ್ಕೆ ಗಾಂಧಿ ಮೈದಾನದಲ್ಲಿ ನಡೆಯುವ ಧಾರ್ವಿುಕ ಕಾರ್ಯಕ್ರಮದ ಸಾನ್ನಿಧ್ಯವನ್ನು ಕಲಬುರ್ಗಿ ಆಂದೋಲ ಶ್ರೀ ಕರುಣೇಶ್ವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ವಹಿಸಲಿದ್ದಾರೆ. ಶಬರಿಮಲೆ ಸಂರಕ್ಷಣಾ ಸಮಿತಿ ರಾಜ್ಯ ಕಾರ್ಯದರ್ಶಿ ವಿನಯ್ ಬಿದ್ರೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಬಜರಂಗದಳದ ಜಿಲ್ಲಾಧ್ಯಕ್ಷ ರಮೇಶ್​ಬಾಬು, ತಾಲೂಕು ಅಧ್ಯಕ್ಷ ಐ.ವಿ.ಹೆಗಡೆ ಉಪಸ್ಥಿತರಿರುವರು ಎಂದರು.

ವಿಶ್ವ ಹಿಂದು ಪರಿಷತ್ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರಭಟ್ ಮಾತನಾಡಿ, ಶಿವಾಜಿ ಮಹಾರಾಜರ 389ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ನಡೆಸಲಾಗಿದೆ ಎಂದರು.

1630ರಲ್ಲಿ ಜನಿಸಿದ ಶಿವಾಜಿ ಮಹಾರಾಜರು 1675ರಲ್ಲಿ ಪಟ್ಟಾಭಿಷೇಕಗೊಂಡರು. ನಂತರ ಅವರು ಹಿಂದು ರಾಷ್ಟ್ರ ನಿರ್ವಣಕ್ಕೆ ತಮ್ಮದೆ ಆದ ಕೊಡುಗೆ ನೀಡಿದ್ದಾರೆ. ಶಿವಾಜಿ ಮಹಾರಾಜರ ಇತಿಹಾಸವನ್ನು ಸ್ವಾತಂತ್ರ್ಯ ನಂತರ ಮರೆಯುವ ಕೆಲಸವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂತಹ ಜಯಂತ್ಯುತ್ಸವ ಪ್ರಮುಖವಾಗಿ ಜನರ ಗಮನ ಸೆಳೆಯುವ ಕೆಲಸ ಮಾಡಲಿದೆ ಎಂದರು. ಕುಮಾರ್, ನಿತೀಶ್, ಮುರುಳಿ ಮಂಚಾಲೆ, ಸಂತೋಷ್ ಶಿವಾಜಿ, ಹರೀಶ್, ಕಿರಣ್, ಮಂಜುನಾಥ್ ಇದ್ದರು.

Leave a Reply

Your email address will not be published. Required fields are marked *